ಕರಾವಳಿಯಲ್ಲಿ ಗುಡುಗು ಸಹಿತ ಗಾಳಿ ಮಳೆ

Kannadaprabha News   | Asianet News
Published : May 15, 2020, 10:30 AM IST
ಕರಾವಳಿಯಲ್ಲಿ ಗುಡುಗು ಸಹಿತ ಗಾಳಿ ಮಳೆ

ಸಾರಾಂಶ

ಕರಾವಳಿ ಪ್ರದೇಶಗಳಾದ ಸುಬ್ರಹ್ಮಣ್ಯ, ಉಡುಪಿಯಲ್ಲಿ ಗುರುವಾರ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಮಲೆನಾಡು ಪ್ರದೇಶವಾದ ಕೊಡಗಿನಲ್ಲಿ ಸಾಧಾರಣ ಮಳೆಯಾಗಿದೆ.

ಬೆಂಗಳೂರು(ಮೇ 15): ಕರಾವಳಿ ಪ್ರದೇಶಗಳಾದ ಸುಬ್ರಹ್ಮಣ್ಯ, ಉಡುಪಿಯಲ್ಲಿ ಗುರುವಾರ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಮಲೆನಾಡು ಪ್ರದೇಶವಾದ ಕೊಡಗಿನಲ್ಲಿ ಸಾಧಾರಣ ಮಳೆಯಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ನಿರಂತರ ಒಂದು ಗಂಟೆಗಳ ಕಾಲ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಮನೆಗಳ ಮೇಲೆ ಮರ ಬಿದ್ದು ಹಾನಿ ಉಂಟಾಯಿತು.

ಶಿವಮೊಗ್ಗದಲ್ಲಿ ಸುರಿದ ಧಾರಾಕಾರ ಮಳೆಗೆ ಮನೆ ಜಖಂ

ಅಲ್ಲದೆ ಕೆಲವು ಮನೆಗಳಿಗೆ ಅಳವಡಿಸಿದ್ದ ಸಿಮೆಂಟ್‌ ಶೀಟ್‌ಗಳು ಗಾಳಿಗೆ ಹಾರಿ ಹೋಗಿವೆ. ಮೂಡುಬಿದಿರೆಯ ಕರಿಂಜೆ ಗ್ರಾಮದ ಪಡ್ಡೋಡಿ ಬಳಿಯ ನಿವಾಸಿ ಜನಾರ್ಧನ ಗೌಡ ಎಂಬುವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದೆ. ಉಡುಪಿಯಲ್ಲಿ ವಿವಿಧೆಡೆ ಸಂಜೆ ವೇಳೆ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ಕೊಡಗು ಜಿಲ್ಲೆಯ ವಿವಿಧೆಡೆ ಕೆಲ ಕಾಲ ಮಳೆಯಾಗಿದೆ.

PREV
click me!

Recommended Stories

ರೈತರಿಗೆ ಅನುಕೂಲ ಮಾಡುವುದೇ ಗುರಿ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್
ದಾವಣಗೆರೆ ಮಹಿಳೆಯನ್ನ ಕಚ್ಚಿಕೊಂದ 2 ರಾಟ್‌ವೀಲರ್ ನಾಯಿಗಳು ಜನರ ಹಲ್ಲೆಯಿಂದ ಸಾವು; ಶ್ವಾನಗಳ ಮಾಲೀಕ ಬಂಧನ