ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಮಂಗಳವಾರ ಅದ್ಧೂರಿಯಾಗಿ ನೆರವೇರಿದೆ. ಹೊಸಮನೆ ಶಿವಾಜಿ ವೃತ್ತದ ವರೆಗೂ ಸಾಗಿ ಪುನ ಹಿಂದಿರುಗಿ ಹೊಸಮನೆ ಮುಖ್ಯ ರಸ್ತೆ ಮೂಲಕ ರಂಗಪ್ಪ ವೃತ್ತ, ಮಾಧವಚಾರ್ ವೃತ್ತದ ವರೆಗೂ ಸಾಗಿದೆ.
ಶಿವಮೊಗ್ಗ(ಸೆ.11): ಭದ್ರಾವತಿಯ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಮಂಗಳವಾರ ಅದ್ಧೂರಿಯಾಗಿ ನೆರವೇರಿದೆ.
ಹೊಸಮನೆ ವಿನಾಯಕ ಮೂರ್ತಿ ಪ್ರತಿಷ್ಠಾಪನಾ ಸ್ಥಳದಿಂದ ಬೆಳಗ್ಗೆ ಆರಂಭಗೊಂಡ ಮೆರವಣಿಗೆಗೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದರು. ಶಾಸಕ ಬಿ.ಕೆ. ಸಂಗಮೇಶ್ವರ್, ಸಮಿತಿ ಅಧ್ಯಕ್ಷ ವಿ. ಕದಿರೇಶ್ ಇನ್ನೀತರೇ ಪ್ರಮುಖರು ಪಾಲ್ಗೊಂಡಿದ್ದರು.
ಮೆರವಣಿಗೆಗೆ ಕಲಾತಂಡದ ಮೆರುಗು:
ಹೊಸಮನೆ ಶಿವಾಜಿ ವೃತ್ತದ ವರೆಗೂ ಸಾಗಿ ಪುನ ಹಿಂದಿರುಗಿ ಹೊಸಮನೆ ಮುಖ್ಯ ರಸ್ತೆ ಮೂಲಕ ರಂಗಪ್ಪ ವೃತ್ತ, ಮಾಧವಚಾರ್ ವೃತ್ತದ ವರೆಗೂ ಸಾಗಿತು. ಪ್ರತಿ ವರ್ಷದಂತೆ ಈ ಬಾರಿ ಸಹ ರಸ್ತೆಯುದ್ದಕ್ಕೂ ಯುವಕರು, ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲಾ ವಯೋಮಾನದವರು ಜೈ ಕಾರ ಹಾಕುವ ಮೂಲಕ ಸಂಭ್ರಮಿಸಿದರು. ಡೊಳ್ಳು ಕುಣಿತ, ಕಂಸಾಳೆ, ಗೊಂಬೆ ನೃತ್ಯ ಸೇರಿದಂತೆ ಹಲವು ಜನಪದ ಕಲಾತಂಡಗಳು ಮೆರವಣಿಗೆಗೆ ಮತ್ತಷ್ಟುಮೆರಗು ನೀಡಿದವು.
ಶಿವಮೊಗ್ಗ: ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯುವಕ ಯತ್ನ..ವೈರಲ್ ವಿಡಿಯೋ
ಭಕ್ತರಿಂದ ಪ್ರಸಾದ, ಪಾನಕ ವ್ಯವಸ್ಥೆ:
ಬಹುತೇಕ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಬಗೆ ಬಗೆಯ ವೇಷಭೂಷಣಗಳಲ್ಲಿ ಕಂಗೊಳಿಸಿದರು. ಕೇಸರಿ ಧ್ವಜ ಹಿಡಿದು ಕಲಾ ತಂಡಗಳ ಜೊತೆ ಹೆಜ್ಜೆ ಹಾಕಿದರು. ಅಲ್ಲದೆ ಅಲ್ಲಲ್ಲಿ ಭಕ್ತರಿಂದ ಪ್ರಸಾದ ವ್ಯವಸ್ಥೆ ಜೊತೆಗೆ ಪಾನಕ, ಮಜ್ಜಿಗೆ ವಿತರಣೆ ಸಹ ಭರ್ಜರಿಯಾಗಿ ನಡೆಯಿತು.
ಬಿಗಿ ಪೊಲೀಸ್ ಬಂದೋಬಸ್ತ್:
ಶಾಂತಿ ಸುವ್ಯವಸ್ಥೆಗಾಗಿ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಹೆಜ್ಜೆ ಹೆಜ್ಜೆಗೂ ಕಟ್ಟೆಚ್ಚರ ವಹಿಸಲಾಗಿತ್ತು. ತುಂತುರು ಮಳೆ ನಡುವೆಯೂ ಮಹಿಳಾ ಸಂಘಟನೆಗಳು, ವಿವಿಧ ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ನಗರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಮಂದಿ ಭಕ್ತಾಧಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಶಿಕಾರಿಪುರಕ್ಕೆ ನೂತನ ಬಸ್ ಡಿಪೋ ಮಂಜೂರು