4 ದಿನ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ

By Web DeskFirst Published Jun 30, 2019, 11:26 AM IST
Highlights

ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಬೆಂಗಳೂರು [ಜೂ.30] :  ರಾಜ್ಯದ ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಜುಲೈ 3ವರೆಗೂ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡು ಹೊರತುಪಡಿಸಿ ಉಳಿದೆಲ್ಲ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿದ್ದು, ಸಾಧಾರಣ ಮಳೆಯಾಗಲಿದೆ. ಜುಲೈ 3 ನಂತರವೂ ಕರಾವಳಿ ಹಾಗೂ ಘಟ್ಟಪ್ರದೇಶದಲ್ಲಿ ಮಳೆ ಮುಂದುವರೆಯಲಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ  ತಿಳಿಸಿದ್ದಾರೆ. 

ಶನಿವಾರ ಉತ್ತರ ಒಳನಾಡು ಹಾಗೂ ಮಲೆನಾಡು ಘಟ್ಟಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಬೀದರ್‌, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 65 ಮಿ.ಮೀ.ನಿಂದ 125 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

click me!