ವ್ಯಾಕ್ಸಿನ್ ಕೊಡಿಸುವುದಾಗಿ ರಾತ್ರೋ ರಾತ್ರಿ 85 ಮಹಿಳೆಯರ ಸಾಗಾಟ

By Kannadaprabha NewsFirst Published Jun 30, 2021, 10:40 AM IST
Highlights
  • ವ್ಯಾಕ್ಸಿನ್ ಕೊಡಿಸುವುದಾಗಿ ರಾತ್ರೋರಾತ್ರಿ 85 ಮಹಿಳೆಯರ ಸಾಗಾಟ
  • ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ತಾಲೂಕಿನ ಕಾರ್ನಾಡು ಗ್ರಾಮದಲ್ಲಿ ಘಟನೆ
  • ಮಂಗಳೂರು ಹೊರವಲಯದ ಕಣಚೂರು ಆಸ್ಪತ್ರೆಗೆ ಸಾಗಾಟ

ಮಂಗಳೂರು (ಜೂ.30): ವ್ಯಾಕ್ಸಿನ್ ಕೊಡಿಸುವುದಾಗಿ ರಾತ್ರೋರಾತ್ರಿ 85 ಮಹಿಳೆಯರನ್ನು ಕರೆದೊಯ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ತಾಲೂಕಿನ ಕಾರ್ನಾಡು ಗ್ರಾಮದಲ್ಲಿ ನಡೆದಿದೆ. 

ಮಂಗಳೂರು ಹೊರವಲಯದ ಕಣಚೂರು ಆಸ್ಪತ್ರೆಗೆ ಸೋಮವಾರ ರಾತ್ರಿ ಕರೆದೊಯ್ದಿದ್ದು, ಇದರಿಂದ ಕಣಚೂರು ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆ ವಿರುದ್ಧ ದೂರು ದಾಖಲು ಮಾಡಲಾಗಿದೆ. 

ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಲ್ಲಿ ಪಾಲಿಕೆ ಎಡವಟ್ಟು, ನಗರ ಸಂಪೂರ್ಣ ತೆರೆಯೋದು ಡೌಟ್! .

ಕಾಲೇಜಿನ ಬಸ್ ನಲ್ಲಿ ಮಹಿಳೆಯರನ್ನು ತಮ್ಮ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆಯೇ ಗ್ರಾಮಸ್ಥರು ಪ್ರಶ್ನೆ ಮಾಡಿದ್ದು, ತಡರಾತ್ರಿ ಯಾವ ವ್ಯಾಕ್ಸಿನ್ ಕೊಡುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. 

ಸದ್ಯ ಈ ಸಂಬಂಧ ಚಾಲಕ ಪ್ರವೀಣ್, ಆಸ್ಪತ್ರೆ ಮ್ಯಾನೇಜರ್ ನವಾಜ್ ವಿರುದ್ಧ ದೂರು ದಾಖಲಾಗಿದೆ.  ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ. 

click me!