ಭಾರೀ ವಾಹನಗಳ ರಾತ್ರಿ ಸಂಚಾರಕ್ಕೆ ನಿರ್ಬಂಧ: ಡಿಸಿ ಚಾರುಲತಾ ಸೋಮಲ್‌

By Govindaraj S  |  First Published Sep 5, 2022, 1:31 AM IST

ಜಿಲ್ಲೆಯ ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ಮತ್ತು ತಮಿಳುನಾಡಿನಿಂದ ರಾಜ್ಯಕ್ಕೆ ಪಾಲಾರ್‌ ಮೂಲಕ ಬರುವ ರಸ್ತೆಯಲ್ಲಿ 6ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.


ಚಾಮರಾಜನಗರ (ಸೆ.05): ಜಿಲ್ಲೆಯ ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ಮತ್ತು ತಮಿಳುನಾಡಿನಿಂದ ರಾಜ್ಯಕ್ಕೆ ಪಾಲಾರ್‌ ಮೂಲಕ ಬರುವ ರಸ್ತೆಯಲ್ಲಿ 6ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಹಾಗೂ 6 ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಅವರು ಶನಿವಾರ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. 

ಸಾರ್ವಜನಿಕರು, ಗ್ರಾಮಸ್ಥರಿಗೆ ಅಗತ್ಯ ವಸ್ತುಗಳ ಸಾಗಾಣಿಕೆ ವಾಹನಗಳು, ಅಗ್ನಿಶಾಮಕ ವಾಹನ, ಅಂಬುಲೆನ್ಸ್‌ ವಾಹನ, ರಾಜ್ಯ ಹಾಗೂ ಹೊರರಾಜ್ಯದ ಸಾರ್ವಜನಿಕ ವಾಹನಗಳಾದ ಸರ್ಕಾರಿ, ಖಾಸಗಿ ಬಸ್‌ಗಳು, ಸರ್ಕಾರಿ ಇತರೆ ಎಲ್ಲಾ ರೀತಿಯ ಲಘು ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. 

Tap to resize

Latest Videos

undefined

ಮಳೆ ಪರಿಹಾರ ಸಮರೋಪಾದಿಯಲ್ಲಿ ನಿರ್ವಹಿಸಿ: ಸಚಿವ ಸೋಮಣ್ಣ

ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಮದ್ರಾಸ್‌ ಹೈಕೋರ್ಟ್‌ ಆದೇಶಿಸಿರುವ ಹಿನ್ನೆಲೆ ರಾತ್ರಿ ವೇಳೆಯಲ್ಲಿ ಎಲ್ಲಾ ಮಾದರಿಯ ವಾಹನಗಳು ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಸಂಚರಿಸುತ್ತಿರುವ ಹಿನ್ನೆಲೆ ತಾಳಬೆಟ್ಟದಿಂದ ಬೆಟ್ಟದವರೆಗೆ ಮತ್ತು ಮಲೆಮಹದೇಶ್ವರ ಬೆಟ್ಟದಿಂದ ಪಾಲಾರ್‌ವರೆಗಿನ ರಸ್ತೆಯು ಕಡಿದಾದ ತಿರುವಿನಿಂದ ಕೂಡಿದ್ದು ಹಾಗೂ ಚಿಕ್ಕದಾಗಿರುವುದರಿಂದ ಭಾರೀ ವಾಹನಗಳ ಸಂಚಾರದಿಂದ ರಸ್ತೆಯಲ್ಲಿ ಸಂಚಾರ ದಟ್ಟಣೆಯಾಗಿದೆ. ಮಲೆ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾಧಿಗಳ, ಸಾರ್ವಜನಿಕರ, ಸರ್ಕಾರದ ಹಾಗೂ ತುರ್ತು ವಾಹನಗಳ ಸುಗಮ ಸಂಚಾರವು ಕಷ್ಟಸಾಧ್ಯ.

ಈ ಹಿನ್ನೆಲೆ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1988ರ ಸೆಕ್ಷನ್‌ 115, ಕರ್ನಾಟಕ ಮೋಟಾರು ವಾಹನಗಳ ನಿಯಾಮಾವಳಿ-1989ರ ನಿಯಮ 221-ಎ(5)ರ ಹಾಗೂ ಕರ್ನಾಟಕ ಸಂಚಾರ ನಿಯಂತ್ರಣ ಕಾಯ್ದೆ 1960ರ ಸೆಕ್ಷನ್‌ 3ರ ಪ್ರಕಾರ ಹನೂರು ತಾಲೂಕಿನ ತಾಳಬೆಟ್ಟದಿಂದ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ಮತ್ತು ತಮಿಳುನಾಡಿನಿಂದ ರಾಜ್ಯಕ್ಕೆ ಪಾಲಾರ್‌ ಮೂಲಕ ಬರುವ ರಸ್ತೆಯಲ್ಲಿ 6ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಬಾರೀ ವಾಹನಗಳ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಿದೆ.

 6 ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿ ಆದೇಶಿಸಲಾಗಿದೆ ಎಂದು ತಿಳಿಸಲಾಗಿದೆ.

