ಬೆಂಗಳೂರು: ಯಲಹಂಕದಲ್ಲಿ 120 ವರ್ಷದಲ್ಲೇ ಅಧಿಕ ಮಳೆ, ಡಿ.ಕೆ.ಶಿವಕುಮಾರ್

By Kannadaprabha News  |  First Published Oct 24, 2024, 10:32 AM IST

ಯಲಹಂಕ ಇತಿಹಾಸದಲ್ಲಿಯೇ 115- 120 ವರ್ಷಗಳ ನಂತರ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಎಲ್ಲೆಲ್ಲಿ ನೀರು ನುಗ್ಗುತ್ತಿದೆ ಹಾಗೂ ನೀರು ಸರಾಗವಾಗಿ ಹರಿಯುವ ವ್ಯವಸ್ಥೆಗೆ ಜಾಗಗಳನ್ನು ಗುರುತಿಸಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ 


ಬೆಂಗಳೂರು(ಅ.24):  ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟನ್ನು ಸದ್ಯಕ್ಕೆ ರಕ್ಷಣಾ ಕಾರ್ಯಕ್ಕಾಗಿ ಬಿಬಿಎಂಪಿ ಸುಪರ್ದಿಗೆ ತೆಗೆದುಕೊಂಡಿದೆ. ಶೇ.95ರಷ್ಟು ನಿವಾಸಿಗಳು ಸ್ಥಳಾಂತರಕ್ಕೆ ಸಹಕಾರ ನೀಡಿದ್ದಾರೆ. 20 ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದಿದ್ದರೂ ನಾವು ಇರುತ್ತೇವೆ ಎನ್ನುತ್ತಿದ್ದಾರೆ. ಅವರನ್ನು ಇಲ್ಲಿಯೇ ಬಿಡಲು ಸಾಧ್ಯವಿಲ್ಲ. ಕುಡಿಯಲು ನೀರು, ತಿನ್ನಲು ಆಹಾರವಿಲ್ಲ. ಹೀಗಿದ್ದಾಗ ಏನಾದರೂ ತೊಂದರೆಯಾದರೆ ನಾವು ಜವಾಬ್ದಾರರಾ ಗುತ್ತೇವೆ. ಈ ಕಾರಣಕ್ಕೆ ಅವರ ಮನವೊಲಿಸಿ ಹತ್ತಿರದಲ್ಲಿಯೇ ವಸತಿಗೃಹಗಳಲ್ಲಿ ವ್ಯವಸ್ಥೆ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. 

ಯಲಹಂಕ ಇತಿಹಾಸದಲ್ಲಿಯೇ 115- 120 ವರ್ಷಗಳ ನಂತರ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಎಲ್ಲೆಲ್ಲಿ ನೀರು ನುಗ್ಗುತ್ತಿದೆ ಹಾಗೂ ನೀರು ಸರಾಗವಾಗಿ ಹರಿಯುವ ವ್ಯವಸ್ಥೆಗೆ ಜಾಗಗಳನ್ನು ಗುರುತಿಸಲಾಗುತ್ತಿದೆ ಎಂದು ಹೇಳಿದರು.

Tap to resize

Latest Videos

 

ಬೆಂಗಳೂರು ಮಳೆ: ನೀರು ನುಗ್ಗಿದ ಮನೆ ಮಾಲೀಕರಿಗೆ 10,000 ಪರಿಹಾರ, ಡಿ.ಕೆ.ಶಿವಕುಮಾರ್

ಕೆರೆಗಳ ಪಕ್ಕ ನೀರು ಹರಿಯಲು ಮತ್ತು ನಿಂತುಕೊಳ್ಳಲು ಜಾಗ ಎತ್ತು. ಈಗ ಜಾಗ ಕಡಿಮೆಯಾಗಿದೆ. ಅದ ಕ್ಕಾಗಿ ಶಾಶ್ವತ ಪರಿಹಾ ರವನ್ನು ಕಲ್ಪಿಸಲಾ ಗುವುದು. ಈ ರೀತಿಯ ಅವಘಡ ನಮ್ಮಲ್ಲಿ ಮಾತ್ರವಲ್ಲ, ಮುಂಬೈ ಸೇರಿದಂತೆ ಅನೇಕ ನಗರಗಳಲ್ಲಿ ಆಗಿದೆ. ಶೀಘ್ರ ಸಮಸ್ಯೆ ಬಗೆಹರಿಸುತ್ತೇವೆ ಎಂದರು.

click me!