ಒತ್ತುವರಿ ತೆರವು ತಡೆದ ಲೋಕಾಯುಕ್ತ ಬಗ್ಗೆ ಹೈಕೋರ್ಟ್‌ ಅತೃಪ್ತಿ

By Govindaraj SFirst Published Sep 29, 2022, 9:26 AM IST
Highlights

ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಬಾಗ್ಮನೆ ಡೆವಲಪರ್ಸ್‌ ಪ್ರೈವೇಟ್‌ ಲಿಮಿಟೆಡ್‌ (ಬಾಗ್ಮನೆ ಟೆಕ್‌ಪಾರ್ಕ್) ಸಲ್ಲಿಸಿದ್ದ ದೂರು ಆಧರಿಸಿ ಲೋಕಾಯುಕ್ತರು ನಡೆಸಿದ್ದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. 

ಬೆಂಗಳೂರು (ಸೆ.29): ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಬಾಗ್ಮನೆ ಡೆವಲಪರ್ಸ್‌ ಪ್ರೈವೇಟ್‌ ಲಿಮಿಟೆಡ್‌ (ಬಾಗ್ಮನೆ ಟೆಕ್‌ಪಾರ್ಕ್) ಸಲ್ಲಿಸಿದ್ದ ದೂರು ಆಧರಿಸಿ ಲೋಕಾಯುಕ್ತರು ನಡೆಸಿದ್ದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಲೋಕಾಯುಕ್ತ ಪ್ರಕ್ರಿಯೆ ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌.ಹಿರೇಮಠ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಆದೇಶ ಮಾಡಿದೆ.

ಬಾಗ್ಮನೆ ಟೆಕ್‌ಪಾರ್ಕ್ ಸಲ್ಲಿಸಿದ್ದ ದೂರು ಸಂಬಂಧ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಸೆಕ್ಷನ್‌ 18 (ಬಿ) ಮೀರಿ ಲೋಕಾಯುಕ್ತರು ನಿರ್ಧಾರ ಕೈಗೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದ್ದರಿಂದ, ಬಾಗ್ಮನೆ ಟೆಕ್‌ಪಾರ್ಕ್ಗೆ ಸಂಬಂಧಿಸಿದಂತೆ ಲೋಕಾಯುಕ್ತರ ಮುಂದೆ ಬಾಕಿಯಿರುವ ಪ್ರಕರಣದ ಪ್ರಕ್ರಿಯೆಗೆ ತಡೆ ನೀಡಲಾಗಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ. ಅಲ್ಲದೆ, ಪ್ರತಿವಾದಿಗಳಾದ ಲೋಕಾಯುಕ್ತ ರೆಜಿಸ್ಟ್ರಾರ್‌, ಬಿಬಿಎಂಪಿ ಆಯುಕ್ತರು, ಪೌರಾಡಳಿತ ಇಲಾಖೆಯ ಕಾರ್ಯದರ್ಶಿ ಹಾಗೂ ಬಾಗ್ಮನೆ ಡೆವಲಪರ್ಸ್‌ ಪ್ರೈವೇಟ್‌ ಲಿಮಿಟೆಡ್‌ಗೆ ನೋಟಿಸ್‌ ಜಾರಿಗೊಳಿಸಿದ ನ್ಯಾಯಪೀಠ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