ಹುಂಡಿಪುರ, ಚೌಡಹಳ್ಳಿಗೆ ಹರ್‌ ಘರ್‌ ಜಲ್‌ ಪ್ರಮಾಣ ಪತ್ರ: ಬದಲಾಗಿರುವ ಹೊಸ ವ್ಯವಸ್ಥೆಗೆ ನಾವು ಹೊಂದಿಕೊಳ್ಳಬೇಕೆಂದು ಹುಂಡೀಪುರ ಗ್ರಾ.ಪಂ. ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯ ಅಧ್ಯಕ್ಷ ಮಹೇಂದ್ರ ಸಲಹೆ ನೀಡಿದರು. ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಗುಂಡ್ಲುಪೇಟೆ ವಿಭಾಗ ಹಾಗೂ ಕೈಂಡ್‌ ಹಾಟ್ಸ್‌ರ್‍ ಅನುಷ್ಠಾನ ಬೆಂಬಲ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಗುಂಡ್ಲುಪೇಟೆ ತಾಲೂಕು ಹುಂಡಿಪುರ ಗ್ರಾ. ಪಂ ವ್ಯಾಪ್ತಿಯ ಹುಂಡಿಪುರ ಮತ್ತು ಚೌಡಹಳ್ಳಿ ಗ್ರಾಮಗಳಲ್ಲಿ ಮನೆ ಮನೆಗೆ ಗಂಗೆ ಯೋಜನೆಯಡಿ ಎಲ್ಲಾ ಮನೆಗಳಿಗೂ ಶೇ. 100ರಷ್ಟುನಳ ಸಂಪರ್ಕ ಕಲ್ಪಿಸುವ ಮೂಲಕ ‘‘ಹರ್‌ ಘರ್‌ ಜಲ್‌ ’’ ಗ್ರಾಮಗಳೆಂದು ಪ್ರಮಾಣ ಪತ್ರ ನೀಡಿ ಘೋಷಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯೋಜನೆ ಅನುಷ್ಠಾನ ಮಾಡುವ ಮೊದಲು ಡ್ರೋನ್‌ ಕ್ಯಾಮೆರಾ ಮೂಲಕ ಗ್ರಾಮದ ಹಳ್ಳಿಗಳ ನಕ್ಷೆಯನ್ನು ಸೆರೆಯಿಡಿದು ಪ್ಲ್ಯಾನ್‌ ತಯಾರಿಸಿದ್ದಾರೆ. ಬದಲಾಗಿರುವ ವ್ಯವಸ್ಥೆಗೆ ನಾವು ಹೊಂದಿಕೊಳ್ಳಬೇಕೆ ಹೊರತು ಹಳೆಯ ವ್ಯವಸ್ಥೆಗೆ ಅಲ್ಲ. ಒಂದು ಉತ್ತಮ ಯೋಜನೆ ಇದಾಗಿದೆ. ಮುಂದಿನ ತಲೆಮಾರಿಗೂ ನೀರನ್ನು ಉಳಿಸುವಂತಾಗಬೇಕು ಎಂದರು. ನೀರಿನ ಬಳಕೆ ಬಗ್ಗೆ ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಿಸುವಂತಾಗಬೇಕು. ಯೋಜನೆ ತಲುಪಿದ್ದು ಗಮನಾರ್ಹ ಎಂದು ಜಲ ಜೀವನ್‌ ಮಿಷನ್‌ ಯೋಜನೆಯ ಕುರಿತು ಮಹೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.

ವಾಸ್ತವಾಂಶ ಅರಿತು ಮಾಹಿತಿ ನೀಡುವೆ: ಸಚಿವ ಸೋಮಣ್ಣ

ಹುಂಡೀಪುರ ಗ್ರಾ.ಪಂ. ಅಧ್ಯಕ್ಷೆ ಲಕ್ಷಿತ್ರ್ಮ ಮಾತನಾಡಿ, ಹೊಸತನಕ್ಕೆ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ನೀರನ್ನು ಸಂಗ್ರಹಿಸಬೇಕಾಗಿರುವ ಜವಾಬ್ದಾರಿ ಎಲ್ಲರ ಮೇಲಿದೆ. ಸಾವಿರ ಅಡಿ ಆಳಕ್ಕೆ ಅಂತರ್ಜಲ ಮಟ್ಟಕುಸಿದಿದೆ. ಗುಂಡ್ಲ್ಲುಪೇಟೆ ತಾಲೂಕು ವ್ಯಾಪ್ತಿಯಲ್ಲಿ ಬೋರ್‌ವೆಲ್‌ ಕೊರೆಸುವುದನ್ನು ನಿಷೇಧಿ​ಸಲಾಗಿದ್ದು, ರೆಡ್‌ಜೋನ್‌ ಎಂದು ಗುರುತಿಸಲಾಗಿದೆ ಎಂದರು. ಗ್ರಾ.ಪಂ. ಉಪಾಧ್ಯಕ್ಷರಾದ ನಂಜಪ್ಪ ಮಾತನಾಡಿ, ಏಕಕಾಲಕ್ಕೆ ನೀರು ಪೂರೈಸುವ ಸಾಮರ್ಥ್ಯ ಈ ಯೋಜನೆಯಲ್ಲಿದೆ. ನಲ್ಲಿಗಳ ನಿರ್ವಹಣೆ ಜವಾಬ್ದಾರಿಯು ಗ್ರಾಮದ ಪ್ರತಿಯೊಬ್ಬರದಾಗಿರುತ್ತದೆ ಎಂದರು.

click me!