ಕೊಡಗು ಜಿಲ್ಲೆಯಲ್ಲಿ 2018-19 ಮತ್ತು 2019-20ನೇ ಸಾಲಿನಲ್ಲಿ ಆದ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂ ಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರಿ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ರಸ್ತೆಗಳಲ್ಲಿ ಜೂ.11ರಿಂದ ಆ.10ರ ತನಕ ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಡಿಕೇರಿ(ಜೂ.10): ಕೊಡಗು ಜಿಲ್ಲೆಯಲ್ಲಿ 2018-19 ಮತ್ತು 2019-20ನೇ ಸಾಲಿನಲ್ಲಿ ಆದ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂ ಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರಿ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ರಸ್ತೆಗಳಲ್ಲಿ ಜೂ.11ರಿಂದ ಆ.10ರ ತನಕ ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಆ ದಿಸೆಯಲ್ಲಿ ಜಿಲ್ಲೆಯ ರಸ್ತೆಗಳು ಭಾರಿ ತಿರುವುಗಳು ಹಾಗೂ ಏರಿಳಿತದಿಂದ ಕೂಡಿದ್ದು, ಪ್ರಸ್ತುತ ಮುಂಗಾರು ಪ್ರಾರಂಭವಾಗಿದೆ. ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆ ಹಾಗೂ ಪ್ರಯಾಣಿಕರ ಮತ್ತು ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಕೊಡಗಿನಲ್ಲಿ ಮನೆ ಕೆಲಸದವನ ಮನೆಗೆ ಭೇಟಿ ನೀಡಿದ ಸಚಿವ ರಾಮುಲು
ನಿರ್ಬಂಧಿತ ವಾಹನಗಳು: ಎಲ್ಲ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 16, 200 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು. ಭಾರಿ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿಆಕ್ಸಿಲ್) ವಾಹನಗಳು.
ವಿನಾಯಿತಿ ನೀಡಿದ ವಾಹನಗಳು: ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿಆಕ್ಸಿಲ್ ಬಸ್‌ಗಳು ಸೇರಿದಂತೆ) ಈ ಬಗೆಯ ವಾಹನಗಳಿಗೆ ನಿರ್ಬಂಧ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.