Davanagere: ಗ್ರಾಮ ವಾಸ್ತವ್ಯದಿಂದ ಜನರಿಗೆ ಸೌಲಭ್ಯ: ಶಾಸಕ ರೇಣುಕಾಚಾರ್ಯ

By Govindaraj S  |  First Published Dec 18, 2022, 9:29 PM IST

ತಿಂಗಳಿಗೆ ಎರಡು ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಾಲೂಕು ಮಟ್ಟದ ಅಧಿಕಾರಿಗಳನ್ನು ಗ್ರಾಮಗಳಿಗೆ ತೆರಳುವಂತೆ ಮಾಡಿ ಸಾಮಾನ್ಯ ಜನರ ಸೌಲತ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂಬ ಗ್ರಾಮವಾಸ್ತವ್ಯ ಕಾರ್ಯಕ್ರಮಗಳ ಮೂಲಕ ಮಾಡಲಾಗುತ್ತಿದೆ .


ಹೊನ್ನಾಳಿ (ಡಿ.18): ತಿಂಗಳಿಗೆ ಎರಡು ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಾಲೂಕು ಮಟ್ಟದ ಅಧಿಕಾರಿಗಳನ್ನು ಗ್ರಾಮಗಳಿಗೆ ತೆರಳುವಂತೆ ಮಾಡಿ ಸಾಮಾನ್ಯ ಜನರ ಸೌಲತ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂಬ ಗ್ರಾಮವಾಸ್ತವ್ಯ ಕಾರ್ಯಕ್ರಮಗಳ ಮೂಲಕ ಮಾಡಲಾಗುತ್ತಿದೆ ಎಂದು ಸಿ.ಎಂ. ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ತಾಲೂಕಿನ ಬೀರಗೊಂಡನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗ್ರಾಮವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ, ನಂತರ ಅರ್ಹ ಫಲಾನುಭಗಳಿಗೆ ಸೌಲಭ್ಯಗಳ ಪ್ರಮಾಣಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

ಗ್ರಾಮವಾಸ್ತವ್ಯ ಕಾರ್ಯಕ್ರಮ ಮಾಡಿ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕಕೊಂಡರೆ ಇದನ್ನು ಸಹಿಸದ ರಾಜಕೀಯ ವಿರೋಧಿಗಳು ಗ್ರಾಮ ವಾಸ್ತವ್ಯದ ಹೆಸರಿನಲ್ಲಿ ಶಾಸಕರು ಮೋಜುಮಸ್ತಿ ಮಾಡುತ್ತಾರೆ ಎಂದು ಟೀಕಿಸುತ್ತಿದ್ದಾರೆ. ಇದಕ್ಕೆ ಜನರು ತಕ್ಕ ಉತ್ತರ ಕೊಡುತ್ತಾರೆ ಎಂದು ಹೇಳಿದರು. ನಾನು ಸದಾ ಜನರ ಬಳಿ ತೆರಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವ ಗುಣ ಹೊಂದಿದ್ದೇನೆ. ಅವಳಿ ತಾಲೂಕುಗಳನ್ನು ಸಮಗ್ರ ಅಭಿವೃದ್ಧಿಯತ್ತ ತೆಗೆದುಕೊಂಡು ಹೋಗುತ್ತಿದ್ದೇನೆ. ತಾ.ಪಂ. ಇಒ ಮತ್ತು ತಹಸೀಲ್ದಾರ್‌ ನನ್ನ ಕಾರ್ಯ ವೈಖರಿಯನ್ನು ಗಮನಿಸಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಶಾಸಕರು ವಿಶ್ರಾಂತಿ ರಹಿತ ಕಾರ್ಯ ಮಾಡುತ್ತಿದ್ದಾರೆ ಎಂದು ಹೇಳಿದರು. 

