ಹೊಸಕೋಟೆ- ದೊಡ್ಡಬಳ್ಳಾಪುರ ರಸ್ತೆಯಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಗುದ್ದಿ ಪಲ್ಟಿ ಹೊಡೆದ ಕಾರು

By Sathish Kumar KH  |  First Published Oct 15, 2023, 4:27 PM IST

ಬೆಂಗಳೂರು ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಗುದ್ದಿ ಭೀಕರವಾಗಿ ಅಪಘಾತ ಸಂಭವಿಸಿದೆ. ಕಾರು ಶೇ.60ಕ್ಕೂ ಅಧಿಕ ನಜ್ಜುಗುಜ್ಜಾಗಿದ್ದರೂ ಕಾರಿನಲ್ಲಿದ್ದ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಬೆಂಗಳೂರು (ಅ.15): ಬೆಂಗಳೂರು ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ಕಾರು ಡಿವೈಡರ್‌ಗೆ ಗುದ್ದಿ ಭೀಕರವಾಗಿ ಅಪಘಾತ ಸಂಭವಿಸಿದೆ. ಕಾರು ಶೇ.60ಕ್ಕೂ ಅಧಿಕ ನಜ್ಜುಗುಜ್ಜಾಗಿದ್ದರೂ ಕಾರಿನಲ್ಲಿದ್ದ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ಚಾಲಕನ ಅಜಾಗರೂಕತೆಯಿಂದಾಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ನಂತರ ಪಲ್ಟಿಯಾಗಿ ಮೂರ್ನಾಲ್ಕು ಬಾರಿ ಉರುಳಿದ್ದು, ಇದರಿಂದಾಗಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Tap to resize

Latest Videos

undefined

ಬೆಂಗಳೂರಲ್ಲಿ ನಾಯಿದು ಕಬಾಬ್‌, ನಾಯಿದು ಮಂಚೂರಿ ಮಾರಾಟ: ಈ ಹೋಟೆಲ್‌ಗೆ ಹೋಗೋ ಮುನ್ನ ಎಚ್ಚರ!

ದೊಡ್ಡಬಳ್ಳಾಪುರ ಹೊಸಕೋಟೆ ಫ್ಲೈ ಓವರ್ ನಲ್ಲಿ ಅಪಘಾತ ಸಂಭವಿಸಿದೆ. ಅದೃಷ್ಟಾವತ್ ಕಾರಿನಲ್ಲಿದ್ದ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಡಿವೈಡರ್‌ಗೆ ಗುದ್ದಿದ ತಕ್ಷಣವೇ ಕಾರಿನಲ್ಲಿದ್ದ ಜೀವ ರಕ್ಷಕ ಏರ್‌ ಬ್ಯಾಗ್‌ ತೆರೆದುಕೊಂಡಿದ್ದರಿಂದ ಜೀವ ಉಳಿದಿದೆ ಎಂದು ಹೇಳಲಾಗುತ್ತಿದೆ. ಇನ್ನು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳ ಭೇಟಿ ಮಾಡಿ ಬ್ಯಾರಿಕೇಡ್‌ ಅಳವಡಿಸಿ ಇತರೆ ವಾಹನ ಸವಾರರಿಗೆ ಒಂದು ಬದಿಯಲ್ಲಿ ಸಂಚಾರ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

click me!