ಮಹಾರಾಷ್ಟ್ರದಲ್ಲಿ ಹೆಚ್ಚಿದ ಮಳೆ, ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ!

By Suvarna News  |  First Published Jul 25, 2023, 8:22 PM IST

ಮಹಾರಾಷ್ಟ್ರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ ವಿವಿಧ ಜಲಾಶಯಗಳ ಒಳ ಹರಿವು ಹೆಚ್ಚಳವಾಗುತ್ತಿದ್ದು, ರಾಜ್ಯದ ಗಡಿ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸುವ ಸಾಧ್ಯತೆ ಕಂಡು ಬರುತ್ತಿದೆ


ವರದಿ: ಮಲ್ಲಿಕಾರ್ಜುನ ಹೊಸಮನಿ

ಬಾಗಲಕೋಟೆ (ಜು.25): ಮಹಾರಾಷ್ಟ್ರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ ವಿವಿಧ ಜಲಾಶಯಗಳ ಒಳ ಹರಿವು ಹೆಚ್ಚಳವಾಗುತ್ತಿದ್ದು, ಪ್ರವಾಹ ಸಂಭವಿಸುವ ಸಾಧ್ಯತೆ ಕಂಡು ಬರುತ್ತಿದೆ. ಪ್ರವಾಹ ನಿರ್ವಹಣೆಗೆ ಅಧಿಕಾರಿಗಳು ಸನ್ನದ್ದರಾಗುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ತಿಳಿಸಿದರು.

Tap to resize

Latest Videos

ಬಾಗಲಕೋಟೆ  ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಜರುಗಿದ ಜಿಲ್ಲಾ ಪಂಚಾಯತ ಮೊದಲನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ,  ಅವರು ಕಳೆದ ನಾಲ್ಕೈದು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿ ಕಂಡುಬರುತ್ತಿದೆ. ಈಗಾಗಲೇ ಕೃಷ್ಣಾ ನದಿಯಿಂದ 1.26 ಲಕ್ಷ ಕ್ಯೂಸೆಕ್ಸ್ ಹರಿದು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇದರ ಪ್ರಮಾಣ ಹೆಚ್ಚಾಗುತ್ತಾ ಹೋದಲ್ಲಿ ಪ್ರವಾಹ ಉಂಟಾಗುತ್ತಿದ್ದು, ನಿರ್ವಹಣೆಗೆ ಅಧಿಕಾರಿಗಳು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಕೈಗೊಳ್ಳಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಹಾವೇರಿ ಜಿಲ್ಲೆ ವಿವಿಧ ಸೂಚ್ಯಂಕಗಳಲ್ಲಿ ತೀರಾ ಕಳಪೆ, ಪ್ರಗತಿ ಸಾಧಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ವಿವೇಕ ಯೋಜನೆಯಡಿ ಜಿಲ್ಲೆಗೆ 199 ಕೊಠಡಿಗಳು ಮಂಜೂರು: ಹುಕ್ಕೇರಿ
ಶಾಲಾ ಕೊಠಡಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿಯವರು ಮಾತನಾಡಿ ಪ್ರತಿ ಮತಕ್ಷೇತ್ರದ ವಿವೇಕ ಯೋಜನೆಯಡಿ ಜಿಲ್ಲೆಗೆ 199 ಕೊಠಡಿಗಳು ಮಂಜೂರಾಗಿವೆ. ಮಂಜೂರಾದ ಕೊಠಡಿಗಳು ಸದಸ್ಯ ಎಷ್ಟು ಪೂರ್ಣಗೊಂಡಿವೆ. ಬಾಕಿ ಇರುವುದು ಎಷ್ಟು ಎಂದು ಸಭೆಯಲ್ಲಿ ಪ್ರಶ್ನಿಸಿದಾಗ ಇದಕ್ಕೆ ಪ್ರತಿಕ್ರಿಯಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಗಳು ಕೊಠಡಿ ನಿರ್ಮಾಣಕ್ಕೆ ಪಂಚಾಯತ ರಾಜ್ ಇಲಾಖೆಗೆ ನೀಡಲಾಗಿದೆ ಎಂದರು. ಪಂಚಾಯತ್ ರಾಜ್ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಕಟ್ಟಿ 199 ಕೊಠಡಿ ಪೈಕಿ 145ಕ್ಕೆ ಟೆಂಡರ್ ಆಗಿದೆ. ಅದರಲ್ಲಿ 4 ಮಾತ್ರ ಪೂರ್ಣಗೊಂಡಿದ್ದು, ಉಳಿದವರು ಛಾವಣಿ ಹಂತದಲ್ಲಿರುವುದಾಗಿ ತಿಳಿಸಿದರು.

