ಬೆಳಗಾವಿಗೆ ಗೃಹ ಸಚಿವ ಅಮಿತ್ ಶಾ ಆಗಮನ: ಕಷ್ಟ, ನಷ್ಟ ಸಮೀಕ್ಷೆ ಶುರು

By Web DeskFirst Published Aug 11, 2019, 4:11 PM IST
Highlights

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಳಗಾವಿಗೆ ಆಗಮಿಸಿದ್ದು, ಮಳೆಯಿಂದಾಗಿ ಉಂಟಾಗಿರುವ ಕಷ್ಟ, ನಷ್ಟಗಳನ್ನು ಅವಲೋಕನ ಮಾಡಲಿದ್ದಾರೆ. 

ಬೆಳಗಾವಿ, (ಆ.11): ರಾಜ್ಯದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಹಲವು ಜಿಲ್ಲೆಗಳು ಜಲಾವೃತವಾಗಿದ್ದು, ಪರಿಸ್ಥಿತಿ ಅವಲೋಕನ ಮಾಡಲು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಬೆಳಗಾವಿಗೆ ಆಗಮಿಸಿದ್ದಾರೆ.

ಸೇನಾ ವಿಮಾನದ ಮೂಲಕ ಇಂದು (ಭಾನುವಾರ) ಮಧ್ಯಾಹ್ನ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಬರಮಾಡಿಕೊಂಡರು. ಸ್ವಾಗತಿಸಿದರು. 

ಸುವರ್ಣ ನ್ಯೂಸ್‌ ಪ್ರವಾಹ ಪರಿಹಾರ ಅಭಿಯಾನಕ್ಕೆ ದಾರಿ

ಬಳಿಕ ಸೇನಾ ಹೆಲಿಕಾಪ್ಟರ್​ನಲ್ಲಿ ನೆರೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಗೆ ತೆರಳಿದ್ದಾರೆ. ಬೆಳಗಾವಿ, ಬಾಗಲಕೋಟೆಯ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಲಿದ್ದಾರೆ.

ಅಮಿತ್​ ಶಾ ಸಿಎಂ ಜತೆ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಸುರೇಶ್​ ಅಂಗಡಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಬಳಿಕ ಅಮಿತ್ ಶಾ ಅವರು ಅಧಿಕಾರಗಳ ಜತೆ ಸಭೆ ನಡೆಸಲಿದ್ದಾರೆ.

ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮಾನ್ ಅವರು ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ಒಂದು ಸುತ್ತಿನ ವೈಮಾನಿಕ ಸಮೀಕ್ಷೆ ನಡೆಸಿದ್ದರು.

ಈಗ ಅಮಿತ್ ಶಾ ಬೆಳಗಾವಿಗೆ ಆಗಮಿಸಿದ್ದು, ಕೇಂದ್ರದಿಂದ ಹೆಚ್ಚಿನ ನೆರೆ ಪರಿಹಾರ ಸಿಗಬಹುದು ಎನ್ನವ ನಿರೀಕ್ಷೆಗಳಿವೆ. ಕೊನೆಗಳಿಯಲ್ಲಿ ಏನು ಆಗುತ್ತೋ ಎನ್ನುವುದನ್ನು ಕಾದುನೋಡಬೇಕಿದೆ.

click me!