15 ದಿನಗಳ ಬಳಿಕ ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಇನ್ನೂ 3 ದಿನ ಭಾರೀ ಮಳೆ

By Girish Goudar  |  First Published Aug 5, 2022, 4:30 AM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ


ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ಆ.05):  ಕಾಫಿನಾಡಲ್ಲಿ ಕಳೆದ ಹದಿನೈದು ದಿನಗಳಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣದೇವನ ಅಬ್ಬರ ಮತ್ತೆ ಮುಂದುವರೆಯುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಎಚ್ಚರಿಕೆಯಿಂದಿರಲು ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯ ಅನ್ವಯ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದ್ದು ಜನ ಎಚ್ಚರಿಕೆಯಿಂದಿರಲು ಸೂಚನೆ ನೀಡಿದೆ. 

Tap to resize

Latest Videos

ಆಗಸ್ಟ್ 6ರಂದು ರೆಡ್ ಅಲರ್ಟ್ ಘೋಷಣೆ 

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಳೆಯಿಂದ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಇದ್ದು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಪ್ರಕೃತಿ ವಿಕೋಪವನ್ನ ಎದುರಿಸಿಲು ಸೂಕ್ತಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರು ಅಪರ ಜಿಲ್ಲಾಧಿಕಾರಿ ರೂಪ ಆದೇಶಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾದ್ಯಂತ ಆಗಸ್ಟ್ ಐದರಿಂದ ಏಳರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಿನಾಂಕ ಐದು ಮತ್ತು ಏಳರಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ದಿನಾಂಕ ಆರನೇ ತಾರೀಖು ಶನಿವಾರದಿಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಇರುವ ದಿನಗಳಲ್ಲಿ 115 ರಿಂದ 204 ಮಿ.ಮೀ.ನಷ್ಟು ಮಳೆ ಬೀಳಲಿದೆ ಎಂದು ಎಚ್ಚರಿಕೆ ನೀಡಿದ್ದು, ಆಗಸ್ಟ್ 6 ರೆಡ್ ಅಲರ್ಟ್ ದಿನದಂದು 204 ಮಿ.ಮೀ.ನಷ್ಟು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾಗಾಗಿ, ಪರಿಸ್ಥಿತಿ ನಿಭಾಯಿಸಲು ಸನ್ನದ್ಧವಾಗಿರುವ ಜಿಲ್ಲಾಡಳಿತ ಸಾರ್ವಜನಿಕರು ನದಿ ಅಥವ ತಗ್ಗುಪ್ರದೇಶಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಿದೆ.

Chikkamagaluru: 21 ತಲೆಮಾರುಗಳಿಂದ ನಡೆದುಕೊಂಡು ಬರ್ತಿರೋ ವಿಶಿಷ್ಟ ಗದ್ದೆ ನಾಟಿ ಸಂಪ್ರದಾಯ

ಈ ಮೂರು ದಿನಗಳ ಕಾಲ ಮಕ್ಕಳು-ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರದ ಹತ್ತಿರ ಅಥವ ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಲ್ಲಿ ನಿಲ್ಲುವಂತೆ ಸೂಚಿಸಿದೆ. ಜೊತೆಗೆ, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ನಿಯೋಜನೆಗೊಂಡ ನೊಡೆಲ್ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಪರಿಸ್ಥಿತಿ ನಿಭಾಯಿಸಲು ತಯಾರಿ ಮಾಡಿಕೊಳ್ಳುವಂತೆಯೂ ನಿರ್ದೇಶನ ನೀಡಿದೆ. ಆದರೆ, ಜಿಲ್ಲೆಯ ಮಲೆನಾಡು ಭಾಗದ ರೈತರು ಹಾಗೂ ಕಾಫಿ ಬೆಳೆಗಾರರು ಮಾತ್ರ ಮಳೆಯಿಂದ ಮತ್ತಷ್ಟು ಆತಂಕಕ್ಕೆ ಒಳಾಗಿದ್ದಾರೆ. ಏಕೆಂಂದರೆ, ಜುಲೈ 2ನೇ ವಾರದ ಮಳೆ ನಿರಂತರ ಮಳೆ ಶೇಕಡ 30-40ರಷ್ಟು ಕಾಫಿಯನ್ನ ನಾಶ ಮಾಡಿದ್ದು ಮಲೆನಾಡು ಮಳೆ ಅಂದ್ರೆ ಹೆದರುವಂತಾಗಿದೆ.

