ರಾಜ್ಯದ ಮೂರು ಉಪಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲುವ ವಾತಾವರಣವಿದೆ. ನಮಗಿರುವ ಮಾಹಿತಿ ಪ್ರಕಾರ ಮೂರರಲ್ಲೂ ಕಾಂಗ್ರೆಸ್ ಜಯಗಳಿಸಲಿದೆ ಎನ್ನುವ ಮಾಹಿತಿ ಇದೆ ಎಂದ ಗೃಹ ಸಚಿವ ಡಾ.ಜಿ. ಪರಮೇಶ್ವರ್
ಮೈಸೂರು(ನ.21): ವಿರೋಧ ಪಕ್ಷವಾಗಿ ಅವರು ಹೋರಾಟ ಮಾಡುತ್ತಿದ್ದಾರೆ. ಸಿಎಂ ಈಗಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ವಕ್ಫ್ ಮಂಡಳಿಯಿಂದ ನೊಟೀಸ್ ಕೊಟ್ಟಿರುವುದನ್ನು ವಾಪಸ್ ಪಡೆಯಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಆದರೂ ವಿರೋಧ ಪಕ್ಷಗಳು ರಾಜಕೀಯ ಕಾರಣಕ್ಕೆ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಗುರುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಿ.ಪರಮೇಶ್ವರ್ ಅವರು, ಈ ಬಗ್ಗೆ ನನಗೆ ಗೊತ್ತಿಲ್ಲ. ಇದು ಸಿಎಂ ವಿವೇಚನೆಗೆ ಬಿಟ್ಟಿದ ವಿಚಾರವಾಗಿದೆ. ಸಚಿವರ ಬದಲಾವಣೆ ವಿಚಾರದ ಬಗ್ಗೆ ನನಗೇನು ಗೊತ್ತಿಲ್ಲ. ಅದು ನಮಗೆ ಹೇಳಿ ಮಾಡುವ ಕೆಲಸವಲ್ಲ. ಸಿಎಂ ಹಾಗೂ ಪಕ್ಷದ ಹೈಕಮಾಂಡ್ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಸಚಿವ ಜಮೀರ್ ಖಾನ್ ಬದಲಾವಣೆ ವಿಚಾರವೂ ನನಗೆ ಗೊತ್ತಿಲ್ಲ ಎಂದಷ್ಟೇ ಹೇಳಿದ್ದಾರೆ.
undefined
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ 162+ ಸ್ಥಾನ ಗೆದ್ದು ಸರ್ಕಾರ ರಚನೆ: ಡಾ.ಜಿ. ಪರಮೇಶ್ವರ್ ಭವಿಷ್ಯ!
ಸಿಎಂ ದೆಹಲಿಗೆ ತೆರಳಿದ್ದು ಸಹಕಾರಿ ಇಲಾಖೆಯ ಕಾರ್ಯಕ್ರಮಕ್ಕೆ, ಬೇರೆ ಯಾವುದೇ ವಿಚಾರಕ್ಕೆ ಅಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಚುನಾವಣಾ ಎಕ್ಸಿಟ್ ಪೋಲ್‌ನಲ್ಲಿ ಎನ್‌ಡಿಎಗೆ ಬಹುಮತ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್ ಅವರು, ಎಕ್ಸಿಟ್ ಪೋಲ್‌ಗಳು ಎಲ್ಲಾ ಸಂದರ್ಭದಲ್ಲೂ ನಿಜವಾಗಿರುವುದಿಲ್ಲ. ನಾನು ಮಹಾರಾಷ್ಟ್ರ ಉಸ್ತುವಾರಿ ವಹಿಸಿದ್ದೆ ಅಲ್ಲಿ ಬೇರೆಯೇ ವಾತಾವರಣವಿದೆ. ಕೆಲ ಸರ್ವೇಗಳು INDIA ಒಕ್ಕೂಟಕ್ಕೂ ಬಹುಮತ ಬರುವ ವರದಿ ನೀಡಿವೆ. ಕೆಲವರು NDA ಪರ ಕೆಲವರು INDIA ಪರವಾಗಿ ವರದಿ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನಮ್ಮ ಒಕ್ಕೂಟಕ್ಕೆ ಗೆಲುವು ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ರಾಜ್ಯದ ಮೂರು ಉಪಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲುವ ವಾತಾವರಣವಿದೆ. ನಮಗಿರುವ ಮಾಹಿತಿ ಪ್ರಕಾರ ಮೂರರಲ್ಲೂ ಕಾಂಗ್ರೆಸ್ ಜಯಗಳಿಸಲಿದೆ ಎನ್ನುವ ಮಾಹಿತಿ ಇದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.