ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇಂದಿನಿಂದ 4 ರವರೆಗೆ ಈ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು(ಜು.03): ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇಂದಿನಿಂದ 4 ರವರೆಗೆ ಈ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ ಇಂದಿನಿಂದ 4 ರವರೆಗೆ ಈ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.
undefined
ಮಧ್ಯರಾತ್ರಿ ಭಾರೀ ಮಳೆಯಲ್ಲೇ ಸಹುದ್ಯೋಗಿಗಳಿಗೆ ಆಹಾರ ಕಿಟ್ ತಲುಪಿಸಿದ ಇನ್ಸ್‌ಪೆಕ್ಟರ್..!
ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿಕೆ ನೀಡಿದ್ದು, ಜೂನ್ 1 ರಿಂದ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯ ಕೊರತೆ ಕಂಡುಬಂದಿದೆ. ಆದರೆ ಈ ಜಿಲ್ಲೆಗಳಲ್ಲಿ ಮುಂದಿನ ವಾರ ಮಳೆಯ ತೀವ್ರತೆ ಜಾಸ್ತಿ ಇರಲಿದೆ. ಇಂದು ಕರಾವಳಿ & ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗಿದೆ ಎಂದಿದ್ದಾರೆ.
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಮಳೆ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 8.1 ಸೆ.ಮೀ ಮಳೆ ದಾಖಲಾಗಿದೆ. ಅರಬ್ಬೀ ಸಮುದ್ರದ ಮಧ್ಯೆಭಾಗದಲ್ಲಿ ಸರ್ಕ್ಯುಲೇಶನ್ 5.8 ಕಿ.ಮೀ ಎತ್ತರದಲ್ಲಿರುವುದರಿಂದ ಹಾಗೂ ಪೂರ್ವ ಅರಬ್ಬೀ ಸಮುದ್ರದಲ್ಲಿ ಕೇರಳ, ಕರ್ನಾಟಕ, ಮಹಾರಾಷ್ಟ್ರದವರೆಗೂ ಟ್ರಫ್ ಇರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳವರೆಗೆ ವ್ಯಾಪಕ ಮಳೆಯಾಗಲಿದೆ ಎಂದಿದ್ದಾರೆ.
ಕಲಬುರಗಿ: ಮಹಾಮಳೆಗೆ ಜನಜೀವನ ಅಸ್ತವ್ಯಸ್ತ, ಸೇತುವೆ ಕುಸಿದು, ರಸ್ತೆ ಮುಳುಗಡೆ
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ ನಾಲ್ಕರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹೀಗಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಈ 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದಿದ್ದಾರೆ.
#NewsIn100Seconds | ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್