ಮಡಿಕೇರಿಯಲ್ಲಿ ವಿದೇಶಗಳಿಗೆ ಹೋಗಿ ಹಿಂತಿರುಗಿ ಬಂದಿರುವವರನ್ನು ಪತ್ತೆ ಹಚ್ಚಿ ತಪಾಸಣೆ ಮಾಡುವ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ. ಮಂಗಳವಾರ ಸಂಜೆಯವರೆಗೆ ಮಡಿಕೇರಿ ತಾಲೂಕಿನಲ್ಲಿ 72, ವಿರಾಜಪೇಟೆ ತಾಲೂಕಿನಲ್ಲಿ 41 ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ 52 ಜನರನ್ನು ಪತ್ತೆ ಹಚ್ಚಲಾಗಿದೆ.
ಮಡಿಕೇರಿ(ಮಾ.18): ಜಿಲ್ಲೆಯಿಂದ ವಿದೇಶಗಳಿಗೆ ಹೋಗಿ ಹಿಂತಿರುಗಿ ಬಂದಿರುವವರನ್ನು ಪತ್ತೆ ಹಚ್ಚಿ ತಪಾಸಣೆ ಮಾಡುವ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ. ಮಂಗಳವಾರ ಸಂಜೆಯವರೆಗೆ ಮಡಿಕೇರಿ ತಾಲೂಕಿನಲ್ಲಿ 72, ವಿರಾಜಪೇಟೆ ತಾಲೂಕಿನಲ್ಲಿ 41 ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ 52 ಜನರನ್ನು ಪತ್ತೆ ಹಚ್ಚಲಾಗಿದೆ.
ಈ ಪೈಕಿ 159 ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಅವರವರ ಮನೆಗಳಲ್ಲಿಯೇ ಸಂಪರ್ಕ ತಡೆ ಮಾಡಲಾಗಿದೆ. ಅಲ್ಲದೆ 3 ಜನ ಪ್ರವಾಸಿಗರನ್ನು ರೆಸಾರ್ಟ್, ಹೋಂ ಸ್ಟೇಗಳಲ್ಲಿ ಸಂಪರ್ಕ ತಡೆ ಮಾಡಲಾಗಿದೆ. ಈವರೆಗೆ ವಿದೇಶದಿಂದ ಬಂದ 3 ವ್ಯಕ್ತಿಗಳಿಗೆ ಸೋಂಕು ತಗುಲಿರುವ ಶಂಕೆ ಇದ್ದು, ಅವರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಟ್ಟು ಉಪಚರಿಸಲಾಗುತ್ತಿದೆ.
ಗಡಿಯಲ್ಲೂ ತಪಾಸಣೆ:
ಮಂಗಳವಾರದಿಂದ ಕೇರಳ ರಾಜ್ಯ ಗಡಿ ಭಾಗವಾದ ಕರಿಕೆ, ಕುಟ್ಟಮತ್ತು ಮಾಕುಟ್ಟಗಡಿಭಾಗಗಳಲ್ಲಿ ಕೇರಳ ರಾಜ್ಯದಿಂದ ಜಿಲ್ಲೆಗೆ ಬರುವವರನ್ನು 24/7 ಗಂಟೆಗಳಲ್ಲಿ ತಪಾಸಣೆ ನಡೆಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಸಿಬ್ಬಂದಿಯನ್ನು ನೇಮಿಸಲಾಗಿದೆ.
ಪಶು ವೈದ್ಯಕೀಯ ಸೇವಾ ಇಲಾಖೆಯಿಂದಲೂ ಹಕ್ಕಿ ಜ್ವರದ ಸಂಬಂಧ ಕೇರಳದಿಂದ ಜಿಲ್ಲೆಗೆ ಬರುವ ಕೋಳಿ ಮತ್ತು ಕೋಳಿ ಉತ್ಪನ್ನಗಳನ್ನು ತಡೆಯಲು ಈ ಮೂರು ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ ಮತ್ತು ಈ ಎರಡೂ ಇಲಾಖೆಯ ಚೆಕ್ ಪೋಸ್ಟ್‌ಗಳು ಕಾರ್ಯನಿರ್ವಹಿಸುತ್ತಿವೆ.
ಮಂಗಳೂರಿನ ಇಬ್ಬರು ಸೇರಿ 180 ವಿದ್ಯಾರ್ಥಿಗಳು ಮಲೇಷ್ಯಾದಲ್ಲಿ ಬಾಕಿ
ಈ ದಿನ ನಾನು ಜಿಲ್ಲೆಯ ಗಡಿ ಭಾಗವಾದ ಕುಟ್ಟಮತ್ತು ತೋಲ್ಪಟ್ಟಿಚೆಕ್ ಪೋಸ್ಟ್ ಹಾಗೂ ಕುಟ್ಟಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ತೆರೆಯಲಾದ ಚೆಕ್ ಪೋಸ್ಟ್‌ಗಳ ಪರಿಶೀಲನೆ ನಡೆಸಿದ್ದೇನೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.