ಬೆಂಗಳೂರು: ಎಚ್‌ಎಸ್‌ಆರ್ ಮೆಟ್ರೋ ನಿಲ್ದಾಣಕ್ಕಾಗಿ 41 ಮರ ಕತ್ತರಿಸಲು ಹೈಕೋರ್ಟ್ ಒಪ್ಪಿಗೆ

By Kannadaprabha News  |  First Published Sep 5, 2024, 8:37 AM IST

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಮರ ಅಧಿಕಾರಿ ಹಾಗೂ ಬಿಬಿಎಂಪಿ ಉಪ ಸಂರಕ್ಷಣಾಧಿಕಾರಿ 2024ರ ಜು.20ರಂದು ಹೊರಡಿಸಿರುವ ಅಧಿಕೃತ ಜ್ಞಾಪನಾ ಪತ್ರದಂತೆ 20 ಮರಗಳನ್ನು ಸ್ಥಳಾಂತರಿಸಲು ಮತ್ತು 41 ಮರಗಳನ್ನು ತೆರವುಗೊಳಿಸಲು ಬಿಎಂಆರ್‌ಸಿಎಲ್‌ಗೆ ಅನುಮತಿ ನೀಡಿದ ಹೈಕೋರ್ಟ್‌


ಬೆಂಗಳೂರು(ಸೆ.05):  2ನೇ ಹಂತದ ಎಚ್‌ಎಸ್‌ಆರ್ ಲೇ ಔಟ್ ಮೆಟ್ರೋ ರೈಲು ನಿಲ್ದಾಣ ನಿರ್ಮಾಣಕ್ಕೆ 41 ಮರ ಗಳನ್ನು ಕತ್ತರಿಸಲು ಹಾಗೂ 20 ಮರಗಳನ್ನು ಸ್ಥಳಾಂತರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್) ಹೈಕೋರ್ಟ್ ಅನುಮತಿ ನೀಡಿದೆ. 

ಅಭಿವೃದ್ಧಿ ಕಾಮಗಾರಿಗಳಿಗೆ ಮರಗಳನ್ನು ಕತ್ತರಿಸುತ್ತಿರುವುದನ್ನು ಆಕ್ಷೇಪಿಸಿ ದತ್ತಾತ್ರೇ ಯ ಟಿ. ದೇವರೆ ಹಾಗೂ ಬೆಂಗಳೂರು ಎನ್ನರಾ ನ್ವೆಂಟ್ ಟ್ರಸ್ಟ್ ಸಲ್ಲಿಸಿರುವ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ ಅವರ ವಿಭಾಗೀಯ ಪೀಠ ಈ ಅನುಮತಿ ನೀಡಿದೆ. 

Tap to resize

Latest Videos

ನಮ್ಮ ಮೆಟ್ರೋದಲ್ಲಿ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ, ತಿಂಗಳಿಗೆ 2 ಲಕ್ಷ ರೂ ವೇತನ!

ಈ ವೇಳೆ ಬಿಎಂಆ‌ರ್ ಸಿಎಲ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ, ಆಗರದಿಂದ ಇಬ್ಬಲೂರು ಮಾರ್ಗದ ನಮ್ಮ ಮೆಟ್ರೋ ರೈಲು ನಿಲ್ದಾಣದ ಬಳಿಯ 20 ಮರಗಳ ಸ್ಥಳಾಂತರ, 41 ಮರಗಳನ್ನು ತೆರವು ಗೊಳಿಸಲು ಮರ ಅಧಿಕಾರಿ ಹಾಗೂ ಬಿಬಿಎಂಪಿ ಉಪ ಅರಣ್ಯ ಸಂರಕ್ಷಣಾ ನೀಡಿ ಅಧಿಕೃತ ಜ್ಞಾಪನಾ ಪತ್ರ ನೀಡಿದ್ದಾರೆ. ಹಾಗಾಗಿ, ಮರಗಳ ತೆರವು ಹಾಗೂ ಸ್ಥಳಾಂತ ರಕ್ಕೆ ಅನುಮತಿ ನೀಡಬೇಕು ಎಂದು ಕೋರಿದರು. 

ಅರ್ಜಿದಾರರ ಪರ ವಕೀಲ ಪ್ರದೀಪ್ ನಾಯಕ್, ಬಿಎಂಆರ್‌ಸಿಎಲ್ ಮನವಿಗೆ ನಮ್ಮ ಆಕ್ಷೇಪವಿಲ್ಲ, ಸ್ಥಳಾಂತರಗೊಳಿಸಿದ ಮರಗಳನ್ನು ಎಲ್ಲಿ ಸ್ಥಳಾಂತರಿಸಲಾಗಿದೆ. ಅವುಗಳು ವಸ್ತುಸ್ಥಿತಿ ಮತ್ತು ಬಾಳಿಕೆ ಹಾಗೂ ತೆರವುಗೊಳಿಸಿದ ಮರಗಳಿಗೆ ಒಂದು ಮರಕ್ಕೆ ಪರ್ಯಾಯವಾಗಿ 10 ಮರ ನೆಡಬೇಕು ಎಂದು ಹೈಕೋರ್ಟ್ ಹೇಳಿದೆ. ಆ ಬಗ್ಗೆ ಪ್ರತಿ 3ತಿಂಗಳಿಗೆ ವಸ್ತುಸ್ಥಿತಿ ವರದಿ ಸಲ್ಲಿಸಬೇಕು. ಆ ಕುರಿತು ಬಿಎಂಆರ್‌ಸಿಎಲ್‌ಗೆ ನಿರ್ದೇಶನ ನೀಡಬೇಕು ಎಂದು ಕೋರಿದರು. 

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಮರ ಅಧಿಕಾರಿ ಹಾಗೂ ಬಿಬಿಎಂಪಿ ಉಪ ಸಂರಕ್ಷಣಾಧಿಕಾರಿ 2024ರ ಜು.20ರಂದು ಹೊರಡಿಸಿರುವ ಅಧಿಕೃತ ಜ್ಞಾಪನಾ ಪತ್ರದಂತೆ 20 ಮರಗಳನ್ನು ಸ್ಥಳಾಂತರಿಸಲು ಮತ್ತು 41 ಮರಗಳನ್ನು ತೆರವುಗೊಳಿಸಲು ಬಿಎಂಆರ್‌ಸಿಎಲ್‌ಗೆ ಅನುಮತಿ ನೀಡಿತು.

click me!