ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳೂರು [ಜು.19] : ರಾಜ್ಯದಲ್ಲಿ ಹಲವು ಪ್ರದೇಶಗಳಲ್ಲಿ ಮುಂಗಾರು ಕೊಂಚ ಇಳಿದಿದ್ದರೆ ಇತ್ತ ಕರಾವಳಿಯಲ್ಲಿ ಮಾತ್ರ ನಿಂತರವಾಗಿ ಅಬ್ಬರಿಸುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಿಲ್ಲೆಯ ಎಲ್ಲಾ ಶಾಲಾ - ಕಾಲೇಜುಗಳಿಗೆ ಜು.20ರಂದು ರಜೆ ಘೋಷಣೆ ಮಾಡಲಾಗಿದೆ.
ನೀರಿಲ್ಲ ಎನ್ನೋರಿಗೆ ಆಗಲಿ ಉಡುಪಿಯ ಈ ಹಳ್ಳಿ ಮಾದರಿ...
ಭಾರೀ ಮಳೆ ಹಿನ್ನೆಲೆ ಹಲವು ಪ್ರದೇಶಗಳು ನೀರಿನಿಂದಾವೃತವಾಗಿದೆ. ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಜುಲೈ 22ರವರೆಗೂ ಕೂಡ ಹೆಚ್ಚಿನ ಪ್ರಮಾಣದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.