ಗ್ರಾಮ ಪಂಚಾಯತ್ ಅಧ್ಯಕ್ಷೆ, ಪಿಡಿಒ ಸೇರಿ 44 ಮಂದಿಗೆ ಕ್ವಾರಂಟೈನ್‌

Kannadaprabha News   | Asianet News
Published : Apr 09, 2020, 09:52 AM IST
ಗ್ರಾಮ ಪಂಚಾಯತ್ ಅಧ್ಯಕ್ಷೆ, ಪಿಡಿಒ ಸೇರಿ 44 ಮಂದಿಗೆ ಕ್ವಾರಂಟೈನ್‌

ಸಾರಾಂಶ

ಅಜ್ಜಾವರದಲ್ಲಿ ಕಳೆದವಾರ ಕೊರೋನಾ ಪಾಸಿಟಿವ್‌ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಆತನ ಮನೆಯವರ ಸಂಪರ್ಕದಲ್ಲಿದ್ದರೆಂಬ ಕಾರಣಕ್ಕೆ ಗ್ರಾ.ಪಂ. ಅಧ್ಯಕ್ಷೆ, ಪಿಡಿಒ ಸಹಿತ ಒಟ್ಟು 44 ಮಂದಿಗೆ ಹೋಂಕ್ವಾರಂಟೈನ್‌ನಲ್ಲಿ ಇಡಲಾಗಿದೆ.  

ಮಂಗಳೂರು(ಏ.09): ಅಜ್ಜಾವರದಲ್ಲಿ ಕಳೆದವಾರ ಕೊರೋನಾ ಪಾಸಿಟಿವ್‌ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಆತನ ಮನೆಯವರ ಸಂಪರ್ಕದಲ್ಲಿದ್ದರೆಂಬ ಕಾರಣಕ್ಕೆ ಗ್ರಾ.ಪಂ. ಅಧ್ಯಕ್ಷೆ, ಪಿಡಿಒ ಸಹಿತ ಒಟ್ಟು 44 ಮಂದಿಗೆ ಹೋಂಕ್ವಾರಂಟೈನ್‌ನಲ್ಲಿ ಇಡಲಾಗಿದೆ.

ವೈರಸ್‌ ಸೋಕಿತ ವ್ಯಕ್ತಿಯ ಸಹೋದರ ಪಂಚಾಯಿತಿಯಲ್ಲಿ ನಡೆದ ಕೊರೊನಾ ರಕ್ಷಣಾ ಕಾರ್ಯಪಡೆಯ ಸಭೆಯಲ್ಲಿ ಭಾಗವಹಿಸಿದ್ದರು. ಹೀಗಾಗಿ ಅವರನ್ನು ಕ್ವಾರೆಂಟೈನ್‌ಗೆ ಒಳಪಡಿಸಲು ನಿರ್ಧರಿಸಲಾಗಿದೆ.

ಮೂತ್ರದ ಬಾಟಲ್‌ ಎಸೆದು ತಬ್ಲೀಘಿ ಸದಸ್ಯರ ವಿಕೃತಿ!

ಆದ್ದರಿಂದ ಸೆಕೆಂಡರಿ ಕ್ವಾರಂಟೈನ್‌ ನೆಲೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಗ್ರಾ.ಪಂ. ಅಧ್ಯಕ್ಷೆ, ಪಿಡಿಒ, ಎಂಟು ಮಂದಿ ಸದಸ್ಯರು ಸೇರಿ ಇದೀಗ 44 ಮಂದಿಯನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ತಿಳಿಸಿದ್ದಾರೆ.

PREV
click me!

Recommended Stories

ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ; ಪ್ರೌಢಶಾಲೆಗೆ ನುಗ್ಗಿ ಪ್ರಾಂಶುಪಾಲನಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು!
ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!