ಇಂದಿನಿಂದ ರಾಜ್ಯದಲ್ಲಿ 3 ದಿನ ಭಾರಿ ಮಳೆ : ಎಲ್ಲೆಲ್ಲಿ..?

By Kannadaprabha NewsFirst Published Sep 6, 2020, 7:18 AM IST
Highlights

ಇಂದಿನಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 

ಬೆಂಗಳೂರು (ಸೆ.06): ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ (ಸೆ.6ರಿಂದ 8ರವರೆಗೆ) ಗುಡುಗು ಸಹಿತ ಭಾರಿ ಮಳೆಯಾಗಲಿದೆ.

ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿ ಕೆಲವು ಕಡೆಗಳಲ್ಲಿ ಸೆ. 6 ಮತ್ತು 7ರಂದು ಭಾರಿ ಮಳೆಯಾಗುವುದರಿಂದ ‘ಯೆಲ್ಲೋ ಅಲರ್ಟ್‌’ ಹಾಗೂ ಸೆ. 8ರಂದು ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಅತಿ ಹೆಚ್ಚು ಮಳೆ ಬೀಳುವ ನಿರೀಕ್ಷೆ ಹಿನ್ನೆಲೆಯಲ್ಲಿ ‘ಆರೆಂಜ್‌ ಅಲರ್ಟ್‌’ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಾಗೂ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವುದರಿಂದ ಸೆ. 7 ಮತ್ತು 8 ರಂದು ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ.

ವರುಣನ ರೌದ್ರಾವತಾರ, ರಾಜ್ಯದ 150ಕ್ಕೂ ಹೆಚ್ಚು ಅಣೆಕಟ್ಟು ಅಪಾಯದಲ್ಲಿ! ..

ನಿನ್ನೆ ಎಲ್ಲೆಲ್ಲಿ ಮಳೆ: ಸೆ.5ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಜಯಪುರ 6 ಸೆಂ.ಮೀ, ಹಾಸನ 5, ಚಿಕ್ಕಮಗಳೂರಿನ ಶೃಂಗೇರಿ ಮತ್ತು ಬಾಳೆಹೊನ್ನೂರು, ಶಿವಮೊಗ್ಗದ ಲಿಂಗನಮಕ್ಕಿ, ಹುಂಚದಕಟ್ಟೆ, ಶಿರಾಳಕೊಪ್ಪ ಮತ್ತು ಹೊಸನಗರ, ಹಾಸನದ ನುಗ್ಗೆಹಳ್ಳಿಯಲ್ಲಿ 4 ಸೆಂ.ಮೀ ಮಳೆಯಾಗಿದೆ.

click me!