ಕರ್ನಾಟಕದ ಈ ಜಿಲ್ಲೆಗಳಲ್ಲಿ  ಭಾರೀ ಮಳೆ ಮುನ್ನೆಚ್ಚರಿಕೆ

By Suvarna NewsFirst Published May 18, 2020, 8:07 PM IST
Highlights

ಕರಾವಳಿ ಭಾಗದಲ್ಲಿ ಭಾರೀ ಮಳೆ ಎಚ್ಚರಿಕೆ/ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರಲ್ಲಿ ಕಾಣಿಸಿಕೊಂಡ  ವರುಣ/ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಎಚ್ಚರಿಕೆ

ಬೆಂಗಳೂರು (ಮೇ 18) ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಮಳೆಯಾಗಿದ್ದು  ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡ ಹಿನ್ನೆಲೆ ಮಳೆ ಕಾಣಿಸಿಕೊಳ್ಳುತ್ತಿದೆ.  ಮೇ 19  ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

64  ಮೀಮಿ  ನಿಂದ 115 ಮೀಮೀ ಮಳೆ ಬಿಳುವ ಸಾಧ್ಯತೆ ಇದೆ.  ಎಚ್ಚರಿಕೆಯಿಂದ ಇರಲು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ತಿಳಿಸಲಾಗಿದ್ದು   ತುರ್ತು ಸೇವೆಗೆ ಟೋಲ್ ಫ್ರೀ ನಂಬರ್ 1077 ಕರೆ ಮಾಡಲು ಮನವಿ ಮಾಡಿಕೊಳ್ಳಲಾಗಿದೆ

ಅಂಫಾನ್ ಚಂಡಮಾರುತದ ಕತೆ ಏನು?

ಕೊಡಗು, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಕೆಲವೆಡೆ ಭಾರೀ ಮಳೆಯಾಗಿದೆ. ರಾಜಧಾನಿ ಬೆಂಗಳೂರು, ರಾಮನಗರ, ತುಮಕೂರು,ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಒಳನಾಡಿನಲ್ಲಿಯೂ ವರಣ ಕಾಣಿಸಿಕೊಂಡಿದ್ದಾನೆ. 

ವೇಗ ಪಡೆದುಕೊಂಡಿರುವ ಅಂಫಾನ್ ಚಂಡಮಾರುತ  ಒಡಿಸ್ಸಾ, ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾ ದೇಶದ ಕಡೆಗೆ ಚಲಿಸುತ್ತಿದೆ. ಗಂಟೆಗೆ 150 ಕಿ.ಮೀ.ಗಿಂತ ಹೆಚ್ಚು ವೇಗದ ಗಾಳಿ ಬೀಸುತ್ತಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 200 ಕಿ.ಮೀ.ಗೆ ಹೆಚ್ಚಾಗಲಿದೆ.

ಕರಾವಳಿ, ಮಲೆನಾಡು ಹಾಗೂ ರಾಜ್ಯದ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ. ಚಂಡಮಾರುತ ದುರ್ಬಲಗೊಂಡ ನಂತರ ಮಳೆ ಒಂದು ವಾರ ಬಿಡುವು ಕೊಡಲಿದೆ.  ವಾತಾವರಣದಲ್ಲಿರುವ ತೇವಾಂಶವನ್ನು ಚಂಡಮಾರುತ ಸೆಳೆದುಕೊಳ್ಳುತ್ತಿರುವುದರಿಂದ ಪೂರ್ವ ಮುಂಗಾರು ಮಳೆ ಪ್ರಮಾಣ ಇಳಿಕೆಯಾಗಲಿದೆ ಎಂದು ಅವರು ಹೇಳಿದರು.

 

click me!