ಭಾರೀ ಮಳೆ : ಬಸವಸಾಗರದಿಂದ ಕೃಷ್ಣೆಗೆ ನೀರು - ಸ್ಥಳೀಯರಿಗೆ ಎಚ್ಚರಿಕೆ

By Web Desk  |  First Published Sep 3, 2019, 8:40 AM IST

ಇದೀಗ ಮತ್ತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣ ಮಳೆ ಸುರಿಯಲಾರಂಭಿಸಿದೆ. ಅತ್ತ ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಬಸವಸಾಗರ ಜಲಾಶಯದಿಂದ ಕೃಷ್ಣೆಗೆ ನೀರು ಹರಿಸಲಾಗಿದೆ. 


ಯಾದಗಿರಿ (ಸೆ.03) : ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಬಸವಸಾಗರ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. 

ನೀರಿನ ಒಳಹರಿವು ಹೆಚ್ಚಾದ ಕಾರಣ ಕೃಷ್ಣಾ ನದಿಗೆ ನೀರು ಹರಿಯಬಿಡಲಾಗಿದೆ. ಬಸವಸಾಗರದಿಂದ 34800 ಕ್ಯೂಸೆಕ್ ನೀರು ಹರಿಸಲಾಗಿದೆ. 

Tap to resize

Latest Videos

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಹಾರಾಷ್ಟ್ರದಲ್ಲಿ ಹಾಗೂ ಯಾದಗಿರಿ ಜಿಲ್ಲೆಯಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಯಬಿಡಲಾಗಿದೆ. 

ಜಲಾಶಯದಲ್ಲಿ ನೀರಿನ ಹರಿವು ಹೆಚ್ಚಿರುವ ಕಾರಣದಿಂದ ನದಿ ತೀರಕ್ಕೆ ತೆರಳದಂತೆ ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ. ಸುರಪುರ ತಹಶೀಲ್ದಾರ್ ಸುರೇಶ್ ಅಂಕಲಗಿ ನದಿ ತೀರಕ್ಕೆ ತೆರಳದಂತೆ ಆದೇಶ ನೀಡಿದ್ದಾರೆ. 

click me!