ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ

Published : May 13, 2019, 03:51 PM IST
ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ

ಸಾರಾಂಶ

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮತ್ತೆ ವರುಣ ಅಬ್ಬರಿಸಿದ್ದಾನೆ. ಬಿಸಿಲಿನಿಂದ ತತ್ತರಿಸಿದ್ದ ನಗರಕ್ಕೆ ತಂಪೆರೆದಿದ್ದಾನೆ.

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಮಳೆರಾಯ ಅಬ್ಬರಿಸಿದ್ದಾನೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರಿಗೆ ತಂಪೆರೆದಿದ್ದಾನೆ.

ಸಿಲಿಕಾನ್ ಸಿಟಿಯ ಕಾರ್ಪೊರೇಷನ್, ಯಶವಂತಪುರ, ಮೆಜೆಸ್ಟಿಕ್  ಸುತ್ತಮುತ್ತ ಗಾಳಿ ಸಹಿತ ಮಳೆಯಾಗಿದೆ.  ಮಲ್ಲೇಶ್ವರಂ ಪ್ರದೇಶದಲ್ಲಿಯೂ ಕೂಡ ಹೆಚ್ಚಿನ ಮಳೆ ಸುರಿದಿದೆ.

ಇತ್ತ ಬೆಂಗಳೂರು ಗ್ರಾಮಾಂತರ ಪ್ರದೇಶವಾದ ಆನೇಕಲ್ ತಾಲೂಕಿನಲ್ಲಿಯೂ ಬಾರಿ ಗುಡುಗು, ಮಿಂಚು ಗಾಳೀ ಸಹಿತ ಮಳೆ ಸುರಿದಿದೆ. ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಗೋಡಿ ಸೇರಿದಂತೆ ಹಲವೆಡೆ ವರುಣ ಅಬ್ಬರಿಸಿದ್ದಾನೆ. 

ಭಾರೀ ಮಳೆಯಿಂದ ರಸ್ತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ನಿಂತಿದ್ದು,  ವಾಹನ ಸವಾರರು ಪರದಾಡುವಂತಾಗಿದೆ. 

PREV
click me!

Recommended Stories

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!
ಅಯ್ಯಪ್ಪ ಮಾಲಾಧಾರಿ ಆಟೋ ಚಾಲಕನಿಗೆ ಕಿವಿಯಲ್ಲಿ ರಕ್ತ ಬರುವಂತೆ ಹಲ್ಲೆ ನಡೆಸಿದ ಬೆಂಗಳೂರು ಟ್ರಾಫಿಕ್ ಪೊಲೀಸ್!