ಮತ ಚಲಾಯಿಸಲು ಇಲ್ಲಿವೆ 12 ಪರ್ಯಾಯ ದಾಖಲೆ

By Sujatha NR  |  First Published Apr 25, 2024, 11:52 AM IST

  ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ಮತದಾರರು ಚುನಾವಣಾ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗಧಿಪಡಿಸಿರುವ 12 ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದ್ದಾರೆ.


 ತುಮಕೂರು :  ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ಮತದಾರರು ಚುನಾವಣಾ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗಧಿಪಡಿಸಿರುವ 12 ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದ್ದಾರೆ.

ರು ಮತ ಚಲಾಯಿಸಲು ಮತಗಟ್ಟೆಗಳಿಗೆ ಹೋದ ಸಂದರ್ಭದಲ್ಲಿ ಅವರು ಹೊಂದಿರುವ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(ಎಪಿಕ್ ಕಾರ್ಡ್)ಯನ್ನು ಹಾಜರುಪಡಿಸಬೇಕು. ಒಂದು ವೇಳೆ ಹಾಜರುಪಡಿಸಲು ಸಾಧ್ಯವಿಲ್ಲದಿದ್ದಲ್ಲಿ ಈ ಕೆಳಕಂಡ ಯಾವುದಾದರೂ ಒಂದು ಪರ್ಯಾಯ ದಾಖಲಾತಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.

Latest Videos

undefined

, ಎಂಎನ್‌ಆರ್‌ಇಜಿಎ(ನರೇಗಾ) ಜಾಬ್ ಕಾರ್ಡ್, ಬ್ಯಾಂಕ್ ಹಾಗೂ ಅಂಚೆ ಕಚೇರಿ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್, ಎನ್‌ಪಿಆರ್ ಅಡಿಯಲ್ಲಿ ಆರ್‌ಜಿಐ ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್‌ಪೋರ್ಟ್, ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ, ರಾಜ್ಯ, ಕೇಂದ್ರ ಸರ್ಕಾರದ ಹಾಗೂ ಸಾರ್ವಜನಿಕ ಉದ್ದಿಮೆಗಳು ತಮ್ಮ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ, ಸಂಸದರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು, ಅಂಗವಿಕಲರ ಗುರುತಿನ ಚೀಟಿ(ಯುಡಿಐಡಿ ಕಾರ್ಡ್)ಯ ಮೂಲ ಪ್ರತಿಗಳನ್ನು ಮತದಾನದ ವೇಳೆ ಪರ್ಯಾಯ ದಾಖಲೆಗಳನ್ನಾಗಿ ಬಳಸಬಹುದು ಎಂದು ಅವರು ತಿಳಿಸಿದ್ದಾರೆ.

ಮತಗಟ್ಟೆ ಕೇಂದ್ರದೊಳಗೆ ಮೊಬೈಲ್ ನಿರ್ಬಂಧ:

ಲೋಕಸಭಾ ಚುನಾವಣಾ ಮತದಾನ ಏಪ್ರಿಲ್ 26 ರಂದು ನಡೆಯಲಿದ್ದು, ಸಾರ್ವಜನಿಕರು ಮತಗಟ್ಟೆ ಕೇಂದ್ರಗಳಿಗೆ ಮೊಬೈಲ್ ತರುವುದನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಮತದಾರರು ಮತ ಚಲಾಯಿಸಲು ಮತಗಟ್ಟೆಗೆ ಬರುವ ಸಂದರ್ಭದಲ್ಲಿ ಮೊಬೈಲ್‌ಗಳನ್ನು ತರಬಾರದು. ಮತಗಟ್ಟೆ ಕೇಂದ್ರದೊಳಗೆ ಮೊಬೈಲ್‌ಗಳನ್ನು ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ತಮ್ಮ ಮೊಬೈಲ್‌ಗಳನ್ನು ಮನೆಯಲ್ಲಿಯೇ ಬಿಟ್ಟು ಬರುವಂತೆ ಅವರು ಮನವಿ ಮಾಡಿದ್ದಾರೆ.

ಮತಗಟ್ಟೆಗಳಲ್ಲಿ ಪ್ರಥಮ ಚಿಕಿತ್ಸಾ ಘಟಕ ಸ್ಥಾಪನೆ:

ಮತಗಟ್ಟೆಗಳಲ್ಲಿ ಆರೋಗ್ಯ ಇಲಾಖೆ ವತಿಯಿಂದ ಪ್ರಥಮ ಚಿಕಿತ್ಸಾ ಘಟಕವನ್ನು ತೆರೆಯಲಾಗುವುದು. ವಿಶೇಷ ಚೇತನರು/ಹಿರಿಯ ನಾಗರಿಕರು/ಸಾರ್ವಜನಿಕರಿಗೆ ಮತದಾನದ ಸಂದರ್ಭದಲ್ಲಿ ಆರೋಗ್ಯ ಏರುಪೇರು ಉಂಟಾದಲ್ಲಿ ಪ್ರಥಮ ಚಿಕಿತ್ಸಾ ಘಟಕಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವಂತೆ ಅವರು ತಿಳಿಸಿದ್ದಾರೆ.

ಮತ ಚಲಾಯಿಸಲು ವೇತನ ಸಹಿತ ರಜೆ ಘೋಷಣೆ:

ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಸದರಿ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ(ಅನುದಾನಿತ ಶಿಕ್ಷಣ ಸಂಸ್ಥೆಯೂ ಒಳಗೊಂಡಂತೆ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳೂ ಒಳಗೊಂಡಂತೆ) ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ ೧೯೫೧ ಕಲಂ ೧೩೫ಬಿ ಅಡಿ ಎಲ್ಲಾ ಉಪಬಂಧಗಳಿಗೊಳಪಟ್ಟು ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದೆ.

ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಡೀಸಿ ಶುಭ ಕಲ್ಯಾಣ್ ತಿಳಿಸಿದ್ದಾರೆ.----------------------

ಮದ್ಯ ಮಾರಾಟ ನಿಷೇಧ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾದ್ಯಂತ ‘ಒಣ ದಿನ’ಗಳೆಂದು ಘೋಷಿಸಿ ಎಲ್ಲಾ ಮದ್ಯದ ವಹಿವಾಟುಗಳನ್ನು ನಿಷೇಧಿಸಲಾಗಿದೆ. ಈ ನಿಷೇಧಾದೇಶ ಈಗಾಗಲೇ ಜಾರಿಯಲ್ಲಿದ್ದು, ಏಪ್ರಿಲ್ 26 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಜೂನ್ 3 ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4 ರ ಮಧ್ಯರಾತ್ರಿ 12 ಗಂಟೆಯವರೆಗೆ ಅನ್ವಯಿಸುತ್ತದೆ.

ಮುಕ್ತ ಹಾಗೂ ನಿಷ್ಪಕ್ಷಪಾತ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ನಿಷೇಧಾವಧಿಯಲ್ಲಿ ಎಲ್ಲಾ ರೀತಿಯ ಮದ್ಯ ಉತ್ಪಾದನೆ, ಮಾರಾಟ, ಹಂಚಿಕೆ, ಸಾಗಾಣಿಕೆ, ಶೇಖರಣೆ ಸೇರಿ ಮದ್ಯದ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂದು ಅವರು ಸೂಚಿಸಿದ್ದಾರೆ.

click me!