
ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರೋ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಇಂದು ದಿನಾಂಕ 18/08/2025 ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಶಾಲಾ-ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಮಕ್ಕಳ ಸುರಕ್ಷತಾ ಕ್ರಮವಾಗಿ ಆಗಸ್ಟ್ 18 ರಂದು ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
1.ದಕ್ಷಿಣ ಕನ್ನಡ: ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು ಮಾತ್ರ ರಜೆ ನೀಡಲಾಗಿದೆ. ಮಳೆಯ ತೀವ್ರತೆ ಮತ್ತು ಹವಾಮಾನ ಇಲಾಖೆ ಮಾಹಿತಿಯನ್ನಾಧರಿಸಿ ನಾಳೆಯ ರಜೆ ನಿರ್ಧಾರವಾಗಲಿದೆ.
2.ಹಾಸನ ಜಿಲ್ಲೆಯ 3 ತಾಲೂಕು: ಮಳೆ ಹಿನ್ನೆಲೆ ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಮತ್ತು ಆಲೂರು ತಾಲೂಕಿನ ಭಾಗದ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ.
3.ಕೊಡಗು: ಇಂದು ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
4.ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
5.ಉತ್ತರ ಕನ್ನಡ: ಜಿಲ್ಲೆಗೆ ಹವಾಮಾನ ಇಲಾಖೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆ ಜಿಲ್ಲಾಡಳಿತ ಶಾಲೆ ಕಾಲೇಜುಗಳಿಗೆ 2 ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
6.ಉಡುಪಿ: ಇಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆ ನೀಡಲಾಗಿದೆ.
7.ಶಿವಮೊಗ್ಗ: ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಇಂದು ಜಿಲ್ಲೆಯಾದ್ಯಂತೆ ರಜೆ ಪ್ರಕಟಿಸಲಾಗಿದೆ.
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಾಲೂಕಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಶಿರಾಡಿಯಲ್ಲಿ ಶನಿವಾರ ರಾತ್ರಿ ಗುಡ್ಡ ಕುಸಿದು ಸಂಚಾರ ಸ್ಥಗಿತಗೊಂಡಿತ್ತು. ಆದರೆ ಸತತ ಕಾರ್ಯಾಚರಣೆ ನಂತರ ಭಾನುವಾರ ಬೆಳಗ್ಗೆಯಿಂದ ಸಂಚಾರ ಆರಂಭವಾಗಿದೆ. ರಾಷ್ಟ್ರೀಯ ಹೆದ್ದಾರಿ ೭೫ರ ಶಿರಾಡಿಘಾಟ್‌ನಲ್ಲಿ ಶನಿವಾರ ಸಂಜೆ ಮೇಘಸ್ಫೋಟ ಸಂಭವಿಸಿದ್ದು ಎರಡು ಗಂಟೆಯ ಕನಿಷ್ಠ ಅವಧಿಯಲ್ಲಿ ನಾಲ್ಕುನೂರು ಮೀ.ಮೀಟರ್ ಮಳೆ ಸುರಿದ ಪರಿಣಾಮ ಘಾಟ್ ರಸ್ತೆಯಲ್ಲಿ ಹೊಳೆಯಂತೆ ನೀರು ಹರಿಯುತ್ತಿತ್ತು. ತೊರೆಗಳ ನೀರು ರಸ್ತೆಗೆ ಬೀಳುತ್ತಿದ್ದರಿಂದ ಘಾಟ್‌ನಲ್ಲಿ ಲಘುವಾಹನಗಳ ಸಂಚಾರ ಕಷ್ಟಕರವಾಗಿತ್ತು.
ಹೆದ್ದಾರಿಯ ಪ್ರತ್ಯೇಕ ಪ್ರದೇಶದಲ್ಲಿ ಎರಡು ಕಾರುಗಳ ಮೇಲೆ ಮರಗಳು ಬಿದ್ದಿದ್ದು ಯಾವುದೇ ಹಾನಿ ಸಂಭವಿಸಿಲ್ಲ. ಸ್ಥಳದಲ್ಲೆ ಇದ್ದ ಅರಣ್ಯ ಇಲಾಖೆ ಅಧಿಕಾರಿಗಳು ಮರಗಳನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಶಿರಾಡಿಯ ಕಗ್ಗತ್ತಲಲ್ಲೇ ಕಾಲ ಕಳೆದ ವಾಹನ ಚಾಲಕರು ಮತ್ತು ಪ್ರಯಾಣಿಕರು ಬೆಳಗಾಗುತ್ತಲೇ ಪ್ರಯಾಣ ಮುಂದುವರಿಸಿದರು.
ಇದನ್ನೂ ಓದಿ: ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