ಮುಳುಗಡೆ ಪ್ರದೇಶದ ವ್ಯಾಪ್ತಿಯಲ್ಲಿ ಶಾಲೆಗಳು ಸುಸ್ಥಿತಿಯಲ್ಲಿ ಇಲ್ಲ:ಸಿದ್ದು ಸವದಿ 
ಸರಿಯಾದ ಸಮಯದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಮತ್ತು ದುರಸ್ಥಿ ಕಾರ್ಯ ನಡೆಯುತ್ತಿಲ್ಲ. ಜಿಲ್ಲೆಯ ಮುಳುಗಡೆ ಪ್ರದೇಶದ ವ್ಯಾಪ್ತಿಯಲ್ಲಿ ಶಾಲೆಗಳು ಸುಸ್ಥಿತಿಯಲ್ಲಿ ಇಲ್ಲ. ಮಳೆಗಾಲದಲ್ಲಿ ಸೋರುತ್ತಿವೆ ಎಂದು ತೇರದಾಳ ಶಾಸಕ ಸಿದ್ದು ಸವದಿ ತಿಳಿಸಿದರೆ, ಶಾಲಾ-ಕಾಲೇಜುಗಳಲ್ಲಿ ಮುಖ್ಯವಾಗಿ ಶೌಚಾಲಯ ಇರಬೇಕು. ಇದರಿಂದ ಮಕ್ಕಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಸಭೆಯ ಗಮನಕ್ಕೆ ತಂದರು. ನರೇಗಾದಡಿಯಲ್ಲಿ ಗ್ರಾಮೀಣ ಭಾಗದ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಕ್ರಮಕೈಗೊಳ್ಳಲು ಸಚಿವರು ಸೂಚಿಸಿದರು.

ಮಳೆ ಅಬ್ಬರ ಅವಘಡಗಳ ಸರಣಿ, ಮುಳ್ಳಯ್ಯನಗಿರಿಯಲ್ಲಿ ಭೂ ಕುಸಿತ , ಪ್ರವಾಸಿಗರಿಗೆ ನಿರ್ಬಂಧ

ಗ್ರಾಮೀಣ ಪ್ರದೇಶದಲ್ಲಿ 1767, ನಗರ ಪ್ರದೇಶದಲ್ಲಿ 671 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಇದರಿಂದ ಸರಕಾರಕ್ಕೆ ಹೆಚ್ಚಿನ ಹೊರೆಯಾಗುತ್ತಿದ್ದು, ಸ್ವಯಂತ ಕಟ್ಟಡಕ್ಕೆ ಕ್ರಮವಹಿಸುವಂತೆ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ ಮತ್ತು ಹನಮಂತ ನಿರಾಣಿ ಒಕ್ಕೊರಲಾಗಿ ಸಭೆಗೆ ತಿಳಿಸಿದಾಗ ಶಾಸಕರಲ್ಲಿದ್ದ ಶಿಕ್ಷಣದ ಖಾಳಜಿಯನ್ನು ಕಂಡು ಸಚಿವ ತಿಮ್ಮಾಪೂರ ಮೆಚ್ಚುಗೆ ವ್ಯಕ್ತಪಡಿಸಿ, ತಾಲೂಕಾ ಮಟ್ಟದಲ್ಲಿ ತಹಶೀಲ್ದಾರ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಶಾಲಾ ಆವರಣ, ಸಮುದಾಯ ಭವನ ಆವರಣ ಸೇರಿದಂತೆ ವಿವಿದೆಡೆ ಜಾಗವನ್ನು ಗುರುತಿಸಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಸಚಿವರು ಸೂಚಿಸಿದರು.