ಕವನಹಳ್ಳ ಗ್ರಾಮದಲ್ಲಿ ಭಾರೀ ಭೂಕುಸಿತ 

ಚಿಕ್ಕಮಗಳೂರು ಜಿಲ್ಲೆಯ ಕಳಸ ಭಾಗದಲ್ಲಿ ಇಂದು ಸಂಜೆ ಭಾರೀ ಮಳೆ ಸುರಿದಿದೆ. ಭಾರೀ ಮಳೆಯ ಪರಿಣಾಮ ಕಳಸ ತಾಲೂಕಿನ ಕವನಹಳ್ಳ ಗ್ರಾಮದಲ್ಲಿ ಭಾರೀ ಭೂಕುಸಿತ ಉಂಟಾಗಿದೆ. ಕವನಹಳ್ಳಿ ಗ್ರಾಮದ ವನಿತಾ-ಉದಯ್ ಎಂಬುವರ ಮನೆ ಬಳಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ. ಮನೆ ಮುಂದೆ ಲೋಡ್‍ಗಟ್ಟಲೇ ಮಣ್ಣಿನ ರಾಶಿ ಬಂದು ಕೂತಿದೆ. ಮನೆಯ ಒಳಗೂ ಕೆಸರು ಮಿಶ್ರಿತ ನೀರು ಹರಿದು ಸಾಕಷ್ಟು ಹಾನಿಯಾಗಿದೆ. ಅಷ್ಟೆ ಅಲ್ಲದೆ, ಮಳೆ ಪ್ರಮಾಣ ಹೆಚ್ಚಾಗುತ್ತಿದ್ದ ನಿರಂತರವಾಗಿ ಮಣ್ಣು ಜಾರುತ್ತಿರುವುದರಿಂದ ಕುಟುಂಬ ಕಂಗಾಲಾಗಿ ಹೋಗಿದೆ. ಗುಡ್ಡದ ಮಣ್ಣು ಜರುಗುತ್ತಿದ್ದಂತೆ ಗುಡ್ಡದ ಮೇಲಿದ್ದ ಕಾಫಿತೋಟದ ಕಾಫಿ, ಅಡಿಕೆ ಮರಗಳು ಮನೆ ಮೇಲೆ ಬಂದು ಬಿದ್ದಿವೆ. ಸ್ವಲ್ಪ-ಸ್ವಲ್ಪ ಜಾರುತ್ತಾ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ. ಗುಡ್ಡ ಕುಸಿಯುವುದನ್ನ ಕಣ್ಣಾರೆ ಕಂಡ ಮನೆಯವರು ಹೆದರಿ ಎಲ್ಲರೂ ಮನೆಯಿಂದ ಹೊರಬಂದಿದ್ದಾರೆ. ಸ್ಥಳಿಯರು ಬಂದು ಮನೆ ಮುಂದೆ ಬಿದ್ದಿದ್ದ ಮರಗಳನ್ನ ಕಡಿದು ಹಾಕಿದ್ದಾರೆ. ಆದರೆ, ಗುಡ್ಡ ಕುಸಿತ ನಿರಂತರವಾಗಿದ್ದು ಸ್ಥಳಿಯರು ಬೆಚ್ಚಿ ಬಿದ್ದಿದ್ದಾರೆ. ಕಳೆದ ಹತ್ತು ದಿನಗಳ ಕಾಲ ಬಿಡುವು ಕೊಟ್ಟಿದ್ದ ಮಳೆ, ಮತ್ತೆ ಆರ್ಭಟಿಸುತ್ತಿರುವುದರಿಂದ ಕಾಫಿ ನಾಡಿಗರು ಆತಂಕಕ್ಕೆ ಒಳಗಾಗಿದ್ದಾರೆ. ಜುಲೈ 2ನೇ ವಾರದ ದಾಖಲೆ ಮಳೆಗೆ ಅಡಿಕೆ-ಮೆಣಸು-ಕಾಫಿ ಕೊಚ್ಚಿ ಹೋಗಿತ್ತು. ಈಗ ಮತ್ತೆ ಮಳೆಯ ಅಬ್ಬರ ಕಂಡು ಮಲೆನಾಡಿಗರು ಮಳೆರಾಯನಿಗೆ ಹಿಡಿಶಾಪ ಹಾಕುತ್ತಿದ್ದಾರೆ.
 

click me!