ಕರಾವಳಿಯಲ್ಲಿ ಮೂರು ದಿನ ಬಿರುಗಾಳಿ ಸಹಿತ ಮಳೆ ಸಾಧ್ಯತೆ

By Kannadaprabha NewsFirst Published Jul 10, 2019, 1:55 PM IST
Highlights

ಮಂಗಳೂರು ಸೇರಿದಂತೆ ದ.ಕ.ಜಿಲ್ಲೆಯಾದ್ಯಂತ ಮಂಗಳವಾರ ಸಂಜೆಯಿಂದ ಮುಂಗಾರು ಮಳೆ ಚುರುಕುಗೊಂಡಿದೆ.

ಮಂಗಳೂರು (ಜು. 10): ಮಂಗಳೂರು ಸೇರಿದಂತೆ ದ.ಕ.ಜಿಲ್ಲೆಯಾದ್ಯಂತ ಮಂಗಳವಾರ ಸಂಜೆಯಿಂದ ಮುಂಗಾರು ಮಳೆ ಚುರುಕುಗೊಂಡಿದೆ. ಇದೇ ವೇಳೆ ಕರಾವಳಿಯಲ್ಲಿ ಮುಂದಿನ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ 3.5ರಿಂದ 4ಮೀಟರ್ ಎತ್ತರಕ್ಕೆ ಅಲೆಗಳು ಏಳುವ ಸಂಭವ ಇದ್ದು, ಜು.9 ರಿಂದ 11 ರವರೆಗೂ ಮಂಗಳೂರಿನಿಂದ ಕಾರವಾರವರೆಗೆ ಸೆಕೆಂಡಿಗೆ 22ರಿಂದ 40 ಸೆಂಟಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಗೆ ನೀಡಲಾಗಿದೆ. ಮಂಗಳವಾರದಿಂದ ಮುಂದಿನ ಐದು ದಿನಗಳ ಕಾಲ ಕರಾವಳಿ ಸಮುದ್ರದಲ್ಲಿ ಆಗ್ನೇಯ ದಿಕ್ಕಿನದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಭಾರಿ ಬಿರುಗಾಳಿ ಬೀಸುವ ಸಂಭವವನ್ನು ಹವಾಮಾನ ಇಲಾಖೆ ಹೇಳಿದೆ.

ಬೆಳ್ತಂಗಡಿಯಲ್ಲಿ ಗರಿಷ್ಠ ಮಳೆ

ಮಂಗಳವಾರ ಬೆಳಗ್ಗಿನವರೆಗೆ ದ.ಕ. ಜಿಲ್ಲೆಯ ಬೆಳ್ತಂಗಡಿಯಲ್ಲಿ ಗರಿಷ್ಠ 35.7 ಮಿಲಿ ಮೀಟರ್ ಮಳೆ ದಾಖಲಾಗಿದೆ. ಬಂಟ್ವಾಳ 20.3 ಮಿ.ಮೀ, ಮಂಗಳೂರು 10.೯ ಮಿ.ಮೀ, ಪುತ್ತೂರು 30೦.7 ಮಿ.ಮೀ, ಸುಳ್ಯ 31.6 ಮಿ.ಮೀ. ಮಳೆ ದಾಖಲಾಗಿದೆ. ದಿನದ ಒಟ್ಟು ಮಳೆ 25.6 ಮಿ.ಮೀ. ಆಗಿದ್ದು, ಕಳೆದ ವರ್ಷ 52.3 ಮಿ.ಮೀ. ಗರಿಷ್ಠ ಮಳೆ ದಾಖಲಾಗಿದೆ.

ಜುಲೈನಲ್ಲಿ ಒಟ್ಟು 226.1 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ 398.2 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 725.7 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ 3,131.1 ಮಿ.ಮೀ. ಮಳೆ ದಾಖಲಾಗಿತ್ತು. ಉಪ್ಪಿನಂಗಡಿಯಲ್ಲಿ ನೇತ್ರಾವತಿ ಮತ್ತು ಕುಮಾರಧಾರ ನದಿ ನೀರಿನ ಮಟ್ಟ 5 ಮೀಟರ್‌ಗೆ ಏರಿಕೆಯಾಗಿದೆ. ಬಂಟ್ವಾಳದಲ್ಲಿ ನೇತ್ರಾವತಿ ನದಿ 14 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ.

click me!