ಕಾನೂನಿನ ರೀತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರ ನೇಮಕಾತಿಗೆ ಕ್ರಮವಹಿಸಿ, ಅಂಗನವಾಡಿಗಳಿಗೆ ಎಂ.ಎಸ್.ಪಿ.ಟಿ.ಸಿ ಅವರು ಪೂರೈಕೆ ಮಾಡುತ್ತಿರುವ ಆಹಾರ ಪದಾರ್ಥ ಕಳಪೆ ಮಟ್ಟದಿಂದ ಕೂಡಿದ್ದು, ಪೂರೈಕೆದಾರರ ಬದಲಾವಣೆಗೆ ಶಾಸಕರು ಸಭೆಯಲ್ಲಿ ಒತ್ತಾಯಿಸಿದರು. ಈ ಬಗ್ಗೆ ಪರಿಶೀಲಿಸಿ ಬದಲಾವಣೆಗೆ ಕ್ರಮವಹಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಶಾಲಾ-ಕಾಲೇಜು, ಸರಕಾರಿ ಕಚೇರಿ ಆವರಣ ಹಾಗೂ ವಿವಿಧ ಸಂಘ ಸಂಸ್ಥೆಗಳ ಆವರಣದಲ್ಲಿ ಗಿಡಗಳನ್ನು ನೆಟ್ಟ ಬಗ್ಗೆ ಮಾಹಿತಿ ಕೇಳಿದಾಗ ಇದಕ್ಕೆ ಉತ್ತರಿಸಿದ ಸಾಮಾಜಿಕ ಅರಣ್ಯ ಉಪ ಸಂರಕ್ಷಣಾಧಿಕಾರಿಗಳು ಒಟ್ಟು 5200 ಗಿಡಗಳನ್ನು ನೆಡಲಾಗಿದ್ದು, ಅದರಲ್ಲಿ ಶೇ.90 ರಷ್ಟು ಬೆಳೆದಿರುವುದಾಗಿ ತಿಳಿಸಿದರು. 

ವಾಡಿಕೆ ಮಳೆಗಿಂತ ಹೆಚ್ಚಿಗೆ ಮಳೆ, ಮಾಹಿತಿ ನೀಡದ ಅಧಿಕಾರಿಗೆ ತರಾಟೆ:
ಇನ್ನು  ಜಿಲ್ಲೆಯಲ್ಲಿ ಮುಂಗಾರು ಸಂಪೂರ್ಣ ವಿಫಲವಾಗಿದ್ದು, ಕಳೆದ ನಾಲ್ಕೈದು ದಿನಗಳಲ್ಲಿ ವಾಡಿಕೆ ಮಳೆಗಿಂತ ಹೆಚ್ಚಿಗೆ ಮಳೆಯಾಗುತ್ತಿದೆ. ಈ ಬಗ್ಗೆ ಮಾಹಿತಿ ಸರಿಯಾಗಿ ನೀಡದ ಜಂಟಿ ಕೃಷಿ ನಿರ್ದೇಶಕ ಎಲ್.ಟಿ.ರೂಢಗಿ ಅವರಿಗೆ ಸಭೆಯಲ್ಲಿ ಸರಿಯಾದಿ ಮಾಹಿತಿ ನೀಡಲು ಏನು ತೊಂದರೆ, ಕೇಳಿದ ಪ್ರಶ್ನೆಗೆ ಸರಿಯಾದ ಉತ್ತರ ನೀಡಲು ತಯಾರಾಗಿ ಬರಬೇಕು. ಬೇಜವಾಬ್ದಾರಿ ಉತ್ತರ ನೀಡದಂತೆ ಎಚ್ಚರಿಕೆ ನೀಡಿದರು. ಮುಂಗಾರು ವಿಫಲವಾಗಿದ್ದು, ಬರಗಾಲ ಎಂದು ಘೋಷಿಸಲು ಪ್ರಸ್ತಾವನೆ ಕಳುಸಹಿಲು ತಿಳಿಸಿದರು. ನಂತರ ಇತರೆ ಇಲಾಖೆಗಳ ಪ್ರಗತಿಯ ಮಾಹಿತಿಯನ್ನು ಸಚಿವರು ಪಡೆದುಕೊಂಡರು.

ಸಭೆಯಲ್ಲಿ ಶಾಸಕರಾದ ಎಚ್.ವಾಯ್.ಮೇಟಿ, ಜೆ.ಟಿ.ಪಾಟೀಲ, ಸಿದ್ದು ಸವದಿ, ಬಿ.ಬಿ.ಚಿಮ್ಮನಕಟ್ಟಿ, ಅಶೋಕ ದುಡಗುಂಟಿ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಹನಮಂತ ನಿರಾಣಿ, ಪಿ.ಎಚ್.ಪೂಜಾರ, ವಿಜಯಾನಂದ ಕಾಶಪ್ಪನವರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹಮ್ಮದ ಮೊಹಸಿನ್, ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ, ಯುಕೆಪಿ ಮಹಾವ್ಯವಸ್ಥಾಪಕ ರಮೇಶ ಕಳಸದ, ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಉಪವಿಭಾಗಾಧಿಕಾರಿಗಳಾದ ಸ್ವೇತಾ ಬೀಡಿಕರ, ಸಂತೋಷ ಕಾಮಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

click me!