ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ: ಮನೆ ಕುಸಿತ, ಮರ, ವಿದ್ಯುತ್ ಕಂಬಗಳು ಧರೆಗೆ

By Govindaraj S  |  First Published Jul 14, 2024, 9:38 PM IST

ಶನಿವಾರ ಮಧ್ಯಾಹ್ನದ ಬಳಿಕ ಕೊಡಗು ಜಿಲ್ಲೆಯಾದ್ಯಂತ ಭಾರೀ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಬೃಹತ್ ಗಾತ್ರದ ಮರ ಹಾಗೂ ಹಲವು ವಿದ್ಯುತ್ ಕಂಬಗಳು ಧರೆಗುರುಳಿವೆ. 


ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು

ಕೊಡಗು (ಜು.14): ಶನಿವಾರ ಮಧ್ಯಾಹ್ನದ ಬಳಿಕ ಕೊಡಗು ಜಿಲ್ಲೆಯಾದ್ಯಂತ ಭಾರೀ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಬೃಹತ್ ಗಾತ್ರದ ಮರ ಹಾಗೂ ಹಲವು ವಿದ್ಯುತ್ ಕಂಬಗಳು ಧರೆಗುರುಳಿವೆ. ಮಡಿಕೇರಿ ನಗರದ ಫೀಲ್ಡ್ ಮಾರ್ಡಲ್ ಕಾರ್ಯಪ್ಪ ಕಾಲೇಜು ಹಿಂಭಾಗದಲ್ಲಿ ಬೃಹತ್ ಗಾತ್ರದ ಮರ ಉರುಳಿ ರಸ್ತೆಗೆ ಬಿದ್ದಿದೆ. ಇದರಿಂದಾಗಿ ಮಡಿಕೇರಿ ಹಾಗೂ ಗಾಳಿಬೀಡು ನಡುವಿನ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಕಳೆದ ಎರಡು ಗಂಟೆಯಿಂದ ರಸ್ತೆ ಸಂಪರ್ಕ ಸ್ಥಗಿತಗೊಂಡಿದ್ದು, ವಾಹನ ಸವಾರರು ಹಾಗೂ ಜನರ ಓಡಾಟಕ್ಕೆ ಅವಕಾಶವಿಲ್ಲದೆ ಪರದಾಡುವಂತೆ ಆಗಿದೆ. 

Tap to resize

Latest Videos

ವಿದ್ಯುತ್ ಟ್ರಾನ್ಸ್ಫಾರ್ಮರ್ ಸಹಿತ ಹಲವು ವಿದ್ಯುತ್ ಕಂಬಗಳು ಮುರಿದು ಬಿದ್ದ ಪರಿಣಾಮ ಈ ಭಾಗದಲ್ಲಿ ಕಳೆದ ಎರಡು ಗಂಟೆಯಿಂದ ವಿದ್ಯುತ್ ಸ್ಥಗಿತಗೊಂಡಿದೆ. ಮರ ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಕೆಇಬಿ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಎರಡು ಗಂಟೆಯಿಂದ ಅರಣ್ಯ ಸಿಬ್ಬಂದಿ ಮಳೆಯ ನಡುವೆಯೇ ಮರ ತೆರವುಗೊಳಿಸುತ್ತಿದ್ದಾರೆ. ಈಗಾಗಲೇ ಹೊಸ ವಿದ್ಯುತ್ ಕಂಬವನ್ನು ಸ್ಥಳಕ್ಕೆ ತರಲಾಗಿದ್ದು, ಮರ ತೆರವು ಮಾಡುತ್ತಿದ್ದಂತೆ ಕೆಇಬಿ ಸಿಬ್ಬಂದಿ ವಿದ್ಯುತ್ ಕಂಬ ನಿಲ್ಲಿಸಲು ಸಿದ್ಧವಾಗಿದ್ದಾರೆ. ಜುಲೈ 20 ವರೆಗೂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. 

ಸ್ಟೈಲಿಷ್ ರೆಡ್ ಗೌನ್​ನಲ್ಲಿ ರೋಸ್​​ನಂತೆ ಕಂಡ ನಭಾ ನಟೇಶ್‌: ಸ್ಟ್ರಾಂಗ್ ಇತ್ತು ನನ್ನ ಬಾಡಿ ವೀಕ್ ಆಯ್ತು ನಿನ್ನೋಡಿ ಅಂತನ್ನೋದಾ!