Tap to resize

Latest Videos

Davanagere: ಅನುಕಂಪದ ರಾಜಕಾರಣ ನನಗೆ ಅಗತ್ಯವಿಲ್ಲ: ಶಾಸಕ ರೇಣುಕಾಚಾರ್ಯ

ಇಒ ರಾಮಾಭೋವಿ ಮತ್ತು ತಹಸೀಲ್ದಾರ್‌ ರಶ್ಮಿ ಸಂಪೂರ್ಣ ಶಾಸಕರ ಕೈಗೊಂಬೆಯಾಗಿದ್ದಾರೆ ಎಂದು ರಾಜಕೀಯ ವಿರೋಧಿಗಳು ಆರೋಪ ಮಾಡುತ್ತಾರೆ ಎಂದು ಹೇಳಿದರು. ಹೊನ್ನಾಳಿ ಪಟ್ಟಣದ ಸಮೀಪ ಹರಿಯುತ್ತಿರುವ ತುಂಗಭದ್ರಾ ನದಿಗೆ ಸೇತುವೆ ನಿರ್ಮಾಣಮಾಡಿದ್ದು, 100 ಹಾಸಿಗೆ ಆಸ್ಪತ್ರೆ ಸ್ಥಾಪನೆ, ಅವಳಿ ತಾಲೂಕುಗಳ ಎಲ್ಲಾ ಕೆರೆಗಳಿಗೆ ನದಿಯಿಂದ ನೀರು ತುಂಬಿಸುವ ಕೆಲಸ ಸರಿದಂತೆ ಕಳೆದ 2 ವರ್ಷಗಳಲ್ಲಿ 1700ಕೋಟಿ ರು. ಅನುದಾನದ ಬಹು ದೊಡ್ಡ ಸಾಧನೆ ಜನರ ಕಣ್ಮುಂದೆ ಇದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮಾತನಾಡಿ, ಸರ್ಕಾರದ ನೂತನ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಈ ಕಾರ್ಯಕ್ರಮದಿಂದ ಅಧಿಕಾರಿಗಳು ಹಳ್ಳಿಗಳ ಕಡೆ ತೆರಳಿ ಹಳ್ಳಿ ಜೀವನ ಹೇಗಿರುತ್ತದೆ ಎಂದು ತಿಳಿದುಕೊಳ್ಳುವಂತಾಗಿದೆ. 

ಜನಪರ ಯೋಜನೆಗಳ ಕಾಂಗ್ರೆಸ್‌ ಏಕೆ ತಂದಿಲ್ಲ: ಶಾಸಕ ರೇಣುಕಾಚಾರ್ಯ

ಸ್ಥಳದಲ್ಲಿಯೇ ಜನರ ಬೇಡಿಕೆಗಳನ್ನು ಈಡೇರಿಸಿ ಸೌಲತ್ತುಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಗ್ರಾ.ಪಂ. ಅಧ್ಯಕ್ಷೆ ಕವಿತಾ ಮಾತನಾಡಿ ಗ್ರಾಮದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ತಿಳಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಲೋಹಿತನಾಯ್ಕ, ಬಗರ್‌ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಕೆ.ಇ. ನಾಗರಾಜ್‌, ಸದಸ್ಯರಾದ ಶಾಂತರಾಜ್‌, ಮಹಾಂತೇಶ್‌, ಜಿಲ್ಲಾ ಮಟ್ಟದ ಅಧಿಕಾರಿಗಳು, ಗ್ರಾಪಂ ಸದಸ್ಯರು ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಧ್ಯಾ ಸುರಕ್ಷಾ ಯೋಜನಡಿಯಲ್ಲಿ 6, ಇಂದಿರಾಗಾಂಧಿ ವೃದ್ಧಾಪ್ಯ ವೇತನ 28, ಅಂಗವಿಕಲ ವೇತನ 1, ವಿಧವಾ ವೇತನ 3, ಮನಸ್ವಿನಿ ವೇತನ 3, ಪೌತಿಖಾತೆ 4, ಬಗರ್‌ಹುಕುಂ ಸಾಗುವಳಿ 13, 94ಸಿಅಡಿ ಹಕ್ಕುಪತ್ರ 7, ಆಧಾರ ನೋಂದಣಿ ತಿದ್ದುಪಡಿ 48, ದನದ ಕೊಟ್ಟಿಗೆ ನಿರ್ಮಾಣ ಆದೇಶ ಪ್ರತಿ 14 ಸೇರಿದಂತೆ ಒಟ್ಟು 129 ಜನರಿಗೆ ಸರ್ಕಾರದ ಸೌಲಭ್ಯಗಳ ಆದೇಶ ಪತ್ರಗಳನ್ನು ಇದೆ ಸಂದರ್ಭದಲ್ಲಿ ವಿತರಿಸಲಾಯಿತು. ಇದಕ್ಕೂ ಮುನ್ನ ಗ್ರಾಮದಲ್ಲಿ ಪೂರ್ಣಕುಂಭ ಹೊತ್ತ ಮಹಿಳೆಯರು ಶಾಸಕರಿಗೆ ಆದ್ದೋರಿ ಸ್ವಾಗತ ನೀಡಿದರು.

click me!