ಕರಾವಳಿಯಲ್ಲಿ ಇಂದು, ನಾಳೆ ಭಾರೀ ಮಳೆ: ಆರೆಂಜ್‌ ಅಲರ್ಟ್‌ ಘೋಷಣೆ

By Kannadaprabha News  |  First Published Jun 30, 2022, 3:00 AM IST

*  ಕರಾವಳಿಯಲ್ಲಿ ಇಂದು, ನಾಳೆ ಭಾರೀ ಮಳೆ ಮುನ್ಸೂಚನೆ
*  ಕರಾವಳಿ ಜಿಲ್ಲೆಯಾದ್ಯಂತ ಬುಧವಾರ ವೇಗ ಪಡೆದುಕೊಂಡ ಮುಂಗಾರು ಮಳೆ 
*  ಜೂ.30 ಮತ್ತು ಜುಲೈ 1ರಂದು ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌ 
 


ಮಂಗಳೂರು(ಜೂ.30): ಕರಾವಳಿ ಜಿಲ್ಲೆಯಾದ್ಯಂತ ಬುಧವಾರ ಮುಂಗಾರು ಮಳೆ ವೇಗ ಪಡೆದುಕೊಂಡಿದೆ. ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಇಡೀ ದಿನ ಮಳೆಯಾಗಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ ಜೂ.30 ಮತ್ತು ಜುಲೈ 1ರಂದು ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌ ಮುಂದುವರಿಯಲಿದ್ದು, ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

Tap to resize

Latest Videos

Raichur ಬಾರೋ...ಬಾರೋ ಮಳೆರಾಯ...ನಿತ್ಯ ಮಳೆಗಾಗಿ ಜಪಿಸುತ್ತಿರುವ ಅನ್ನದಾತರು!

ಬುಧವಾರ ಬೆಳಗ್ಗಿನಿಂದಲೇ ಗ್ರಾಮಾಂತರ ಪ್ರದೇಶದ ಅಲ್ಲಲ್ಲಿ ಮಳೆ ಸುರಿಯತೊಡಗಿತ್ತು. ದಿನವಿಡೀ ಮೋಡ ಹಾಗೂ ಮಳೆಯಾಗಿದ್ದು, ಜನತೆಯನ್ನು ಚಳಿ ಹಿಡಿಸಿದೆ. ಎಡೆಬಿಡದೆ ಸುರಿದ ಮಳೆಗೆ ಮಂಗಳೂರು ನಗರದ ತಗ್ಗು ಪ್ರದೇಶದ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ಅಡ್ಡಿಯಾಗಿದೆ. ನಾಗುರಿಯ ಕಪಿತಾನಿಯಾ ಬಳಿ ಮಂಗಳವಾರ ರಾತ್ರಿ ರಸ್ತೆ ಬದಿ ಸರಕು ಕಂಟೈನ್‌ ಲಾರಿ ಕೆಸರಿಗೆ ಸಿಲುಕಿದ್ದು ಬುಧವಾರ ಮಧ್ಯಾಹ್ನ ವೇಳೆಗೆ ಅದನ್ನು ಕ್ರೇನ್‌ ಮೂಲಕ ತೆರವುಗೊಳಿಸಲಾಯಿತು.

ದ.ಕ. ಜಿಲ್ಲೆಯಲ್ಲಿ ದಿನದ ಸರಾಸರಿ ಮಳೆ 42.3 ಮಿಲಿ ಮೀಟರ್‌ ಆಗಿದೆ. ಜಿಲ್ಲೆಯ ಬೆಳ್ತಂಗಡಿ 36.6 ಮಿ.ಮೀ, ಬಂಟ್ವಾಳ 68.7 ಮಿ.ಮೀ, ಮಂಗಳೂರು 28.5 ಮಿ.ಮೀ, ಪುತ್ತೂರು39.7 ಮಿ.ಮೀ, ಸುಳ್ಯ 32.5 ಮಿ.ಮೀ, ಮೂಡುಬಿದಿರೆ 56.5 ಮಿ.ಮೀ, ಹಾಗೂ ಕಡಬದಲ್ಲಿ 43.4 ಮಿ.ಮೀ. ಮಳೆ ದಾಖಲಾಗಿದೆ.
 

click me!