ಉಡುಪಿ ಜಿಲ್ಲೆಯಲ್ಲಿ ಕಳೆದ 38 ವರ್ಷಗಳಲ್ಲಿ ದಾಖಲೆ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ತತ್ತರಿಸಿದ್ದು, ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಗುಡ್ಡವೊಂದು ಕುಸಿದಿದ್ದು ಕಟ್ಟಡ ಅಪಾಯದ ಸ್ಥಿತಿಯಲ್ಲಿದೆ.
ಮಣಿಪಾಲ (ಸೆ.22): ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಇಲ್ಲಿನ ಬಹುಮಹಡಿ ವಸತಿ ಸಮುಚ್ಛಯದ ಹಿಂಬದಿಯ ಗುಡ್ಡ ಕುಸಿದು, ಕಟ್ಟಡದ ತಡೆಗೋಡೆ ಬಿದ್ದಿದೆ. ಇದರಿಂದ ಕಟ್ಟಡಕ್ಕೆ ಅಪಾಯವಾಗುವ ಆತಂಕ ಉಂಟಾಗಿದೆ.
ಎಂಟು ಮಹಡಿಯ ವಸತಿ ಸಮುಚ್ಛಯದಲ್ಲಿ 32 ವಸತಿಗೃಹಗಳಿದ್ದು, ಪ್ರಸ್ತುತ ಅದರಲ್ಲಿ ಕೆಲವೇ ವಸತಿಗೃಹಗಳಲ್ಲಿ 25 ಮಂದಿ ಮಾತ್ರ ವಾಸಿಸುತ್ತಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಅವರನ್ನು ಬೇರೆಡೆಗೆ ತೆರಳುವುದಕ್ಕೆ ಅಧಿಕಾರಿಗಳು ಸೂಚಿಸಿದ್ದಾರೆ.
undefined
ಬೆಳಗಾವಿಯಲ್ಲಿ ಭಾರೀ ಮಳೆ; ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ
ಇಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯವಾಗ ಹೆದ್ದಾರಿಯ ಮಳೆನೀರು ಈ ಕಟ್ಟಡದ ಪಕ್ಕದಲ್ಲಿ ಹರಿಯುವಂತೆ ಮಾಡಲಾಗಿದ್ದು, ಇದರಿಂದ ಈ ತಡೆಗೋಡೆ ಕುಸಿದಿದೆ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಟ್ಟಡವನ್ನು ಸೂಕ್ತ ರೀತಿಯಲ್ಲಿ ಕಟ್ಟಿಲ್ಲ ಎಂದು ನಗರಸಭೆ ಮಾಲೀಕರಿಗೆ ನೋಟಿಸ್ ನೀಡಿದೆ.
ಉಡುಪಿ ಜಿಲ್ಲೆಯಲ್ಲಿ ಕಳೆದ 38 ವರ್ಷಗಳಲ್ಲಿ ದಾಖಲೆ ಮಳೆಯಾಗುತ್ತಿದ್ದು, ಇದರಿಂದ ಜನಜೀವನ ತತ್ತರಿಸಿದೆ. ಮನೆಗಳಿಗೂ ನೀರು ನುಗ್ಗಿದ್ದು ಸೂರಿಲ್ಲದೇ ಪರದಾಡುವಂತಾಗಿದೆ.