ಬಿಡಿಒ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದ ವ್ಯಕ್ತಿಯೋರ್ವನಿಗೆ ಕೊರೋನಾ ಸೋಂಕು ದೃಢ| ಅದೇ ಕ್ವಾರ್ಟರ್ಸ್‌ನಲ್ಲಿ ವಾಸವಾಗಿರುವ ಉಪಮುಖ್ಯಮಂತ್ರಿಗಳ ಆಪ್ತ ಸಹಾಯಕನಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಮನೆಯಲ್ಲಿಯೇ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ| ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣ|
ಬಾಗಲಕೋಟೆ(ಜು.06):ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಆಪ್ತ ಸಹಾಯಕನಾಗಿ ಸ್ವಕ್ಷೇತ್ರ ಮುಧೋಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಮುಧೋಳ ನಗರದ ಬಿಡಿಒ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದ ವ್ಯಕ್ತಿಯೋರ್ವನಿಗೆ ಕೊರೋನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅದೇ ಕ್ವಾರ್ಟರ್ಸ್‌ನಲ್ಲಿ ವಾಸವಾಗಿರುವ ಉಪಮುಖ್ಯಮಂತ್ರಿಗಳ ಆಪ್ತ ಸಹಾಯಕನಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಮನೆಯಲ್ಲಿಯೇ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.
ಬಾಗಲಕೋಟೆ: ಆಹಾರದಲ್ಲಿ ಹುಳು ಕಂಡು ದಂಗಾದ ಕ್ವಾರಂಟೈನ್ ಜನ..!
ಕಳೆದ ಐದಾರು ದಿನಗಳಿಂದ ಕ್ವಾರಂಟೈನ್‌ನಲ್ಲಿರುವ ಡಿಸಿಎಂ ಆಪ್ತ ಸಹಾಯಕನ ಗಂಟಲು ದ್ರವ ಪರೀಕ್ಷೆಗಾಗಿ ಕಳಿಸಲಾಗಿದ್ದು ವರದಿ ಇನ್ನೂ ಬರಬೇಕಿದೆ. ಆಪ್ತ ಸಹಾಯಕ ಕಾರ್ಯನಿರ್ವಹಿಸುತ್ತಿದ್ದ ತಾಪಂ ಕಚೇರಿಯನ್ನು ಸಹ ಸೀಲ್‌ಡೌನ್ ಮಾಡಲಾಗಿದೆ.