ಬೆಂಗಳೂರು ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕಿದ ಕೇಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಹೈಕೋರ್ಟ್ ರಿಲೀಫ್

By Sathish Kumar KHFirst Published Apr 25, 2024, 6:22 PM IST
Highlights

ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಹೈಕೋರ್ಟ್‌ ಬಿಗ್ ರಿಲೀಫ್ ನೀಡಿದೆ.

ಬೆಂಗಳೂರು (ಏ.25): ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಪಾರ್ಟ್‌ಮೆಂಟ್ ನಿವಾಸಿಗಳ ಬಳಿ ಮತಯಾಚನೆಗೆ ತೆರಳಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಬೆದರಿಕೆ ಹಾಕಿದ್ದಾರೆ ಎಂದು ನೀಡಲಾಗಿದ್ದ ಪ್ರಕರಣದ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್‌, ಕ್ಷೇಮಾಭಿವೃದ್ಧಿ ಸಂಘದಿಂದ ದಾಖಲಿಸಿದ್ದ ಎಫ್‌ಐಆರ್‌ಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಕಳೆದೊಂದು ವಾರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಆರ್‌ಎಂಸಿ ಯಾರ್ಡ್‌ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ ಒಂದಕ್ಕೆ ಮತಯಾಚನೆಗೆ ತೆರಳಿದಾಗ ಅಲ್ಲಿನ ನಿವಾಸಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಅಪಾರ್ಟ್‌ಮೆಂಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿತ್ತು. ಈ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡು ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್‌ ಅವರಿದ್ದ ಏಕ ಸದಸ್ಯ ಪೀಠವು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮೇಲೆ ದಾಖಲಾಗಿದ್ದ ಎಫ್‌ಐಆರ್‌ಗೆ ತಡೆ ನೀಡಿ ಆದೇಶ ಹೊರಡಿಸಲಾಗಿದೆ. ಜೊತೆಗೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಲವಂತವಾಗಿ ಯಾವುದೇ ಕ್ರಮ ಕೈಗೊಳ್ಳದಂತೆಯೂ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.

ಡಿ.ಕೆ.ಸುರೇಶ್‌ಗೆ ಮತ ಹಾಕದಿದ್ರೆ ನೀರು ಕೊಡಲ್ಲ: ಡಿ.ಕೆ.ಶಿವಕುಮಾರ್‌

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್‌ಎಂಸಿ ಯಾರ್ಡ್‌ನಲ್ಲಿ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಗೂ ಆಮಿಷವವೊಡ್ಡಿದ ಆರೋಪ ಕೇಳಿಬಂದಿದತ್ತು. ಈ ಸಂಬಂಧಪಟ್ಟಂತೆ ಅಪಾರ್ಟ್‌ಮೆಂಟ್‌ ನಿವಾಸಿಗಳು ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಅರ್ಜಿ ಹೈಕೋರ್ಟ್‌ಗೆ ಬಂದಾಗ ದೂರುದಾರರ ಪರ ವಾದ ಮಂಡಿಸಿದ ವಕೀಲ ಶರತ್ ದೊಡ್ಡವಾಡ್ ಅವರು, ಚುನಾವಣಾ ಪ್ರಚಾರಕ್ಕೆ ಹಾಗೂ ಮತಯಾಚನೆಗೆ ಅಪಾರ್ಟ್‌ಮೆಂಟ್‌ಗೆ ತೆರಳಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 'ನಾನು ಇಲ್ಲಿ ಬಿಸಿನೆಸ್ ಡೀಲ್ ಗೆ ಬಂದಿದ್ದೇನೆ. ನಿಮಗೆ ಹೆಚ್ಚು ಕಾವೇರಿ ನೀರು ಬೇಕೆಂದು ಕೇಳಿದ್ದೀರಿ. ನಿಮಗೆ ಅಪಾರ್ಟ್‌ಮೆಂಟ್ ಪಕ್ಕದ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ. ನೀವು ನಮಗೆ ಮತ ಹಾಕಿದ 2-3 ತಿಂಗಳಲ್ಲಿ ನಿಮಗೆ ಸಿಎ ಸೈಟ್ ಮಾಡಿ ಹಸ್ತಾಂತರಿಸುತ್ತೇನೆ ಎಂದು ಹೇಳಿದ್ದನ್ನು ನ್ಯಾಯಾಲಯದ ಮುಂದೆ ಪ್ರಸ್ತಾಪ ಮಾಡಿದರು.

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಬೆದರಿಕೆ ಕೇಸ್; ಕೋರ್ಟ್ ಮೊರೆ ಹೋದ ಡಿಕೆ ಶಿವಕುಮಾರ

ಆದರೆ, ಇದಕ್ಕೆ ಪ್ರತಿವಾದ ಮಂಡಿಸಿದ ಡಿ.ಕೆ. ಶಿವಕುಮಾರ್ ಪರ ವಕೀಲರಾದ ಉದಯ್ ಹೊಳ್ಳ  ಅವರು, ಚುನಾವಣೆ ಭಾಷಣವನ್ನು ಆಮಿಷವೆಂದು ಆರೋಪಿಸಲಾಗಿದೆ ಎಂದು ತಿಳಿಸಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಪೀಠವು ಚುನಾವಣೆ ಪ್ರಚಾರದ ಗುಣಮಟ್ಟ ಕುಸಿತವಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಭಾಷಣದ ವೇಳೆ ಇಂತಹ ಮಾತುಗಳು ಪುನರಾವರ್ತನೆಯಾಗದಂತೆ ಎಚ್ಚರವಹಿಸಬೇಕು ಎಂದು ಡಿ.ಕೆ. ಶಿವಕುಮಾರ್ ಪರ ಹಿರಿಯ ವಕೀಲ ಉದಯ್ ಹೊಳ್ಳ ರಿಗೆ ಕೋರ್ಟ್ ಸೂಚನೆ ನೀಡಿತು. ಜೊತೆಗೆ, ಅವರ ವಿರುದ್ಧ ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸ್ ಇಲಾಖೆ ಮತ್ತು ಚುನಾವಣಾ ಆಯೋಗಕ್ಕೆ ಸೂಚನೆ ನೀಡಲಾಯಿತು.

click me!