ಮೂರ್ನಾಲ್ಕು ದಿನದಲ್ಲಿ ರಾಜ್ಯದಲ್ಲಿ ಭಾರಿ ಮಳೆ

By Web DeskFirst Published 22, May 2019, 9:13 AM IST
Highlights

ಮುಂದಿನ ಮೂರ್ನಾಲ್ಕು ದಿನದಲ್ಲಿ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಬೆಂಗಳೂರು: ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಮಳೆ ಯಾಗಲಿದ್ದು, ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 

ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ದಕ್ಷಿಣ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ
ಮಳೆಯಾಗುವ ನಿರೀಕ್ಷೆ ಇದೆ.

ಕೆಲವು ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಈಗಾಗಲೇ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು, ಇನ್ನು ಕೆಲ ಪ್ರದೇಶಗಳು ಮಳೆಯ ಅಭಾವದಿಂದ ಬಿಸಿಲಿನ ಬೇಗೆಗೆ ತತ್ತರಿಸಿದ್ದು, ಹವಾಮಾನ ಇಲಾಕೆ ಮಳೆಯ ಮುನ್ಸೂಚನೆ ನೀಡಿದೆ. 

Last Updated 22, May 2019, 9:13 AM IST