‘ಅತ್ಯಾಚಾರ ಎಸಗಿ ಇಸ್ಲಾಂಗೆ ಮತಾಂತರಕ್ಕೆ ಒತ್ತಡ’

By Kannadaprabha News  |  First Published Jan 6, 2020, 7:44 AM IST

ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿ ಅತ್ಯಾಚಾರದ ವಿಡಿಯೋ ತೋರಿಸಿ ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದುವಂತೆ ಪ್ರಾಣ ಬೆದರಿಕೆ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ಸಲ್ಲಿಸಲಾಗಿದೆ. 


ಬೆಂಗಳೂರು [ಜ.06]:  ಕೇರಳದ ಕಾಸರಗೊಡು ಜಿಲ್ಲೆಯ ಮೊರ್ಗಾಲ್‌ ಪುತ್ತೂರು ಗ್ರಾಮದಲ್ಲಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿ ಅತ್ಯಾಚಾರದ ವಿಡಿಯೋ ತೋರಿಸಿ ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದುವಂತೆ ಪ್ರಾಣ ಬೆದರಿಕೆ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಆರೋಪಿಗಳ ವಿರುದ್ಧ ಸಂತ್ರಸ್ತೆ ಹಾಗೂ ಆಕೆಯ ಪೋಷಕರ ಜತೆ ಸಂಸದೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಹಾಗೂ ನಗರ ಪೊಲೀಸ್‌ ಆಯುಕ್ತರನ್ನು ಪ್ರತ್ಯೇಕವಾಗಿ ಭೇಟಿಯಾಗಿ ದೂರು ನೀಡಿದ್ದಾರೆ.

ಈಗಾಗಲೇ ಪ್ರಕರಣದ ಸಂಬಂಧ ಕಾಸರಗೊಡಿನ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಲ್ಲಿನ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನವರಾದ ಕಾರಣ ನಗರ ಪೊಲೀಸ್‌ ಆಯುಕ್ತ ಭಾಸ್ಕರರಾವ್‌ ಅವರಿಗೂ ದೂರು ನೀಡಲಾಗಿದೆ. ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆಯುಕ್ತರಿಗೆ ಸೂಚಿಸಿದ್ದಾರೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

Tap to resize

Latest Videos

ಓಮ್ನಿಯಲ್ಲಿ ಕೊಳೆತ ಮಹಿಳೆ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ !...

ದೂರಿನ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂತ್ರಸ್ತೆ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುವಾಗ ಅದೇ ಊರಿನವರೇ ಆದ ರಿಷಬ್‌ ಮತ್ತು ಮಸೂಕ್‌ ಎಂಬಾತನ ಪರಿಚಯವಾಗಿತ್ತು. ಆರೋಪಿಗಳು ಹೋಟೆಲ್‌ಗೆ ಊಟಕ್ಕೆಂದು ಕರೆದೊಯ್ದು ಆಕೆಗೆ ಮತ್ತು ಬರುವ ಔಷಧಿ ಕೊಟ್ಟು ಅತ್ಯಾಚಾರ ಎಸಗಿದ್ದು, ವಿಡಿಯೋ ಚಿತ್ರೀಕರಣ ಮಾಡಿದ್ದಾರೆ.

ಬೆಂಗಳೂರು: ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಚಾಕುವಿನಿಂದ ಇರಿದರು!...

ಇದಾದ ಬಳಿಕ ಆರೋಪಿಗಳು ಸಂತ್ರಸ್ತೆಗೆ ಅತ್ಯಾಚಾರದ ವಿಡಿಯೋ ತೋರಿಸಿ ನಿನ್ನ ತಂದೆ ಹೊರತುಪಡಿಸಿ ಇಡೀ ಕುಟುಂಬ ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದಬೇಕು. ಇಲ್ಲದಿದ್ದರೆ, ವಿಡಿಯೋವನ್ನು ಹರಿ ಬಿಡುವುದಾಗಿ ಬೆದರಿಕೆ ಹಾಕುತ್ತಿದ್ದರು. ಆರೋಪಿಗಳು ಕಿರುಕುಳ ತಾಳಲಾರದೇ ಸಂತ್ರಸ್ತೆ ಕುಟುಂಬ ಒಂದೂವರೆ ತಿಂಗಳ ಹಿಂದೆ ಕಾಸರಗೋಡು ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿದೆ. ಒತ್ತಡಕ್ಕೆ ಮಣಿದು ಪೊಲೀಸರು ಕೇವಲ ಒಬ್ಬನೇ ಆರೋಪಿಯನ್ನು ಬಂಧಿಸಿದ್ದಾರೆ ಎಂದರು.

ಆರೋಪಿಗಳಿಬ್ಬರು ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ವ್ಯಾಪ್ತಿಯಲ್ಲಿ ವಾಸವಾಗಿದ್ದು, ಇಲ್ಲಿಯೇ ಅಕ್ವೇರಿಯಂ ವ್ಯವಹಾರ ನಡೆಸುತ್ತಿದ್ದರು ಎಂದು ಎಂದು ಶೋಭಾ ಹೇಳಿದರು.

click me!