
ಬೆಳ್ತಂಗಡಿ(ಜ.22): ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳಿಗೆ ಸೂಚಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.
ಸೋಮವಾರ, ನ್ಯಾ. ಆರ್. ದೇವದಾಸ್ ಅವರ ಏಕಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ, ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಆದೇಶಿಸಿದೆ.
ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್‌ಗೆ ಎಐ ಕಣ್ಗಾವಲು!
ಸಿವಿಲ್ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ, ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರುದ್ಧ ಅಪಪ್ರಚಾರ, ಮಾನಹಾನಿ ಮಾಡಿದ್ದಲ್ಲದೆ, ನ್ಯಾಯಾಂಗ ಹಾಗೂ ಹೈಕೋರ್ಟ್ ನಾ.ಯಮೂರ್ತಿಗಳ ನಿಂದನೆ ಮಾಡಿರುವುದನು ಹೈಕೋರ್ಟ್ ತೀವ್ರವಾಗಿ ಪರಿಗಣಿಸಿದ್ದು, ಮೇಲಿನ ಆದೇಶ ನೀಡಿದೆ. ವಿಚಾರಣೆ ವೇಳೆ, ಮಹೇಶ್ ಶೆಟ್ಟಿ ತಿಮರೋಡಿ ಬೇಷರತ್ ಕ್ಷಮೆಯ ಅಫಿಡವಿಟ್ ಸಲ್ಲಿಸಿದ್ದರೂ, ತಮ್ಮ ವರ್ತನೆ ಸರಿಪಡಿಸಿಕೊಂಡಿಲ್ಲ, ಮುಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ, ಸಭೆ, ಸಮಾರಂಭಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳದ ಸಂಸ್ಥೆಗಳ ಕುರಿತು ನ್ಯಾಯಾಂಗ ನಿಂದನೆ, ಅಪಪ್ರಚಾರ, ಮಾನಹಾನಿ ಮಾಡಿದಲ್ಲಿ, ಕಾನೂನು ರೀತಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಪೋಲೀಸರಿಗೆ ಆದೇಶ ನೀಡಿದೆ.
ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಹಾಗೂ ಆರ್. ರಾಜಶೇಖರ್ ಹಿಲಿಯಾರು ವಾದ ಮಂಡಿಸಿದರು.