ರಾಜ್ಯದಲ್ಲಿ ಹವಾಮಾನ ಇಲಾಖೆ ಮತ್ತೊಮ್ಮೆ ಅಲರ್ಟ್ ನೀಡಿದ. ಮತ್ತೆ ಐದು ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಸೂಚನೆಯನ್ನು ನೀಡಿದೆ.
ಬೆಂಗಳೂರು(ಆ.16): ರಾಜ್ಯದಲ್ಲಿ ಕೆಲದಿನಗಳ ಹಿಂದಷ್ಟೇ ಬಾರಿ ಮಳೆಯಾಗಿದ್ದು ಇದೀಗ ಮತ್ತೊಮ್ಮೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಉಡುಪಿ, ದಕ್ಷಿಣ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನ (ಆ.20ರವರೆಗೆ) ಭಾರೀ ಮಳೆಯಾಗುವ ಲಕ್ಷಣವಿರುವುದರಿಂದ ಕರಾವಳಿ ಭಾಗಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಮತ್ತೆ ರಾಜ್ಯದಲ್ಲಿ ಭಾರಿ ಮಳೆ : ಎಷ್ಟು ದಿನ ಅಲರ್ಟ್ ? ..
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಆ. 16 ರಂದು ‘ಯೆಲ್ಲೋ ಅಲರ್ಟ್’ನ ಎಚ್ಚರಿಕೆ ನೀಡಲಾಗಿದೆ.
ಕಾರವಾರ: ಭಾರಿ ಮಳೆಗೆ ಕರಾವಳಿಯಲ್ಲಿ 3202 ಮೀ. ಕಡಲ್ಕೊರೆತ .
ಹೆಚ್ಚು ಗಾಳಿ ಬೀಸಲಿದ್ದು, ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಜೊತೆಗೆ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.