ಏಕಾದಶಿ ದಿನವೇ ಚಿತ್ರದುರ್ಗದ ಬಳಿ ಬಸ್-ಲಾರಿ ನಡುವೆ ಭೀಕರ ಅಪಘಾತ: ಸಾವು ನೋವು ಎಷ್ಟು?

Published : Oct 22, 2026, 02:27 PM IST
KSRTC bus accident in Chitradurga

ಸಾರಾಂಶ

Chitradurga Accident: ಚಿತ್ರದುರ್ಗದ ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ

ಚಿತ್ರದುರ್ಗ (ಅ.22) ಕೆಎಸ್‌ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ ಸಂಭವಿಸಿದ್ದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹದಿನೈದಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ನಡೆದಿದೆ.

ದುರಂತ ಘಟನೆಯಲ್ಲಿ ಗಾಯಗೊಂಡವರ ಪೈಕಿ ಐವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ:

ಮುಂದೆ ಹೋಗುತ್ತಿದ್ದ ಲಾರಿಗೆ ಸಾರಿಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಮೇಲ್ನೋಟಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ತಿಳಿದುಬಂದಿದೆ. ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಲಾರಿ ಅರ್ಧ ಭಾಗ ಬಸ್‌ನೊಳಗೆ ನುಗ್ಗಿ ಬಸ್‌ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸೀಟುಗಳು ಮುರಿದುಬಿದ್ದಿವೆ. ಅದೃಷ್ಟವಶಾತ್ ಸದ್ಯ ಯಾವುದೇ ಪ್ರಾಣಾಹಾನಿ ದಾಖಲಾಗಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ಸ್ಥಳ ಪರಿಶೀಲನೆ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನೆ ನಡೆದ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PREV
Read more Articles on
click me!

Recommended Stories

ಬೆಂಗಳೂರಿನ ಬೃಹತ್ ಫ್ಲೈಓವರ್ ಯೋಜನೆಗಳಿಗೆ ಬಿಗ್ ಟ್ವಿಸ್ಟ್, 6 ಕಾರಿಡಾರ್‌ಗಳಿಗೆ ಮರು ಟೆಂಡರ್, ಕಾರಣವೇನು?
'ಪ್ರೇಮದ ಊರಲಿ' ಹಾಡು ಹಾಡಿದ ಮಕ್ಕಳನ್ನ ಸನ್ಮಾನಿಸಿದ ಮಡಿಕೇರಿ ದಸರಾ ಸಾಂಸ್ಕೃತಿಕ ವೇದಿಕೆ, ಇತ್ತ 100 ಕೋಟಿ ಕ್ಲಬ್‌ ಸೇರಿದ ಸಿನಿಮಾ