ಮುಂದಿನ ದಿನದಲ್ಲಿ ಗಂಗಾಮತ ಸಮಾಜದ ಮಕ್ಕಳ ಹಿತದೃಷ್ಟಿಯಿಂದ ಎಸ್ ಟಿ ಸ್ಥಾನಮಾನ ಕಲ್ಪಿಸುವಂತೆ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಗುತ್ತಲ (ಜ.15): ಮುಂದಿನ ದಿನದಲ್ಲಿ ಗಂಗಾಮತ ಸಮಾಜದ ಮಕ್ಕಳ ಹಿತದೃಷ್ಟಿಯಿಂದ ಎಸ್ ಟಿ ಸ್ಥಾನಮಾನ ಕಲ್ಪಿಸುವಂತೆ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಸಮೀಪದ ನರಸೀಪುರದ ನಿಜಶರಣ ಅಂಬಿಗರ ಚೌಡಯ್ಯನವರ ಪೀಠದಲ್ಲಿ ಆಯೋಜಿಸಿರುವ 7ನೇ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಮಂಗಳವಾರ ಗಂಗಾರತಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗಂಗಾಮತ ಸಮಾಜದ ಜನರಲ್ಲಿ ಹೃದಯ ವೈಶ್ಯಾಲತೆ ಇದೆ. ಸಮಾಜದ ಅಂಕುಡೊಂಕು ತಿದ್ದುವ ನೇರ ನಿಷ್ಠರ ಅಂಬಿಗರ ಚೌಡಯ್ಯನವರಿಗೆ ನಿಜ ಶರಣ ಎಂದು ಕರೆದವರು ವಿಶ್ವಗುರು ಬಸವಣ್ಣವರು ಎಂದರು.
ಗಂಗಾಮತ ಸಮಾಜದ ಮಕ್ಕಳಿಗೆ ಉತ್ತಮ ಶಿಕ್ಷಣ ಸಂಸ್ಕಾರ ಲಭಿಸುತ್ತಿದ್ದು, ಬಡತನ ನಿರ್ಮೂಲನೆಯಾಗಿ ಸದೃಢ ಸಮಾಜ ನಿರ್ಮಾಣವಾಗುತ್ತಿದೆ. ನಾಡಿನ ಬೆನ್ನೆಲುಬಾದ ರೈತನಿಗೆ ಸಮೃದ್ಧಿಯಾದ ಜೀವನ ಭಗವಂತ ಕರುಣಿಸಲಿ ಎಂದರು. ಮಠದ ಅಭಿವೃದ್ಧಿಗೆ ಭಕ್ತರು ಸೇರಿ ಒಗ್ಗಟ್ಟಿನಿಂದ ದುಡಿಯೋಣ ಎಂದು ಕರೆ ನೀಡಿದರು. ಈ ವೇಳೆ ಅಂಬಿಗರ ಚೌಡಯ್ಯನವರ ಪೀಠಾಧ್ಯಕ್ಷ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ವಿಪ ಸದಸ್ಯ ಎನ್.ರವಿಕುಮಾರ, ಮಾಜಿ ಸಚಿವ ಪ್ರಮೋದ ಮಧ್ವರಾಜ, ಶಾಸಕ ಕೃಷ್ಣ ನಾಯ್ಕ, ಮಾಜಿ ಶಾಸಕ ಅರುಣಕುಮಾರ ಪೂಜಾರ ಇತರರು ಇದ್ದರು.
3 ತಿಂಗ್ಳಳಲ್ಲಿ ಸಿದ್ದರಾಮಯ್ಯ ರಾಜೀನಾಮೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಲ್ಲಿಯೇ ಯುದ್ಧ ನಡೆಯುತ್ತಿದೆ. ಇದು ಸಿದ್ದು ವರ್ಸಸ್ ಯುದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ ವ್ಯಂಗ್ಯವಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಅವರ ಪಕ್ಷದಲ್ಲಿ ಅನೇಕ ಶಾಸಕರು ಮತ್ತು ನಾಯಕರಿಗೆ ಇಷ್ಟವಿಲ್ಲ. ಒಂದು ರೀತಿಯಲ್ಲಿ ಮುಖ್ಯಮಂತ್ರಿ ವಿರುದ್ಧವೇ ಆ ಕಾಂಗ್ರೆಸ್ ಪಕ್ಷದಲ್ಲಿ ಯುದ್ಧ ಆರಂಭವಾಗಿದೆ ಎಂದರು.
ಸಾವಿನ ಭಾಗ್ಯವನ್ನೇ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ: ಬಿ.ವೈ.ವಿಜಯೇಂದ್ರ ಆಕ್ರೋಶ
ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಆಪಕ್ಷದಲ್ಲಿ ಪ್ರಯತ್ನ ಆರಂಭವಾಗಿದೆ. ಅವರಿಗೆ ಸಿಎಂ ಪಟ್ಟ ಬಿಟ್ಟುಕೊಡಲು ಇಷ್ಟವಿಲ್ಲ. ಅವರದೇ ಪಕ್ಷದವರಿಗೆ ಅವರು ಮುಂದುವರೆಯಲು ಇಷ್ಟವಿಲ್ಲ. ಹೀಗಾಗಿ ಅಧಿಕಾರ ಕಳೆದುಕೊಳ್ಳುತ್ತಿರುವ ಭೀತಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ವಿದೇಶ ಪ್ರವಾಸದಲ್ಲಿ ಇರುವ ವೇಳೆಯ ಲ್ಲಿಯೇ ಔತಣಕೂಟದ ನೆಪದಲ್ಲಿ ಕೆಲವು ಶಾಸಕ ರುಗಳ ಗುಪ್ತ ಸಭೆ ನಡೆಸಿ ತಮ್ಮ ಉಳಿವಿಗೆ ಪ್ರತಿತಂತ್ರ ರೂಪಿಸುವ ಯತ್ನ ನಡೆಸಿದ್ದಾರೆ. ಒಟ್ಟಾರೆ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಜಗಜ್ಜಾಹೀರಾಗಿದೆ ಎಂದು ಹೇಳಿದರು.