ನಟಿ ಸಂಜನಾ ಆರೋಗ್ಯ ಸ್ಥಿತಿ ಬಗ್ಗೆ ವರದಿ ನೀಡಲು ಸೂಚನೆ

Kannadaprabha News   | Asianet News
Published : Dec 01, 2020, 10:29 AM IST
ನಟಿ ಸಂಜನಾ ಆರೋಗ್ಯ ಸ್ಥಿತಿ ಬಗ್ಗೆ ವರದಿ ನೀಡಲು ಸೂಚನೆ

ಸಾರಾಂಶ

ನಟಿ ಸಂಜನಾ ಆರೋಗ್ಯದ ಬಗ್ಗೆ ವರದಿ ನೀಡುವಂತೆ ಹೈ ಕೋರ್ಟ್ ಸಿಸಿಬಿ ಪೊಲೀಸರಿಗೆ ಸೂಚನೆಯನ್ನು ನೀಡಿದೆ. ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಆರೋಗ್ಯದ ಕುರಿತು ವರದಿ ಕೇಳಲಾಗಿದೆ

ಬೆಂಗಳೂರು (ಡಿ.01):  ಡ್ರಗ್ಸ್‌ ಜಾಲದೊಂದಿಗೆ ನಂಟು ಹೊಂದಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ಸ್ಥಿತಿಗತಿ ಕುರಿತು ವರದಿ ಸಲ್ಲಿಸುವಂತೆ ಸಿಸಿಬಿ ಪೊಲೀಸರಿಗೆ ಹೈಕೋರ್ಟ್‌   ಸೂಚಿಸಿದೆ.

ಪ್ರಕರಣದಲ್ಲಿ ಎರಡನೇ ಬಾರಿ ಜಾಮೀನು ಕೋರಿ ಸಂಜನಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಅವರು ಈ ಸೂಚನೆ ನೀಡಿ ವಿಚಾರಣೆಯನ್ನು ಡಿ.4ಕ್ಕೆ ಮುಂದೂಡಿದರು.

ಬೇಲ್‌ಗಾಗಿ ಹರಸಾಹಸ: ರಾಗಿಣಿ ಸುಪ್ರೀಂಗೆ, ಸಂಜನಾ ಹೈಕೋರ್ಟ್‌ಗೆ .

ಅರ್ಜಿದಾರರು ಅನಾರೋಗ್ಯದ ಕಾರಣ ನೀಡಿ ಜಾಮೀನು ಕೋರಿದ್ದಾರೆ.

ಹೀಗಾಗಿ, ಅವರ ಸದ್ಯದ ಆರೋಗ್ಯ ಸ್ಥಿತಿ ಕುರಿತು ಕಾರಾಗೃಹದ ಅಧಿಕಾರಿಗಳು ಹಾಗೂ ವೈದ್ಯರಿಂದ ಮಾಹಿತಿ ಪಡೆದು ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸಬೇಕು ಎಂದು ಸಿಸಿಬಿ ಪರ ವಿಶೇಷ ಅಭಿಯೋಜಕ ವೀರಣ್ಣ ತಿಗಡಿ ಅವರಿಗೆ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!