ಹೀಗಾಗಿ ಜಿಲ್ಲೆಯ ಜನರು ಎಚ್ಚರದಿಂದ ಇರಬೇಕಾಗಿದೆ. ಕೊಡಗು ಜಿಲ್ಲೆಯಲ್ಲಿ ನಿನ್ನೆ ಮಧ್ಯಾಹ್ನದ ಬಳಿಕ ಭಾರೀ ಮಳೆ ಸುರಿಯುತ್ತಿದ್ದು ಹಾರಂಗಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಮಳೆ ಸುರಿಯುತ್ತಿರುವುದರಿಂದ ಜಲಾಶಯಕ್ಕೆ 6820 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ಜಲಾಶಯ ಬಹುತೇಕ ಭರ್ತಿಯಾಗಿದೆ. 2859 ಗರಿಷ್ಠ ಮಟ್ಟದ ಜಲಾಶಯದಲ್ಲಿ ಈಗಾಗಲೇ 2854.5 ಅಡಿಯಷ್ಟು ನೀರು ಭರ್ತಿಯಾಗಿದೆ. ಜೊತೆಗೆ ಸಾಕಷ್ಟು ಪ್ರಮಾಣದ ಮಳೆ ಸುರಿಯುತ್ತಿರುವುದರಿಂದ ಜಲಾಶಯಕ್ಕೆ ಇನ್ನೂ ಹೆಚ್ಚಿನ ನೀರು ಹರಿದು ಬರುವ ಸಾಧ್ಯತೆ ಇರುವುದರಿಂದ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿದೆ ಎಂದು ಹಾರಂಗಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ತಿಳಿಸಿದ್ದಾರೆ. 

ಇನ್ನು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯಾದ್ಯಂತ ಒಂದೇ ದಿನದಲ್ಲಿ ಹತ್ತಾರು ಮನೆಗಳು ಧರೆಗುರುಳಿವೆ. ಸೋಮವಾರಪೇಟೆ ಹಾಗೂ ಮಡಿಕೇರಿ ತಾಲ್ಲೂಕಿನಾದ್ಯಂತ ಭಾರೀ ಗಾಳಿ ಮಳೆ ಸುರಿಯುತ್ತಿದ್ದು, ಸೋಮವಾರಪೇಟೆ ತಾಲ್ಲೂಕಿನ ಹಲವೆಡೆ ಮನೆಯ ಗೋಡೆ ಕುಸಿತವಾಗಿವೆ. ಅತ್ತೂರು ಗ್ರಾಮದ ಅಚ್ಚಯ್ಯ ಹಾಗೂ ಜನಾರ್ಧನ ಎಂಬುವರ ಮನೆಯ ಒಂದು ಗೋಡೆ ಸಂಪೂರ್ಣ ಕುಸಿದು ಬಿದ್ದಿದೆ. ಮತ್ತೊಂದೆಡೆ ಶನಿವಾರಸಂತೆಯ ಗೌಡಳ್ಳಿ ನಿವಾಸಿ ರಮೇಶ್ ಎಂಬುವರ ಮನೆಯ ಗೋಡೆ ಕುಸಿದು ಹೋಗಿದೆ. ಇನ್ನು ಮಡಿಕೇರಿ ತಾಲ್ಲೂಕಿನಲ್ಲೂ ಭಾರೀ ಗಾಳಿ ಮಳೆ ಸುರಿಯುತ್ತಿದ್ದು, ಮೇಕೇರಿ ಗ್ರಾಮದ ನಿವಾಸಿ ಆಯಿಶಾ ಎಂಬುವರ ಮನೆಗೋಡೆ ಕುಸಿದಿದೆ. 

ಬ್ಲ್ಯಾಕ್‌ ಗೌನ್‌ನಲ್ಲಿ ಕಂಗೊಳಿಸಿದ ಕೃತಿ ಶೆಟ್ಟಿ: ಟಾಲಿವುಡ್‌ನ ಐರನ್ ಲೆಗ್ ಹೀರೋಯಿನ್ ಎಂದ ಫ್ಯಾನ್ಸ್‌

ಮಳೆಯಿಂದ ಮನೆ ಹಾನಿಯಾದ ಸ್ಥಳಗಳಿಗೆ ಆಯಾ ತಾಲ್ಲೂಕುಗಳ ತಹಶೀಲ್ದಾರ್ಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಗದೊಂದೆಡೆ ಮರದ ಕೊಂಬೆ ಬಿದ್ದು ಆರು ಕಾರುಗಳಿಗೆ ಹಾನಿಯಾಗಿದೆ. ಸೋಮವಾರಪೇಟೆ ಸಮೀಪದ ಆಯಾತನ ರೆಸಾರ್ಟ್ ನಲ್ಲಿ ಮರ ಉರುಳಿ ಬಿದ್ದಿದ್ದು ಕಾರುಗಳು ಜಖಂಗೊಂಡಿವೆ. ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಪ್ರವಾಸಿಗರ ಕಾರು ಹಾಗೂ ಟ್ಯಾಕ್ಸಿ ಗಳಿಗೆ ಹಾನಿಯಾಗಿದೆ. ಅಲ್ಲದೆ ಭಾರಿ ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ವಿದ್ಯುತ್ ಪ್ರವಹಿಸಿ ಮೂರು ತಿಂಗಳ ಗಬ್ಬದ ಹಸುವೊಂದು ಸ್ಥಳದಲ್ಲಿಯೇ ಮೃತಪಟ್ಟಿದೆ. ಸೋಮವಾರಪೇಟೆ ಸಮೀಪದ ಚೌಡ್ಲು ಗ್ರಾಮದ ಸುರೇಶ್ ಎಂಬುವವರಿಗೆ ಸೇರಿದ ಗಬ್ಬದ ಹಸು ಇದಾಗಿದ್ದು ರೈತ ಸುರೇಶ್ ಅವರಿಗೆ ನಷ್ಟವಾಗಿದೆ.

click me!