ಬಿಬಿಎಂಪಿಗೆ ಹೊಸ ಮೀಸಲು ನಿಗದಿ ಸಾಧ್ಯವೇ: ಹೈಕೋರ್ಟ್‌

ಹೈಕೋರ್ಟ್‌ ಅಸಮಾಧಾನ: ಬಾಗ್ಮನೆ ಟೆಕ್‌ ಪಾರ್ಕ್ ಬಳಿಯ ಒತ್ತುವರಿ ತೆರವು ಮಾಡಲು ಬಿಬಿಎಂಪಿ ಮುಂದಾಗಿತ್ತು. ಆ ಕುರಿತು ಭಾನುವಾರ ಅರ್ಜಿ ಸಲ್ಲಿಸಲಾಗುತ್ತದೆ. ಅಂದೇ ಲೋಕಾಯುಕ್ತರು ವಿಚಾರಣೆ ನಡೆಸಿ ತಡೆ ನೀಡುತ್ತಾರೆ. ಏನಿದು? ಪ್ರಕರಣ ಹೇಗೆ ಲೋಕಾಯುಕ್ತದ ವ್ಯಾಪ್ತಿಗೆ ಬರುತ್ತದೆ? ತೆರವು ಕಾರ್ಯಾರಣೆಗೆ ಲೋಕಾಯುಕ್ತವೇ ತಡೆ ನೀಡುವುದಾದರೆ, ಜನರು ಏಕೆ ನ್ಯಾಯಾಲಯಕ್ಕೆ ಬರಬೇಕು ಎಂದು ಹೈಕೋರ್ಟ್‌ ಇದೇ ವೇಳೆ ಪ್ರಶ್ನಿಸುವ ಮೂಲಕ ಅಸಮಾಧಾನ ಹೊರಹಾಕಿದೆ.

ಲೋಕಾಯುಕ್ತರ ಆದೇಶ ಅಸಂವಿಧಾನಿಕ: ಬಾಗ್ಮನೆ ಟೆಕ್‌ಪಾರ್ಕ್ ಬಳಿ ನಡೆದಿರುವ ರಾಜಕಾಲುವೆ ಒತ್ತುವರಿ ತೆರವಿಗೆ ಬಿಬಿಎಂಪಿ ಗುರುತು ಮಾಡಿತ್ತು. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಬಾಗ್ಮನೆ, ತೆರವು ಕಾರ್ಯಾಚರಣೆಗೂ ಮುನ್ನ ಬಿಬಿಎಂಪಿ ನೋಟಿಸ್‌ ಜಾರಿ ಮಾಡಿಲ್ಲ ಎಂದು ಆಕ್ಷೇಪಿಸಿತ್ತು. ದೂರಿನ ವಿಚಾರಣೆ ನಡೆಸಿದ್ದ ಲೋಕಾಯುಕ್ತರು, ರಾಜಕಾಲುವೆ ಮೇಲೆ ಅಳವಡಿಸಿರುವ ಡ್ರೈನ್ಸ್‌ ತೆರೆದರೆ ಪ್ರವಾಹದ ನೀರು ತುಂಬಿಕೊಳ್ಳಬಹುದು ಎಂಬ ಆತಂಕ ದೂರುದಾರರಲ್ಲಿದೆ. 

ಪಿಎಸ್‌ಐ ಮರು ಪರೀಕ್ಷೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಹಾಗಾಗಿ ಪ್ರಾಧಿಕಾರಗಳು ತಾರತಮ್ಯದಿಂದ ಡ್ರೈನ್‌ ತೆರವುಗೊಳಿಸಬಾರದು. ತೆರವು ಪ್ರಕ್ರಿಯೆಗೆ ಸ್ವಲ್ಪ ಕಾಲಾವಕಾಶ ಬೇಕಿದೆ ಎಂದು ತಿಳಿಸಿತ್ತು. ಈ ಆದೇಶ ಪ್ರಶ್ನಿಸಿರುವ ಅರ್ಜಿದಾರರು, ಲೋಕಾಯುಕ್ತರ ಆದೇಶವು ಅಸಾಂವಿಧಾನಿಕವಾಗಿದೆ. ಹೈಕೋರ್ಟ್‌ಗಳ ಅಧಿಕಾರವನ್ನು ದುರ್ಬಲಗೊಳಿಸುವ ಅಥವಾ ಪ್ರಶ್ನಿಸುವುದೇ ಆಗಿದೆ. ನ್ಯಾಯಾಲಯಕ್ಕೆ ಸಮಾನಾಂತರವಾದ ಶಕ್ತಿ ರಚನೆಗೆ ಸಮನಾಗಿದೆ ಎಂದು ಆಕ್ಷೇಪಿಸಿದ್ದಾರೆ.

click me!