ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ತಾಯಿ ಮಗ ಸ್ಥಳದಲ್ಲೇ ಸಾವು!

Published : Aug 12, 2023, 07:02 PM IST
ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ತಾಯಿ ಮಗ ಸ್ಥಳದಲ್ಲೇ ಸಾವು!

ಸಾರಾಂಶ

ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮುದ್ರೆಮನೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತೋರ್ವರಿಗೆ ಗಂಭೀರ ಪೆಟ್ಟಾಗಿದೆ.

ಚಿಕ್ಕಮಗಳೂರು (ಆ.12): ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮುದ್ರೆಮನೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತೋರ್ವರಿಗೆ ಗಂಭೀರ ಪೆಟ್ಟಾಗಿದೆ. ಸಕಲೇಶಪುರದಿಂದ ಮೂಡಿಗೆರೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ  ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿದೆ. 

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು ಮೂಲದ ತಾಯಿ ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಂದೆ ಗಂಭೀರ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗುತ್ತಿದೆ.  ಮೃತರನ್ನು ಪೂಜಾ ಹಿರೇಮಠ್ (42 ವರ್ಷ) ಹಾಗೂ ಅವರ ಪುತ್ರ ನಿರಂಜನ (12ವರ್ಷ) ಎಂದು ಗುರುತಿಸಲಾಗಿದೆ. 

ಬಾಗಲಕೋಟೆಯಲ್ಲಿ ರಾಜ್ಯಮಟ್ಟದ ಮನೋವೈದ್ಯರ ಸಮ್ಮೇಳನ: 300ಕ್ಕೂ ಅಧಿಕ ಮನೋವೈದ್ಯರು ಭಾಗಿ!

ಕಾರು ಚಲಾಯಿಸುತ್ತಿದ್ದ ಶಿವಯೋಗಯ್ಯ ಹಿರೇಮಠ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಕಳದ ಜ್ಞಾನಸುಧ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿರುವ ತಮ್ಮ ಹಿರಿಯ ಮಗನನ್ನು ನೋಡಲು ಹೋಗಿ ಬೆಂಗಳೂರಿಗೆ ಹಿಂದಿರುಗುತ್ತಿದ್ದರು ಎಂದು ತಿಳಿದುಬಂದಿದೆ.  ಶಿವಯೋಗಯ್ಯ ಬೆಂಗಳೂರಿನ ರಿಲಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

PREV
Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