ಕಳೆದ ಆಗಸ್ಟ್ ತಿಂಗಳಲ್ಲಿ ಅಬ್ಬರಿಸಿದ್ದ ಮಳೆರಾಯ ಇದೀಗ ಮತ್ತೆ ತನ್ನ ಆರ್ಭಟ ಶುರು ಮಾಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿದಿದೆ.
ಮಂಗಳೂರು [ಸೆ.03]: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ ಆರ್ಭಟ ಆರಂಭವಾಗಿದೆ. ಗಣೇಶ ಚತುರ್ಥಿಯ ದಿನ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ.
ಜಿಲ್ಲೆಯ ಬೆಳ್ತಂಗಡಿ, ಕಡಬ, ಸುಳ್ಯ ಹಾಗೂ ಹಲವು ಪ್ರದೇಶಗಳಲ್ಲಿ ನಿರಂತರವಾಗಿ ಮಳೆರಾಯ ಅಬ್ಬರಿಸಿದ್ದಾರೆ.
ಅತ್ಯಧಿಕ ಪ್ರಮಾಣದಲ್ಲಿ ಮಳೆಯಾದ ಕಾರಣ ಇಲ್ಲಿನ ಹಲವು ನದಿಗಳು ಮತ್ತೆ ಅಪಾಯದ ಮಟ್ಟ ಮೀರಿ ಹರಿದಿವೆ. ಇಲ್ಲಿನ ಮೃತ್ಯುಂಜಯ, ನೇತ್ರವತಿ ನದಿಗಳಲ್ಲಿ ಹರಿವಿನ ಪ್ರಮಾಣದ ಹೆಚ್ಚಿದೆ. ಮೇಲ್ಮಳೆಯಾದ ಕಾರಣ ನದಿಗಳಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕಳೆದ ಆಗಸ್ಟ್ ತಿಂಗಳಲ್ಲಿಯೂ ಕೂಡ ಭಾರೀ ಪ್ರಮಾಣದಲ್ಲಿ ಮಳೆಯಾಗಿ ಪ್ರವಾಹ ಸದೃಶ ವಾತಾವರಣ ನಿರ್ಮಾಣವಾಗಿತ್ತು.