ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್ ನ ಒಂದು ಗೇಟ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಗೇಟ್ ಮುಚ್ಚುವುದು ಸಾಧ್ಯವಾಗುತ್ತಿಲ್ಲ.
ವರದಿ: ಮಲ್ಲಿಕಾರ್ಜುನ ಹೊಸಮನಿ, ಏಷಿಯಾನೆಟ್ ಸುವರ್ಣನ್ಯೂಸ್.
ಬಾಗಲಕೋಟೆ (ಅ.09): ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್ ನ ಒಂದು ಗೇಟ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಗೇಟ್ ಮುಚ್ಚುವುದು ಸಾಧ್ಯವಾಗುತ್ತಿಲ್ಲ. ಇನ್ನು ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಬ್ಯಾರೇಜ್ ನಿಂದ 3 ಗೇಟ್ ಗಳ ಮೂಲಕ ನೀರು ಹೊರ ಹಾಕಲಾಗುತ್ತಿತ್ತು. ಮೂರು ಗೇಟ್ ಬಂದ್ ಮಾಡುವ ಸಂದರ್ಭದಲ್ಲಿ 7 ನೇ ನಂಬರ್ ಗೇಟ್ ಬಂದ್ ಆಗಲಿಲ್ಲ. ಸದ್ಯ ಯುಕೆಪಿ ಎಂಜಿನಿಯರ್ ಗಳು ಪರಿಶೀಲನೆ ನಡೆಸಿದ್ದು, ತಾಂತ್ರಿಕ ಮಾಹಿತಿ ಪಡೆದು ಗೇಟ್ ಮುಚ್ಚಲು ಯತ್ನಿಸುತ್ತಿದ್ದಾರೆ.
undefined
ಬ್ಯಾರೇಜ್ ನಲ್ಲಿ 6 ಟಿಎಂಸಿ ನೀರು ಸಂಗ್ರಹವಿದ್ದು, ಸದ್ಯ ಒಂದು ಗೇಟ್ ಮೂಲಕ 15 ಸಾವಿರ ಕ್ಯುಸೆಕ್ ನೀರು ಹೊರ ಹೋಗುತ್ತಿದೆ. ಮಹಾರಾಷ್ಟ್ರ ದಿಂದ 12 ಸಾವಿರ ಕ್ಯುಸೆಕ್ ನೀರು ಹರಿದುಬರುತ್ತಿದೆ. ಇತ್ತ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಬ್ಯಾರೇಜ್ ಗೆ ಭೇಟಿ ನೀಡಿ ಗೇಟ್ ತಾಂತ್ರಿಕ ಸಮಸ್ಯೆ ಪರಿಹರಿಸಲು ಸೂಚಿಸಿದ್ದಾರೆ. '' ಸದ್ಯ ಎಲ್ಲ ನೀರು ಹರಿದು ಹೋಗುವ ಸಾಧ್ಯತೆಯಿಲ್ಲ, ಆತಂಕಪಡುವ ಅಗತ್ಯವಿಲ್ಲ'' ಎಂದು ಜಮಖಂಡಿ ಎಸಿ ಶ್ವೇತಾ ಬಿಡಿಕರ್ ತಿಳಿಸಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಸುಶ್ಮಿತಾ ನಟಿಸಿದ ಈ ಒಂದು ಸಿನಿಮಾ ಯಾವುದೆಂದು ನಿಮಗೆ ಗೊತ್ತಾ?
20ರಂದು ರಾಜ್ಯಮಟ್ಟದ ಬೃಹತ್ ಆರ್‌ಸಿಬಿ ಸಂಘಟನೆ ಸಭೆ: ಮಾಜದಲ್ಲಿ ನೊಂದವರ, ಶೋಷಿತರ, ಬಡವರ ಹಾಗೂ ಹಿಂದುಳಿದವರಿಗೆ ನ್ಯಾಯ ಕೊಡಿಸುವ ಉದ್ದೇಶದಿಂದ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ (ಆರ್‌ಸಿಬಿ) ಎಂಬ ಹೊಸ ಸಂಘಟನೆ ಅಸ್ತಿತ್ವಕ್ಕೆ ತರಲಾಗುತ್ತಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಆರ್‌ಸಿಬಿ ಸ್ಥಾಪನೆ ಸಂಬಂಧ ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಉತ್ತರ ಕರ್ನಾಟಕದ ವಿವಿಧ ಸಮುದಾಯಗಳ ಮುಖಂಡರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಾಗಲಕೋಟೆಯಲ್ಲಿ ಅ.20ರಂದು 35ಕ್ಕೂ ಅಧಿಕ ಮಠಾಧೀಶರ ನೇತೃತ್ವದಲ್ಲಿ ಬೃಹತ್ ಸಭೆ ನಡೆಸಲಾಗುತ್ತಿದ್ದು, ಈ ವೇಳೆ ಸಂಘಟನೆಗೆ ಸ್ಪಷ್ಟ ರೂಪ ಕೊಡಲಾಗುವುದು ಎಂದರು.
ಸಭೆಯಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಶಾಸಕರಾದ ರಘುಪತಿ ಭಟ್, ವೀರಭದ್ರಪ್ಪ ಹಾಲಹರವಿ, ಬಂಜಾರ ಸಮಾಜದ ರಾಜ್ಯಾಧ್ಯಕ್ಷ ಪಾಂಡುರಂಗ ಪಮ್ಮಾರ, ಈಶ್ವರಪ್ಪ ಪುತ್ರ ಕಾಂತೇಶ, ಅಹಿಂದ ನಾಯಕ ಮುಕುಡಪ್ಪ, ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಸೇರಿ ಹಲವರಿದ್ದರು. ಹಲವು ಸಾಧು-ಸಂತರ ಮಾರ್ಗದರ್ಶನ, ಸಲಹೆ ಹಿನ್ನೆಲೆ ಈ ಸಂಘಟನೆ ಹುಟ್ಟು ಹಾಕಲಾಗುತ್ತಿದ್ದು, ಎಲ್ಲ ಸಮುದಾಯದ ಜನರು ಕೈಜೋಡಿಸಿದ್ದಾರೆ. ಜಾತ್ಯತೀತ, ಪಕ್ಷಾತೀತ ಮತ್ತು ರಾಜಕೀಯೇತರವಾಗಿ ಬ್ರಿಗೇಡ್ ಕೆಲಸ ಮಾಡಲಿದ್ದು, ಸಮಾಜ ವಿರೋಧಿ, ರಾಷ್ಟ್ರ ವಿರೋಧಿಗಳ ವಿರುದ್ಧ ಕಾರ್ಯ ನಿರ್ವಹಿಸಲಿದೆ. ಈ ಹಿಂದೆ ರಾಯಣ್ಣ ಬ್ರಿಗೇಡ್ ಸ್ಥಾಪನೆಗೆ ಸಕಲ ಸಿದ್ಧತೆ ಮಾಡಿಕೊಂಡು ಕೈ ಬಿಟ್ಟಿದ್ದೇವು. ಆದರೆ ಈ ಬಾರಿ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.