ಮುಂಗಾರು ಪ್ರಬಲ : ರಾಜ್ಯದ ಆರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

Kannadaprabha News   | Asianet News
Published : Jun 15, 2021, 08:33 AM IST
ಮುಂಗಾರು ಪ್ರಬಲ : ರಾಜ್ಯದ ಆರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ಸಾರಾಂಶ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ  ಧಾರಾಕಾರ ಮಳೆ ಮುಂಗಾರು ಪ್ರಬಲವಾಗಿರುವ ಹಿನ್ನೆಲೆಯಲ್ಲಿ ಆರು  ಜಿಲ್ಲೆಗಳಲ್ಲಿ ಮಳೆ ಧಾರಾಕಾರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಬೆಂಗಳೂರು (ಜೂ.15): ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಪ್ರಬಲವಾಗಿರುವ ಹಿನ್ನೆಲೆಯಲ್ಲಿ ಆರು  ಜಿಲ್ಲೆಗಳಲ್ಲಿ ಸೋಮವಾರ ಧಾರಾಕಾರ ಮಳೆಯಾಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಕಡೆಗಳಲ್ಲಿ ತಗ್ಗು ಪ್ರದೇಶಗಳಲ್ಲಿ ಜಲಾವೃತಗೊಂಡಿದ್ದು 10ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. 

ರಾಜ್ಯದಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ರೆಡ್, ಆರೇಂಜ್, ಯೆಲ್ಲೋ​ ಅಲರ್ಟ್ ...

ಕಳೆದ 2 3 ದಿನಗಳಲ್ಲಿಂದ  ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನದಿಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. 

ಉಡುಪಿ ಜಿಲ್ಲೆಯ ನದಿ ತೀರ ಪ್ರದೇಶಗಳಲ್ಲಿ ಪ್ರವಾಹಾತಂಕ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಕೇಂದ್ರವಾದ ಮಂಗಳೂರು ನಗರದಲ್ಲಿ ಕೃತಕ ಪ್ರವಾಹದಿಂದ ತೀವ್ರ ತೊಂದರೆಯಾಗಿದೆ.  ಉಡುಪಿ ಜಿಲ್ಲೆಯ ಬಹುತೇಕ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಿದೆ. ಅಲ್ಲಲ್ಲಿ ಮರಗಳು ಉರುಳಿ ಬಿದ್ದಿರುವುದರಿಂದ ಮೆಸ್ಕಾಂನ 100ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮತ್ತು ವಿದ್ಯುತ್ ಸಂಪರ್ಕಗಳಿಗೆ ಹಾನಿಯಾಗಿದೆ. 

PREV
click me!

Recommended Stories

ಮೆಟ್ರೋ ಗುಲಾಬಿ ಮಾರ್ಗದ ರೈಲು ಅನಾವರಣ: ಯಾವ್ಯಾವ ಮಾರ್ಗಕ್ಕೆ?
ದಿಲ್ಲಿ, ಮುಂಬಯಿ ರೀತಿ ರಾಜಧಾನಿಗೆ ಎರಡು ಪೊಲೀಸ್‌ ಕಮೀಷನರೇಟ್‌