2 - 3 ದಿನ ಕರಾವಳಿ, ಮಲೆನಾಡಲ್ಲಿ ಹೆಚ್ಚಿನ ಮಳೆ

By Web DeskFirst Published Aug 30, 2019, 11:07 AM IST
Highlights

 ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಸೆ.2ರಿಂದ ರಾಜ್ಯದ ಕರಾವಳಿ, ಮಳೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ. 

ಬೆಂಗಳೂರು [ಆ.30]:  ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಸೆ.2ರಿಂದ ರಾಜ್ಯದ ಕರಾವಳಿ, ಮಳೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. 

ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಬೀದರ್‌, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೆ.2ರಿಂದ ಎರಡು ಮೂರು ದಿನ ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ ತಿಳಿಸಿದ್ದಾರೆ.

ಕರಾವಳಿಯ 3 ಜಿಲ್ಲೆಗಳು ಸೇರಿ ಮಲೆನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನದಲ್ಲಿ ಮುಂದಿನ 24 ಗಂಟೆಗಳಲ್ಲಿ (ಶುಕ್ರವಾರ) 65ರಿಂದ 115 ಮಿ.ಮೀ.ವರೆಗೆ ಮಳೆಯಾಗಲಿದೆ ಎಂದಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಏಳು ಜಿಲ್ಲೆಗೆ ಎಲ್ಲೋ ಅಲರ್ಟ್‌:  ಗುರುವಾರ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಿದೆ. ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ಮಲೆನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನದಲ್ಲಿ ಮುಂದಿನ 24 ಗಂಟೆಗಳಲ್ಲಿ (ಶುಕ್ರವಾರ) 65ರಿಂದ 115 ಮಿ.ಮೀ.ವರೆಗೆ ಮಳೆಯಾಗಲಿದೆ ಎಂಬ ಕಾರಣಕ್ಕೆ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ (ಎಲ್ಲೋ ಅಲರ್ಟ್‌) ನೀಡಿದೆ.

click me!