ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿಸಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ಕೊರೋನಾ ಚಿಕಿತ್ಸೆ ಶೇ 50 ಹಾಸಿಗೆಗಳನ್ನು ಕಡ್ಡಾಯವಾಗಿ ಮೀಸಲಿಡಬೇಕು, ಇಲ್ಲದಿದ್ದಲ್ಲಿ ಅಂತಹ ಆಸ್ಪತ್ರೆಗಳ ಕೆ.ಪಿ.ಎಂ.ಇ. ನೋಂದಣಿಯನ್ನು ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ.
ಉಡುಪಿ(ಜು.29): ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿಸಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ಕೊರೋನಾ ಚಿಕಿತ್ಸೆ ಶೇ 50 ಹಾಸಿಗೆಗಳನ್ನು ಕಡ್ಡಾಯವಾಗಿ ಮೀಸಲಿಡಬೇಕು, ಇಲ್ಲದಿದ್ದಲ್ಲಿ ಅಂತಹ ಆಸ್ಪತ್ರೆಗಳ ಕೆ.ಪಿ.ಎಂ.ಇ. ನೋಂದಣಿಯನ್ನು ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ.
ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿಸಿರುವ 20 ಆಸ್ಪತ್ರೆಗಳು ಮಾತ್ರವಲ್ಲದೇ ಇತರೆ ಖಾಸಗಿ ಆಸ್ಪತ್ರೆಗಳೂ ಸಹ ನಾಳೆಯಿಂದಲೇ ಹಾಸಿಗೆಗಳನ್ನು ಸಿದ್ದಪಡಿಸಿಟ್ಟುಕೊಂಡಿದ್ದು, ಜಿಲ್ಲಾಡಳಿತ ಕಳುಹಿಸುವ ಕೊರೋನಾ ರೋಗಿಗಳನ್ನು ತಕ್ಷಣದಲ್ಲೇ ದಾಖಲಿಸಿಕೊಳ್ಳಬೇಕು, ರೋಗಿವಂತಿಲ್ಲ , ನಿರಾಕರಿಸಿದ್ದಲ್ಲಿ ಸಾಂಕ್ರಮಿಕ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.
undefined
ಅತಿ ಹೆಚ್ಚು ಹುಲಿ; 2 ನೇ ಸ್ಥಾನದಲ್ಲಿರುವ ಕರ್ನಾಟಕ ಶೀಘ್ರವೇ ನಂ 1
ಜಿಲ್ಲೆಯ ಎಲ್ಲ ಖಾಸಗಿ ಆರೋಗ್ಯ ಸಂಸ್ಥೆಗಳು ತಮ್ಮಲ್ಲಿ ಬರುವ ಶೀತಜ್ವರ (ಐಎಲ್‌ಐ) ಮತ್ತು ಉಸಿರಾಟದ ತೊಂದರೆ (ಎಸ್‌ಎಎಆರ್‌ಐ ) ರೋಗಿಗಳ ಬಗ್ಗೆ ಆರೋಗ್ಯ ಇಲಾಕೆಗೆ ವರದಿ ಮಾಡಬೇಕು, ಇಲ್ಲದಿದ್ದಲ್ಲಿ ಅಂತಹ ಸಂಸ್ಥೆಗಳ ನೊಂದಣೆಯನ್ನು ರದ್ದುಗೊಳಿಸಲಾಗುವುದು ಕೆ.ಪಿ.ಎಂ.ಇ. ಜಿಲ್ಲಾ ಸಮಿತಿಯ ಅಧ್ಯಕ್ಷ, ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.