ವಾಯುಭಾರ ಕುಸಿತ : ಮತ್ತೆ ರಾಜ್ಯಕ್ಕೆ ಭಾರೀ ಮಳೆ ಎಚ್ಚರಿಕೆ- ಎಲ್ಲೆಲ್ಲಿ..?

By Kannadaprabha NewsFirst Published Oct 18, 2020, 9:26 AM IST
Highlights

ರಾಜ್ಯದಲ್ಲಿ ಈಗಾಗಲೇ ಮಳೆಯ ಅಬ್ಬರಿಂದ ಜನತೆ ನಲುಗಿದ್ದು ಇದೀಗ ಮತ್ತೆ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. 

ಬೆಂಗಳೂರು (ಅ.18):  ಅರಬ್ಬಿ ಸಮುದ್ರದಲ್ಲಿ ಪ್ರತ್ಯೇಕ ವಾಯುಭಾರ ಕುಸಿತದ ಲಕ್ಷಣಗಳು ಕಂಡುಬಂದಿದ್ದು, ಅ.19ರಂದು ಇದರ ತೀವ್ರತೆ ಹೆಚ್ಚಾಗಲಿರುವ ಪರಿಣಾಮ ರಾಜ್ಯದ ವಿವಿಧೆಡೆ ಅ.21ರಿಂದ ವ್ಯಾಪಕ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಅನೇಕ ಕಡೆ ಎರಡು-ಮೂರು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ವಾಯುಭಾರ ತೀವ್ರಗೊಂಡರೆ ಅ.21ರಂದು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಭಾರಿ ಮಳೆ ಬೀಳಲಿದ್ದು, ಬೀದರ್‌, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

ರೋಣ: ಭೀಕರ ಮಳೆ, ಮಣ್ಣಿನ ಮನೆ ಮುಂಭಾಗ ಕುಸಿದು ವೃದ್ಧೆ ಸಾವು

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಹ ಅ.19ರಂದು ವ್ಯಾಪಕ ಮಳೆ ಬರಲಿದೆ. ಸದ್ಯ ರಾಜ್ಯದಲ್ಲಿ ಮುಂಗಾರಿನ ಆರ್ಭಟ ಕ್ಷಿಣಿಸಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಕಚೇರಿ ನಿರ್ದೇಶಕ ಸಿ.ಎಸ್‌.ಪಾಟೀಲ್‌ ಮಾಹಿತಿ ನೀಡಿದ್ದಾರೆ.

"

click me!