ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಕೆಎಫ್‌ಡಿ ಪತ್ತೆಯಾಗಿದೆ. ಇದರಿಂದಾಗಿ ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ ಆವರಿಸಿದೆ.
ಚಿಕ್ಕಮಗಳೂರು(ಜ.24): ಮಲೆನಾಡಲ್ಲಿ ಈ ವರ್ಷದ ಮೊದಲ ಕೆಎಫ್‌ಡಿ (ಮಂಗನಕಾಯಿಲೆ) ಪತ್ತೆಯಾಗಿದೆ. ಹೌದು, ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಕೆಎಫ್‌ಡಿ ಪತ್ತೆಯಾಗಿದೆ. ಇದರಿಂದಾಗಿ ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ ಆವರಿಸಿದೆ. ಹೀಗಾಗಿ ಜಿಲ್ಲಾದ್ಯಂತ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಆಗಿದೆ.
ಕೊಪ್ಪದಲ್ಲಿದ್ದ ಕೆಲಸ ಮಾಡುತ್ತಿದ್ದ ವ್ಯಕ್ತಿಯಲ್ಲಿ ಮಂಗನಕಾಯಿಲೆ ಪತ್ತೆಯಾಗಿದೆ. ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅರೋಗ್ಯ ಇಲಾಖೆ ಟಿಕ್ಸ್ ಕಳುಹಿಸಿತ್ತು. ಇದೀಗ ವ್ಯಕ್ತಿಯಲ್ಲಿ ಕೆಎಫ್‌ಡಿ ಪತ್ತೆಯಾಗಿದ್ದು ದೃಢಪಟ್ಟಿದೆ.
ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿ ನೀಡುವ ವಿಚಾರಕ್ಕೆ ಕಿರಿಕ್; ನಲಪಾಡ್-ಇಲಿಯಾಸ್ ಮಧ್ಯೆ ಟಾಕ್ ವಾರ್!
ಇದು ಈ ವರ್ಷದ ಮೊದಲ ಕೆಎಫ್‌ಡಿ ಪ್ರಕರಣವಾಗಿದೆ. ಹೀಗಾಗಿ ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ ಆವರಿಸಿದೆ. ಕೆಎಫ್‌ಡಿ ಪತ್ತೆಯಾದ ವ್ಯಕ್ತಿ ಇದ್ದ ಸ್ಥಳ ಹಾಗೂ ಸುತ್ತಮುತ್ತ ಪ್ರತಿ ವ್ಯಕ್ತಿಗಳ ಬಗ್ಗೆ ನಿಗಾ ವಹಿಸಲಾಗಿದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲೂ ಕೆಎಫ್‌ಡಿ ಭೀತಿ ಆವರಿಸಿದೆ.