ಮಳೆ ಹಾನಿ; ರೈತರಿಗೆ .1.38 ಕೋಟಿ ಪರಿಹಾರ - ಸಚಿವೆ ಶಶಿಕಲಾ ಜೊಲ್ಲೆ

By Kannadaprabha NewsFirst Published Sep 3, 2022, 3:02 PM IST
Highlights

ವಿಜಯನಗರ ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ ಸುರಿದ ಮಳೆಯಿಂದ ಮೊದಲ ಮತ್ತು ಎರಡನೇ ಹಂತದಲ್ಲಿ 354.57 ಎಕರೆ ಬೆಳೆಹಾನಿಯಾಗಿದ್ದು, ಇದುವರೆಗೆ .1.38 ಕೋಟಿ ಪರಿಹಾರ ಪಾವತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಹೊಸಪೇಟೆ (ಸೆ.3) : ವಿಜಯನಗರ ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ ಸುರಿದ ಮಳೆಯಿಂದ ಮೊದಲ ಮತ್ತು ಎರಡನೇ ಹಂತದಲ್ಲಿ 354.57 ಎಕರೆ ಬೆಳೆಹಾನಿಯಾಗಿದ್ದು, ಇದುವರೆಗೆ .1.38 ಕೋಟಿ ಪರಿಹಾರ ಪಾವತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ(Shashikala Jolle) ಹೇಳಿದರು. ಇತ್ತೀಚೆಗೆ ಸುರಿದ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳು ಹಾಗೂ ಬೆಳೆಹಾನಿ ಪರಿಶೀಲನೆ ನಡೆಸಿದ ನಂತರ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆಗಸ್ಟ್‌ 2ರಂದು ಪ್ರಕೃತಿ ವಿಕೋಪದಿಂದ ರೈತರೊಬ್ಬರು ಮೃತಪಟ್ಟಿದ್ದರು. ಮೃತರ ಕುಟುಂಬಕ್ಕೆ .5 ಲಕ್ಷ ಪರಿಹಾರ ನೀಡಲಾಗಿದೆ. ವಿಜಯನಗರ ಜಿಲ್ಲಾಡಳಿತದ ಪಿ.ಡಿ. ಖಾತೆಯಲ್ಲಿ .11.48 ಕೋಟಿ ಲಭ್ಯವಿದ್ದು, ಹಣದ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ವಿಜಯನಗರ ಉಸ್ತುವಾರಿ ಅದಲು ಬದಲು ಆದೇಶ ಹಿಂಪಡೆದ ರಾಜ್ಯ ಸರ್ಕಾರ

2022ರ ಜೂ.1ರಿಂದ ಆ.31ರವರೆಗೆ 2153.34 ಹೆಕ್ಟೇರ್‌ ಭೂಮಿಯಲ್ಲಿ ಬೆಳೆ ಹಾನಿಯಾಗಿದ್ದು, 3988 ರೈತರು ಇದರಿಂದ ತೊಂದರೆಗೀಡಾಗಿದ್ದಾರೆ. .2.98 ಕೋಟಿ ಪರಿಹಾರದ ಬೇಡಿಕೆ ಅವಶ್ಯವಿದೆ ಎಂದರು. ವಾಡಿಕೆಗಿಂತ ಶೇ.185.9ರಷ್ಟುಹೆಚ್ಚು ಮಳೆ: ವಿಜಯನಗರ ಜಿಲ್ಲೆಯಲ್ಲಿ ಆಗಸ್ಟ್‌ ತಿಂಗಳಲ್ಲಿ ವಾಡಿಕೆಗಿಂತ ಶೇ.185.9 ಮಿ.ಮೀ.ನಷ್ಟುಹೆಚ್ಚು ಮಳೆಯಾಗಿದೆ. ವಿಜಯನಗರ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಆಗಸ್ಟ್‌ 25 ರಿಂದ 31ರ ವರೆಗೆ ಪ್ರಕೃತಿ ವಿಕೋಪದಿಂದ ಹೆಚ್ಚಿನ ಹಾನಿಯಾಗಿದೆ. ಆರು ದಿನಗಳಲ್ಲಿ ಸುರಿದ ಮಳೆಯಿಂದಾಗಿ 197 ಮನೆಗಳಿಗೆ ಹಾನಿಯಾಗಿದೆ. ಹರಪನಹಳ್ಳಿಯ ಸಿಂಗ್ರಿಹಳ್ಳಿಯಲ್ಲಿ ಕೆರೆಯ ಕೋಡಿ ಒಡೆದ ಪರಿಣಾಮ ಗ್ರಾಮಕ್ಕೆ ನೀರು ನುಗ್ಗಿ 36 ಮನೆಗಳಿಗೆ ಹಾನಿಯಾಗಿದ್ದು, ಜಿಲ್ಲಾಡಳಿತವು ಅಲ್ಲಿ ಕಾಳಜಿ ಕೇಂದ್ರ ತೆರೆದು ಸ್ಪಂದಿಸಿದೆ. ಹಾನಿಗೊಳಗಾದ 36 ಮನೆಗಳಿಗೆ ತಲಾ 10 ಸಾವಿರಗಳಂತೆ .3.6ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ ಎಂದರು.

