ಹೊಸಕೋಟೆ : ಚುನಾವಣೆ ಹೊಸ್ತಿಲಲ್ಲೇ ಅಭ್ಯರ್ಥಿಗಳಿಗೆ ಶಾಕ್, ಎಂಟಿಬಿ ವಿರುದ್ಧ ಗಂಭೀರ ಆರೋಪ

By Suvarna News  |  First Published Dec 3, 2019, 11:24 AM IST

ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದೆ. ಇದೇ ವೇಳೆ ಹೊಸಕೋಟೆ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಶಾಕ್ ನೀಡಲಾಗಿದೆ. 


ಹೊಸಕೋಟೆ [ಡಿ03] :  ರಾಜ್ಯದಲ್ಲಿ ಉಪ ಚುನಾವಣೆ ನಡೆಯಲು ಇನ್ನೆರಡು ದಿನಗಳು ಮಾತ್ರವೇ ಬಾಕಿ ಉಳಿದಿದ್ದು, ಇದೇ ಸಂದರ್ಭದಲ್ಲಿ ಹೊಸಕೋಟೆ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳಿಗೆ ಗ್ರಾಮಸ್ಥರು ಶಾಕ್ ನೀಡಿದ್ದಾರೆ. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಈಸ್ತೂರಿನಲ್ಲಿರುವ ದಲಿತರು ಚುನಾವಣೆ ಬಹಿಷ್ಕಾರ ಮಾಡಿದ್ದಾರೆ. 

Latest Videos

undefined

ಈ ಊರಿನಲ್ಲಿ ಅಸ್ಪೃಶ್ಯತೆ ಎನ್ನುವುದು ಇನ್ನೂ ಕೂಡ ಜೀವಂತವಾಗಿದ್ದು, ಗ್ರಾಮದೇವತೆ ಹಬ್ಬದ ವಿಚಾರವಾಗಿ ಇಲ್ಲಿ ಸವರ್ಣೀಯರು ಹಾಗೂ ದಲಿತರ ನಡುವೆ ಗಲಾಟೆ ನಡೆದಿತ್ತು. ಇದೇ ಹಿನ್ನೆಲೆಯಲ್ಲಿ ಚುನಾವಣೆ ಬಹಿಷ್ಕಾರ ಮಾಡಿದ್ದಾರೆ. 

ಗಲಾಟೆ ಹಿನ್ನೆಲೆಯಲ್ಲಿ ಸವರ್ಣೀಯರಿಗೆ ಬೇಲ್ ರಿಜೆಕ್ಟ್ ಆದರೂ ಕೂಡ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳ ಬೆಂಬಲಕ್ಕೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ನಿಂತಿದ್ದಾರೆ ಎಂದು ಆರೋಪ ಮಾಡಿದ್ದು, ಪೊಲೀಸರು ಬೆಂಬಲ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಎಂಟಿಬಿ ನಾಗರಾಜ್ ದಲಿತ ಸಮುದಾಯಕ್ಕೆ ಯಾವುದೇ ರೀತಿಯ ಕಿಮ್ಮತ್ತನ್ನೂ ನಿಡುತ್ತಿಲ್ಲ. ಈ ನಿಟ್ಟಿನಲ್ಲಿ ಎಂಟಿಬಿ ನಾಗರಾಜ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯಾಯ ಸಿಗದೇ ಇದ್ದಲ್ಲಿ ವಿಧಾನಸೌಧದ ಮುಂದೆ ಆತ್ಮಹತ್ಯೆ ಎಚ್ಚರಿಕೆಯನ್ನೂ ನೀಡಿದ್ದಾರೆ. 

ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದ್ದು, 9 ರಂದು ಫಲಿತಾಂಶ ಪ್ರಕಟವಾಗಲಿದೆ.

click me!