ಬೆಂಗಳೂರು ಗಲಭೆ ಕೇಸ್‌: ಸಂಪತ್‌ ರಾಜ್‌ ಶೀಘ್ರ ಬಂಧನ, ಸಚಿವ ಬೊಮ್ಮಾಯಿ

Kannadaprabha News   | Asianet News
Published : Nov 07, 2020, 07:13 AM ISTUpdated : Nov 07, 2020, 07:29 AM IST
ಬೆಂಗಳೂರು ಗಲಭೆ ಕೇಸ್‌: ಸಂಪತ್‌ ರಾಜ್‌ ಶೀಘ್ರ ಬಂಧನ, ಸಚಿವ ಬೊಮ್ಮಾಯಿ

ಸಾರಾಂಶ

ಸಂಪತ್‌ರಾಜ್‌ ಬಂಧನಕ್ಕೆ ಈಗಾಗಲೇ 4 ತಂಡಗಳು ಹುಡುಕಾಟ ನಡೆಸುತ್ತಿವೆ| ಸದ್ಯದಲ್ಲೇ ಆರೋಪಿಯನ್ನು ವಶಕ್ಕೆ ಪಡೆಯುತ್ತೇವೆ| ಲವ್‌ ಜಿಹಾದ್‌ ಕಳೆದ ಒಂದು ದಶಕದಲ್ಲಿ ತೀವ್ರವಾಗಿದೆ. ಮದುವೆ ಮುಖಾಂತರ ಮತಾಂತರ ಮಾಡುವುದು ಸರಿಯಲ್ಲ: ಬಸವರಾಜ್‌ ಬೊಮ್ಮಾಯಿ|   

ಮಡಿಕೇರಿ(ನ.07): ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಸಂಪತ್‌ ರಾಜ್‌ ಅವರನ್ನು ಸದ್ಯದಲ್ಲೇ ಬಂಧಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಮಾಜಿ ಮೇಯರ್‌ ಸಂಪತ್‌ರಾಜ್‌ ಬಂಧನಕ್ಕೆ ಈಗಾಗಲೇ 4 ತಂಡಗಳು ಹುಡುಕಾಟ ನಡೆಸುತ್ತಿವೆ. ಸದ್ಯದಲ್ಲೇ ಆರೋಪಿಯನ್ನು ವಶಕ್ಕೆ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ. 

ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ಹೊಸ ಠಾಣೆ: ಗೃಹ ಸಚಿವ ಬೊಮ್ಮಾಯಿ

ಇನ್ನು ಮಾಜಿ ಸಚಿವ ವಿನಯ್‌ ಕುಲಕರ್ಣಿ ಸಿಬಿಐ ವಶಕ್ಕೆ ಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜಿಪಂ ಸದಸ್ಯ ಯೋಗೀಶ್‌ ಗೌಡ ಹತ್ಯೆ ಕಾಂಗ್ರೆಸ್‌ ಸರ್ಕಾರದ ಸಂದರ್ಭದಲ್ಲಿ ನಡೆದಿತ್ತು. ಬಳಿಕ ಅದನ್ನು ಸಿಬಿಐಗೆ ವಹಿಸಲಾಗಿತ್ತು. ಸಿಬಿಐ ತನ್ನ ಕೆಲಸವನ್ನು ತಾನು ಮಾಡುತ್ತಿದೆ ಎಂದರು. ಲವ್‌ ಜಿಹಾದ್‌ ಕಳೆದ ಒಂದು ದಶಕದಲ್ಲಿ ತೀವ್ರವಾಗಿದೆ. ಮದುವೆ ಮುಖಾಂತರ ಮತಾಂತರ ಮಾಡುವುದು ಸರಿಯಲ್ಲ ಎಂದರು.
 

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