ಹೊಸಪೇಟೆ ನಗರ ಇಂದಿರಾ ನಗರದ ವಾರ್ಡ್‌(Indira Nagar Ward) 15ರ ವ್ಯಾಪ್ತಿಯ 54 ಮನೆಗಳಿಗೂ ಇತ್ತೀಚೆಗೆ ಸುರಿದ ಮಳೆಯಿಂದ ನೀರು ನುಗ್ಗಿ ಹಾನಿಗೊಳಗಾದ ಹಿನ್ನೆಲೆ ಒಂದು ಮನೆಗೆ 10 ಸಾವಿರದಂತೆ ಒಟ್ಟು .5.40 ಲಕ ಪರಿಹಾರವನ್ನು ವಿತರಿಸಲಾಗಿದೆ ಎಂದರು. ವಿಜಯನಗರ ಜಿಲ್ಲಾ ಕೇಂದ್ರವಾಗಿರುವ ಹೊಸಪೇಟೆಯಲ್ಲಿ ಭೂ ಒತ್ತುವರಿ ಪ್ರಕರಣಗಳು ಕೇಳಿಬರುತ್ತಿದ್ದು, ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರವಾಸೋದ್ಯಮ ಸಚಿವ ಆನಂದ ಸಿಂಗ್‌(Anand Singh), ಸಂಸದ ವೈ. ದೇವೇಂದ್ರಪ್ಪ, ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್‌, ಎಸ್ಪಿ ಡಾ. ಅರುಣ್‌ ಕೆ., ಜಿಪಂ ಸಿಇಒ ಹರ್ಷಲ್‌ ಬೋಯರ್‌, ನಗರಸಭೆ ಅಧ್ಯಕ್ಷೆ ಸುಂಕಮ್ಮ ಮತ್ತಿತರರಿದ್ದರು.

ಕರ್ನಾಟಕದ 30 ಸಾವಿರ ಭಕ್ತರಿಗೆ ಉಚಿತ ಕಾಶಿ ಯಾತ್ರೆ: ಸಚಿವೆ ಜೊಲ್ಲೆ

ಮುರುಘಾಶ್ರೀ ಪ್ರಕರಣದಲ್ಲಿ ಹಸ್ತಕ್ಷೇಪವಿಲ್ಲ: ಶಶಿಕಲಾ ಜೊಲ್ಲೆ

ಚಿತ್ರದುರ್ಗದ ಮುರುಘಾ(Chitradurga Murugh Sharan) ಶರಣರ ಪ್ರಕರಣದಲ್ಲಿ ರಾಜ್ಯ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾನೂನು ಎಲ್ಲರಿಗೂ ಒಂದೇ, ಈ ನೆಲದ ಕಾನೂನನ್ನು ಎಲ್ಲರೂ ಪಾಲನೆ ಮಾಡಬೇಕಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಬಿಜೆಪಿ ಸರ್ಕಾರ ಹಸ್ತಕ್ಷೇಪ ಮಾಡುತ್ತದೆ ಎಂಬ ಆರೋಪದಲ್ಲಿ ಹುರುಳಿಲ್ಲ ಎಂದರು.

click me!