ಬಾಗೇಪಲ್ಲಿ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಕೆಸರು ಗದ್ದೆಯಾಗಿ ಪರಿವರ್ತನೆಯಾದ ಪರಿಣಾಮ ವ್ಯಾಪಾರಸ್ಥರು, ರೈತರು ಸೇರಿದಂತೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಶುಕ್ರವಾರ ಸುರಿದ ಮಳೆಯಿಂದ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಕೆಸರು ಗದ್ದೆಯಾಗಿತ್ತು.
ಚಿಕ್ಕಬಳ್ಳಾಪುರ(ಸೆ.29): ಬಾಗೇಪಲ್ಲಿ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಕೆಸರು ಗದ್ದೆಯಾಗಿ ಪರಿವರ್ತನೆಯಾದ ಪರಿಣಾಮ ವ್ಯಾಪಾರಸ್ಥರು, ರೈತರು ಸೇರಿದಂತೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಶುಕ್ರವಾರ ಸುರಿದ ಮಳೆಯಿಂದ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಕೆಸರು ಗದ್ದೆಯಾಗಿತ್ತು. ಆಂಧ್ರಪ್ರದೇಶ ಸೇರಿದಂತೆ ತಾಲೂಕಿನ ನಾನಾ ಕಡೆಗಳಿಂದ ನಾನಾ ತರಕಾರಿಗಳನ್ನು ತಂದಿದ್ದ ರೈತರು ತಮ್ಮ ಸರಕುಗಳನ್ನು ಮಾರಾಟ ಮಾಡಲು ಹಾಗೂ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ತರಕಾರಿ ಖರೀದಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.
ಮಾರುಕಟ್ಟೆಯಲ್ಲಿ ದುರ್ವಾಸನೆ:
ಮಾರುಕಟ್ಟೆಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ವರ್ತನೆಯಿಂದ ಸ್ವಚ್ಛತೆ ಎಂಬುದು ಇಲ್ಲಿ ಮರೀಚಿಕೆಯಾಗಿದೆ, ಅಲ್ಪ ಮಳೆಯಾದರೂ ಕೆಸರು ಗದ್ದೆಯಾಗುತ್ತೆ, ಸ್ವಚ್ಛತೆ ಇಲ್ಲದ ಪರಿಣಾಮ ದುರ್ವಾಸನೆ ಬೀರುತ್ತಿದ್ದ ಕಾರಣ, ಸದಾ ಮೂಗು ಮುಚ್ಚಿಕೊಂಡು ಓಡಾಡಬೇಕಾಗಿದೆ. ಜೊತೆಗೆ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಸಿಸಿ ರಸ್ತೆ ಕಾಮಗಾರಿ ವಿಳಂಬ ಪರಿಣಾಮ: ಮಾರುಕಟ್ಟೆಯ ಕೆಲ
ಭಾಗಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿದ್ದಾರೆ.
ಪ್ರೀತಿ ನಿರಾಕರಿಸಿದ ಸ್ನೇಹಿತ: ಗಂಡ-ಮಕ್ಕಳನ್ನು ನೋಡದೇ ಆತ್ಮಹತ್ಯೆಗೆ ಶರಣಾದ ಹುಚ್ಚು ಹೆಣ್ಮಗಳು
ಇನ್ನು ಹಲವು ಕಡೆಗಳಲ್ಲಿ ಸಿಸಿ ರಸ್ತೆ ಕಾಮಗಾರಿ ಮಾಡದ ವಿಲಂಬ ಮಾಡುತ್ತಿರುವ ಪರಿಣಾಮ ಮಳೆ ಬಂದರೆ ಕೆಸರು ಗದ್ದೆಯಾಗುತ್ತೆ ಆದರೆ ಇಲ್ಲಿನ ಅಧಿಕಾರಿಗಳು ಮಾತ್ರ ನಮಗೂ ಈ ಸಮಸ್ಯೆಗೂ ಯಾವುದೇ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದರು. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಕೆಸರು ಮಯವಾಗಿರುವ ಮರುಕಟ್ಟೆಯಲ್ಲಿ ಸ್ವಚ್ಛಗೊಳಿಸುವಂತೆ ಆಗ್ರಸಿದರು,.